ಬೆಂಗಳೂರಿನಲ್ಲಿ ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ “ಬೆಳಕು”
Team Udayavani, Mar 23, 2022, 5:13 PM IST
ಬೆಂಗಳೂರು : ವಾಸ್ತವ್ಯ ಪ್ರಮಾಣ ಪತ್ರ (ಓಸಿ) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಲ್ಪಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಲು ನಿರ್ಧರಿಸಿದ್ದು, ಸುಮಾರು ಐದು ಲಕ್ಷ ಜನರ ಮನೆಯಲ್ಲಿ “ಬೆಳಕು” ಮೂಡಿಸುವ ಕಾರ್ಯಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್ ಇದೀಗ ಚಾಲನೆ ನೀಡಲಿದ್ದಾರೆ.
ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ನೆಪ ನೀಡಿ ಮನೆ, ವಸತಿ ಸಮುಚ್ಚಯಗಳಿಗೆ ಬಿಬಿಎಂಪಿ ವಾಸ್ತವ್ಯ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂಥ ಮನೆ ಹಾಗೂ ಫ್ಲಾಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದರು.ಇದರಿಂದ ಸುಮಾರು 5 ಲಕ್ಷಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ತೊಂದರೆಗೆ ಒಳಗಾಗಿದ್ದವು.
ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿತ್ತು. ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೆಲ್ಲದರ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿರುವ ಸುನೀಲ್ ಕುಮಾರ್ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದು, ವಾಸ್ತವ್ಯ ಪ್ರಮಾಣ ಪತ್ರ ಇಲ್ಲದೇ ಇರುವವರಿಗೂ ವಿದ್ಯುತ್ ಸಂಪರ್ಕ ನೀಡುವ ಪ್ರಸ್ತಾಪಕ್ಕೆ ಇಪ್ಪಿಗೆ ಪಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ಕಡತವನ್ನು ಮಾ.22 ರಂದು ಕೆಇಆರ್ ಸಿಗೆ ರವಾನೆ ಮಾಡಲಾಗಿದೆ. ಬುಧವಾರ ಸಚಿವರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಸಭೆಯನ್ನೂ ನಡೆಸಲಾಗಿದೆ.
ಬೆಳಕು ಯೋಜನೆಯ ರೀತಿ ನಗರ ಪ್ರದೇಶದ ವಿದ್ಯುತ್ ವಂಚಿತರಿಗೂ ಸಂಪರ್ಕ ಕಲ್ಪಿಸುವ ಮಹತ್ವದ ನಿರ್ಧಾರ ಇದಾಗಿದ್ದು ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.
ವಾಸ್ತವ್ಯ ಪ್ರಮಾಣಪತ್ರ ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ವಂಚಿತರಾದವರ ಬವಣೆಯ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಬೆಂಗಳೂರು ನಗರದ ಶಾಸಕರೂ ಮನವಿ ಸಲ್ಲಿಸಿದ್ದರು. ಓಸಿ ಇಲ್ಲದವರಿಗೂ ಸಂಪರ್ಕ ನೀಡುವ ಬಗ್ಗೆ ಸದ್ಯದಲ್ಲೇ ಸರಕಾರ ಆದೇಶ ಪ್ರಕಟಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.