ಕಾಂಗ್ರೆಸ್‌ಗೆ ಡಾ| ನಸೀರ್ ಅಹ್ಮದ್ ವಿದಾಯ
ಪಕ್ಷದ ನಡೆಯಿಂದ ಬೇಸತ್ತು ಈ ನಿರ್ಧಾರ
Team Udayavani, Mar 23, 2022, 5:23 PM IST
ದಾವಣಗೆರೆ: ಕಾಂಗ್ರೆಸ್ ನಡೆಯಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮೌಲಾನಾ ಆಜಾದ್ ಸಂಸ್ಥೆಯ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ| ಸಿ.ಆರ್. ನಸೀರ್ ಅಹ್ಮದ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೇಂದ್ರ ಮತ್ತು ರಾಜ್ಯದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಕೆಲವು ವಿಚಾರಗಳಲ್ಲಿ ಬೇಸರವಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ದಾವಣಗೆರೆ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರಿಗೆ ಇ-ಮೇಲ್ ಮೂಲಕ ರವಾನಿಸಿದ್ದೇನೆ. ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಬಗ್ಗೆ ಈವರೆಗೆ ನಿರ್ಧಾರ ಮಾಡಿಲ್ಲ ಎಂದರು.
ಮುಸ್ಲಿಮರು ಕೆಲವೇ ಪಕ್ಷಗಳಿಗೆ ಸೀಮಿತವಾಗಬಾರದು. ಎಲ್ಲ ರಾಜಕೀಯ ಪಕ್ಷಗಳಲ್ಲಿರಬೇಕು. ಆಗ ಮಾತ್ರ ಎಲ್ಲ ಪಕ್ಷಗಳಿಂದ ನಮ್ಮ ಸಮುದಾಯದ ಅಭಿವೃದ್ಧಿಗೆ ಸಹಕಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಗೀತ ಸಂಜೆ
ಗಾನಕೋಗಿಲೆ ದಿ| ಲತಾ ಮಂಗೇಶ್ಕರ್ ಸ್ಮರಣಾರ್ಥ ನಗರದ ಶಿವಯೋಗಿ ಮಂದಿರದಲ್ಲಿ ಸಂಗೀತ ಸಂಜೆ ಆಯೋಜಿಸಲಾಗುವುದು. ಈ ಕಾರ್ಯಕ್ರಮಕ್ಕೆ ಕಿಶೋರ್‌ಕುಮಾರ್ ಅವರ ಪುತ್ರ ಅಮಿತ್‌ಕುಮಾರ್, ಶಬ್ಬೀರ್ ಕುಮಾರ್, ಆಶಾ ಭೋಸ್ಲೆ ಅವರನ್ನು ಆಹ್ವಾನಿಸಲಾಗಿದೆ. ಅವರ ದಿನಾಂಕ ಅಂತಿಮಗೊಂಡ ನಂತರ ಕಾರ್ಯಕ್ರಮದ ದಿನಾಂಕ ನಿಗದಿಪಡಿಸಲಾಗುವುದು ಎಂದು ಡಾ| ಸಿ.ಆರ್. ನಸೀರ್ ಅಹ್ಮದ್ ತಿಳಿಸಿದರು.
ಮೌಲಾನಾ ಆಜಾದ್ ಸಂಸ್ಥೆಯಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪರೀಕ್ಷಾ ಪರಿಕರಗಳನ್ನು ವಿತರಿಸಲಾಗುವುದು. ಪ್ರತಿ ವರ್ಷ ಹತ್ತು ಸಾವಿರ ಮಕ್ಕಳಿಗೆ ಪರೀಕ್ಷಾ ಪರಿಕರಗಳನ್ನು ನೀಡಲಾಗುತ್ತಿದೆ. ಈ ಬಾರಿ ಸಹ ಮಕ್ಕಳಿಗೆ ಪರೀಕ್ಷಾ ಪರಿಕರಗಳನ್ನು ವಿತರಿಸಲಾಗುವುದು. ಮಾ. 28ರಂದು ವಿರಕ್ತ ಮಠದ ಬಸವಪ್ರಭು ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು. ಮೌಲಾನಾ ಆಜಾದ್ ಸಂಸ್ಥೆಯ ನಿರ್ದೇಶಕ ಬರ್ಕತ್ ಅಲಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.