ಮುಂದೆ ಗುರಿ ಇರಲಿ, ಹಿಂದೆ ಗುರು ಇರಲಿ: ಅರುಣಕುಮಾರ

Team Udayavani, Mar 23, 2022, 5:51 PM IST

25teacher

ತಾಳಿಕೋಟೆ: ವಿದ್ಯಾರ್ಥಿಯಾದವರು ತಮ್ಮ ವಿದ್ಯಾಭ್ಯಾಸದೊಂದಿಗೆ ಯಶಸ್ವಿಯಾಗಿ ಸಾಧನೆ ಮಾಡುತ್ತ ಮಹತ್ವದ ಗುರಿಯೊಂದನ್ನು ಇಟ್ಟುಕೊಂಡು ಹಿಂದೆ ಗುರಿವಿನ ಆಶೀರ್ವಾದದೊಂದಿಗೆ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ಬಸವನಬಾಗೇವಾಡಿ ಡಿಎಸ್‌ಪಿ ಅರುಣಕುಮಾರ ಕೋಳೂರ ಹೇಳಿದರು.

ಸ್ಥಳೀಯ ಎಸ್‌.ಎಸ್‌.ವಿದ್ಯಾ ಸಂಸ್ಥೆ ವತಿಯಿಂದ ನಡೆಸಿಕೊಂಡು ಬರಲಾಗುತ್ತಿರುವ 2021-22ನೇ ಸಾಲಿನ ಪ್ರಾಥಮಿಕ, ಪ್ರೌಢ, ಪಪೂ, ಬಿಪಿಎಡ್‌, ಡಿಎಚ್‌ಐ ಹಾಗೂ ಐಟಿಐ ಶಾಲಾ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಕೋರುವ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಆಸರೆ ಇಲ್ಲದೇ ಎಚ್‌.ಎಸ್‌. ಪಾಟೀಲರು ಬೃಹತ್‌ ಆಕಾರದ ಸಂಗಮಾರ್ಯ ವಿದ್ಯಾ ಸಂಸ್ಥೆಯನ್ನು ಕಟ್ಟಿಕೊಂಡು ಮುನ್ನಡೆದಿದ್ದಲ್ಲದೇ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಾ ಸಾಗಿರುವುದು ಶ್ಲಾಘನೀಯ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಯಾದವನು ಗುರಿ ಎಂಬುದನ್ನು ಇಟ್ಟುಕೊಂಡು ಮುನ್ನಡೆಯಬೇಕು. ಯಾವ ಗುರಿ ಇಟ್ಟುಕೊಂಡಿದ್ದೇವೆ ಎಂಬುದರ ಕುರಿತು ಕನಸನ್ನು ಕಾಣುತ್ತಿದ್ದರೆ ಅದು ನನಸಾಗುವದರಲ್ಲಿ ಯಾವ ಸಂಶಯವಿಲ್ಲವೆಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ. ಮಿರ್ಜಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಎಚ್‌. ಎಸ್‌.ಪಾಟೀಲರ ವಿದ್ಯಾ ಸಂಸ್ಥೆಯು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಗಳು ತಮ್ಮ ಮುಂದಿನ ಏಳಿಗೆಯ ಕನಸ್ಸನ್ನು ಕಾಣಬೇಕು ಇಲ್ಲದಿದ್ದರೆ ಮುಂದೆ ಬರಲು ಸಾಧ್ಯವಿಲ್ಲವೆಂದರು.

ಫೀರಾಪುರ ಸರ್ಕಾರಿ ಪ್ರೌಢ ಶಾಲೆ ಮುಖ್ಯಗುರು ಆರ್‌.ಬಿ. ದಮ್ಮೂರಮಠ ಮಾತನಾಡಿ, ಎಚ್‌.ಎಸ್‌. ಪಾಟೀಲ ಅವರ ಸಂಸ್ಥೆಯಲ್ಲಿ ಈ ಹಿಂದೆ ನನಗೆ ಕಲಿಯಲು ಅವಕಾಶ ಸಿಗಲಿಲ್ಲ. ಆದರೆ 4 ವರ್ಷ ವಿದ್ಯಾರ್ಥಿಗಳಿಗೆ ಕಲಿಸುವ ಅವಕಾಶ ಸಿಕ್ಕಿತ್ತೆಂದು ಹಿಂದಿನ ತಮ್ಮ ಸೇವೆ ಕುರಿತು ವಿವರಿಸಿದ ಅವರು, ಎಚ್‌.ಎಸ್‌. ಪಾಟೀಲ ಅವರ ತ್ಯಾಗ ಅವರಲ್ಲಿ ಅಡಗಿದೆ ಎಂದರೆ ತಪ್ಪಾಗಲಾರದು. ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್‌ ವಿತರಿಸಿದ್ದಲ್ಲದೇ ಆಹಾರ ಕಿಟ್‌ಗಳನ್ನು ವಿತರಿಸಿ ಮಾನವೀಯತೆ ತೋರಿದ್ದಾರೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‌.ಎಸ್‌. ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಚ್‌.ಎಸ್‌. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾವಂತರಾಗಿ ಬಾಳಿ ಬೆಳಗಬೇಕು. ಈ ಸಂಸ್ಥೆಯ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ತಮ್ಮ ಸಂಸ್ಥೆಯ ವತಿಯಿಂದ ನೀಡುವುದಾಗಿ ವಾಗ್ಧಾನ ಮಾಡಿದರು.

ಹಿರಿಯ ಪತ್ರಕರ್ತ ಜಿ.ಟಿ. ಘೋರ್ಪಡೆ, ಶಿಕ್ಷಕ ಎಸ್‌ .ವಿ. ಜಾಮಗೊಂಡಿ ಮಾತನಾಡಿದರು. ಖಾಸ್ಗೇತೇಶ್ವರ ಮಠದ ಉಸ್ತುವಾರಿ ವೇ.ಮುರುಘೇಶ ವಿರಕ್ತಮಠ ಅವರು ಸಾನ್ನಿದ್ಯ ವಹಿಸಿ ಆಶೀರ್ವಚನ ನೀಡಿದರು.

ಎಸ್‌.ಎಸ್‌.ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸಂತೋಷ ಪಾಟೀಲ, ಸರ್ವಜ್ಞ ವಿದ್ಯಾ ಪೀಠ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್‌.ಬಿ.ನಡುವಿನಮನಿ, ತಾಳಿಕೋಟೆ ಇಸಿಓ ಪಿ.ಎ.ಮುಲ್ಲಾ, ಬಿಆರ್‌ಸಿ ಕಾಶಿನಾಥ ಸಜ್ಜನ, ಸಿಆರ್‌ಸಿ ಸುರೇಶ ವಾಲಿಕಾರ, ಉರ್ದು ಸಿಆರ್‌ಸಿ ಎಚ್‌.ಬಿ.ಕೆಂಭಾವಿ, ವೈ.ಜೆ. ರಾಠೊಡ, ಅಶೋಕ ಕಟ್ಟಿ ಇದ್ದರು.

ಟಾಪ್ ನ್ಯೂಸ್

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.