ಕೊಂಕಣ ರೈಲ್ವೇ ವಿಲೀನ ಇಲ್ಲ; ಲೋಕಸಭೆಯಲ್ಲಿ ಮಾಹಿತಿ ನೀಡಿದ ಸರಕಾರ
Team Udayavani, Mar 24, 2022, 7:15 AM IST
ಹೊಸದಿಲ್ಲಿ: ಮಂಗಳೂರಿನಿಂದ ಮುಂಬಯಿಗೆ ಸಂಪರ್ಕ ಕಲ್ಪಿಸುವ ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇ ಜತೆಗೆ ವಿಲೀನ ಮಾಡುವ ಪ್ರಸ್ತಾವ ಇಲ್ಲವೆಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ.
ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ರಾವ್ ಸಾಹೇಬ್ ಪಾಟೀಲ್ ದನ್ವೆ ಈ ಮಾಹಿತಿ ನೀಡಿದ್ದಾರೆ.
“ಕೊಂಕಣ ರೈಲ್ವೇ ಕೇಂದ್ರ ಸರಕಾರದ ವ್ಯಾಪ್ತಿಯ ಒಂದು ಸಂಸ್ಥೆ. ಅದಕ್ಕೆ ಸರಕಾರ ಯಾವತ್ತೂ ನೆರವು ನೀಡುತ್ತದೆ. ಸದ್ಯದ ಮಟ್ಟಿಗೆ ಅದನ್ನು ಭಾರತೀಯ ರೈಲ್ವೇ ಜತೆಗೆ ವಿಲೀನಗೊಳಿಸುವ ಪ್ರಸ್ತಾವ ಇಲ್ಲ’ ಎಂದು ಹೇಳಿದ್ದಾರೆ.
741 ಕಿಲೋಮೀಟರ್ ಉದ್ದದ ಈ ರೈಲು ಮಾರ್ಗ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಪಶ್ಚಿಮ ಕರಾವಳಿಯ ಮೂಲಕ ಹಾದು ಹೋಗುತ್ತದೆ.
ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೇಯಲ್ಲಿ ವಿಲೀನಗೊಳಿಸುವ ಬಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ರೈಲ್ವೇ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಯಾಗಿ 2021ರ ಆಗಸ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ:ಮುಂಬೈ-ಅಹಮದಾಬಾದ್: ಬುಲೆಟ್ ರೈಲು ಯೋಜನೆಗೆ ಶೇ.89ರಷ್ಟು ಭೂಮಿ ಸ್ವಾಧೀನ: ಸಚಿವ ವೈಷ್ಣವ್
ಕೊಂಕಣ ರೈಲ್ವೇ ಕರಾವಳಿ ಕರ್ನಾಟಕದ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ, ಇತರ ರೈಲ್ವೇ ವಲಯಗಳಿಗೆ ಹೋಲಿಕೆ ಮಾಡಿದರೆ, ಕೊಂಕಣ ರೈಲ್ವೇ ಕರಾವಳಿ ಪ್ರದೇಶದ ಬೇಡಿಕೆ ಈಡೇರಿ ಸಲು ವಿಫಲವಾಗಿದೆ ಎಂದಿದ್ದರು. ರೈಲ್ವೇ ಬಳಕೆದಾರರೂ ಕೊಂಕಣ ರೈಲ್ವೇಯು ಕರಾವಳಿ ಪ್ರದೇಶದ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದರು.
ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ಸರಕಾರಗಳ ಸಹಭಾಗಿತ್ವದಲ್ಲಿ ಕೊಂಕಣ ರೈಲ್ವೇ ಅನ್ನು ಸ್ಥಾಪಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅದು ಸಾಲದ ಸುಳಿಗೂ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.