ಮಲ್ಲಾರು: ಗುಜರಿ ಅಂಗಡಿ ಸ್ಪೋಟ ಪ್ರಕರಣ; ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
Team Udayavani, Mar 24, 2022, 10:08 AM IST
ಕಾಪು: ಮಲ್ಲಾರು ಪಕೀರಣಕಟ್ಟೆಯ ಗುಜರಿ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.
ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್ ಮತ್ತು ಈರಪ್ಪ ಎಂಬವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ಗುಜರಿ ಅಂಗಡಿಯ ಪಾಲುದಾರ ರಜಬ್ ಬ್ಯಾರಿ ಚಂದ್ರನಗರ, ಮ್ಯಾನೇಜರ್ ರಜಬ್ ಅಲಿ ಮಲ್ಲಾರು ಸ್ಥಳದಲ್ಲೇ ಮೃತಪಟ್ಟಿದ್ದು, ನಯಾಜ್, ಈರಪ್ಪ ಸಹಿತ 5 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಗಾಯಾಳುಗಳ ಪೈಕಿ ಹಸನಬ್ಬ, ವೀರೇಶ್ ಮತ್ತು ಫಹೀಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಲಾಲಾಜಿ ಆರ್. ಮೆಂಡನ್
ಮಲ್ಲಾರು ಪಕೀರಣಕಟ್ಟೆಯ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಂಭವಿಸಿದ ಅಗ್ನಿ ದುರಂತ ಮತ್ತು ಅದರಿಂದ ಮೃತಪಟ್ಟ ಇಬ್ಬರಿಗೆ ಕೂಡಲೇ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ವಿಧಾನ ಸಭೆಯಲ್ಲಿ ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಘಟನೆಯಲ್ಲಿ ಗುಜರಿ ಅಂಗಡಿಯ ಪಾಲುದಾರ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಐದು ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳಿಗೆ ಸರಕಾರ ಉಚಿತ ಚಿಕಿತ್ಸೆ ನೀಡಬೇಕಿದೆ ಎಂದು ಅವರು ಒತ್ತಾಯಿಸಿದ್ದರು.
ಶಾಸಕರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕಾಪುವಿನ ಗುಜರಿ ಅಂಗಡಿಯಲ್ಲಿ ಅನಧಿಕೃತವಾಗಿ ಗ್ಯಾಸ್ ಕಟ್ಟರ್ ಬಳಸಿದ ಪರಿಣಾಮ ಸಿಲಿಂಡರ್ ಸ್ಪೋಟಗೊಂಡು ಅಗ್ನಿ ದುರಂತ ಸಂಭವಿಸಿದೆ. ಮೃತರು ಮತ್ತು ಗಾಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಇಲಾಖೆಯಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖಾ ವರದಿ ಆಧರಿಸಿ, ಮೃತರಿಗೆ ಪರಿಹಾರ ಮತ್ತು ಗಾಯಾಳುಗಳ ಉಚಿತ ಚಿಕಿತ್ಸೆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.