ಆಳಂದ ಘಟನೆ ಖಂಡಿಸಿ ಸಿಪಿಐ ಪ್ರತಿಭಟನೆ
Team Udayavani, Mar 24, 2022, 12:14 PM IST
ಆಳಂದ: 144ನೇ ಕಲಂ ನಿಷೇಧಾಜ್ಞೆ ನಡುವೆಯೂ ಶಿವರಾತ್ರಿ ದಿನದಂದು ಪಟ್ಟಣದಲ್ಲಿ ರಾಘವಚೈತನ್ಯ ಲಿಂಗದ ಶುದ್ಧೀಕರಣ, ಪೂಜೆ ನೆಪದಲ್ಲಿ ಗಲಭೆಗೆ ಕಾರಣರಾದ ಬಿಜೆಪಿ ಶಾಸಕರು, ಸಚಿವರು ಮತ್ತು ಬೆಂಬಲಿಗರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸಿಪಿಐ (ಎಂ) ಕಾರ್ಯಕರ್ತರು ಆಗ್ರಹಿಸಿದರು.
ಪಟ್ಟಣ ಹೊರವಲಯದ ತಾಲೂಕು ಆಡಳಿತ ಕಾರ್ಯಸೌಧದ ಎದುರು ಪಕ್ಷದ ತಾಲೂಕು ಕಾರ್ಯದರ್ಶಿ ಪಾಂಡುರಂಗ ಮಾವೀನಕರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಮಾತನಾಡಿ, ಆಳಂದ ಶಾಂತಿ, ಸೌಹಾರ್ದತೆಗೆ ಹೆಸರಾಗಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ಕೆಲವರು ಇದಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆಪಾದಿಸಿದರು.
ಜನರ ಕೈಗೆ ಕೆಲಸವಿಲ್ಲವಾಗಿದೆ. ನಿರುದ್ಯೋಗ ಹೆಚ್ಚುತ್ತಿದೆ. ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಜನತೆಯು ಆರ್ಥಿಕ ಸಂಕಷ್ಟದಲ್ಲಿದ್ದರೂ ಜನರ ಭಾವನೆ ಕೆರಳಿಸುವ ಕುತಂತ್ರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ 167 ಜನರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇದರಲ್ಲಿ ಅಮಾಯಕು, ವಿದ್ಯಾರ್ಥಿಗಳು, ಮಹಿಳೆಯರು ಇದ್ದಾರೆ. ಹೀಗೆ ಒಂದೇ ಸಮುದಾಯ ಗುರಿಯಾಗಿಸಿಕೊಂಡು ಬಂಧಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಸಿಪಿಐ (ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಪಾಂಡುರಂಗ ಮಾವೀನಕರ್, ಜಿಲ್ಲಾ ಮುಖಂಡ ಸುಧಾಮ ಧನ್ನಿ, ಪ್ರಕಾಶ ಜಾನಿ, ಭಾಗಣ್ಣಾ ದೇವನೂರ, ರೂಪಾ ಇಕ್ಕಳಕಿ, ಫಯಾಜ್ ಪಟೇಲ್, ಮಲ್ಲಮ್ಮಾ ಜಿಡಗಾ, ಅಶ್ವಿನಿ ಮಠಪತಿ, ಸರಸ್ವತಿ ಮತ್ತಿತರರು ಈ ಸಂದರ್ಭದಲ್ಲಿದ್ದರು. ತಹಶೀಲ್ದಾರ್ ಯಲ್ಲಪ್ಪ ಸುಬೇದಾರಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.