ಯೋಜನೆಗಳಲ್ಲಿ ಅಕ್ರಮ; ತನಿಖೆಗೆ ಜೆಡಿಎಸ್‌ ಒತ್ತಾಯ

Team Udayavani, Mar 24, 2022, 12:27 PM IST

6JDS

ಚಿಂಚೋಳಿ: ತಾಲೂಕು ಸಹಾಯಕ ಕೃಷಿ ಇಲಾಖೆಯಲ್ಲಿ ಸರ್ಕಾರ ರೈತರಿಗೋಸ್ಕರ ಅನುಷ್ಠಾನಗೊಳಿಸಿದ ವಿವಿಧ ಯೋಜನೆಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಅವುಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಜೆಡಿಎಸ್‌ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜೆಡಿಎಸ್‌ ಮುಖಂಡ ಸಂಜೀವನ್‌ ಯಾಕಾಪುರ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳಾದ ಕೃಷಿ ಹೊಂಡ ನಿರ್ಮಾಣ, ಕೃಷಿ ಭಾಗ್ಯ, ಎಸ್‌ ಸಿಪಿ, ಟಿಎಸ್‌ಪಿ ಯೋಜನೆ ಅಡಿ ರೈತರಿಗೆ ತಾಡಪತ್ರಿ ವಿತರಣೆ, ಸಿಂಕ್ಲರ್‌ ಪೈಪು ವಿತರಣೆ, ಕೃಷಿ ಯಂತ್ರೋಪರಣ, ಹಿಂಗಾರು ಮತ್ತು ಮುಂಗಾರು ಬಿತ್ತನೆ ಬೀಜಗಳ ವಿತರಣೆಯಲ್ಲಿ ಅನುದಾನದ ದುರ್ಬಳಕೆಯಾಗಿದ್ದು, ಈ ಕುರಿತು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಕಳೆದ ಎಂಟೊಂಬತ್ತು ತಿಂಗಳ ಹಿಂದೆ ಕೃಷಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ರವಿಶಂಕರ ಮುತ್ತಂಗಿ ಮಾತನಾಡಿ, ಕೃಷಿಹೊಂಡ, ಕೃಷಿಭಾಗ್ಯ, ಎಸ್‌ಸಿಪಿ, ಎಸ್‌ಸಿಪಿ ಯೋಜನೆಗಳಲ್ಲಿ ನಡೆದ ಎಲ್ಲ ಕಾಮಗಾರಿಗಳ ಸಮಗ್ರ ಜಿಪಿಆರ್‌ಎಸ್‌ ಪೋಟೋಗಳೊಂದಿಗೆ ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ತಾಲೂಕು ಕೃಷಿ ಇಲಾಖೆಯಲ್ಲೂ ಅನೇಕ ಅಕ್ರಮಗಳು ನಡೆದಿದ್ದು, ಸಹಾಯಕ ಕೃಷಿ ನಿರ್ದೇಶಕರು, ಕಲಬುರಗಿ ಜಂಟಿ ನಿರ್ದೇಶಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಜೆಡಿಎಸ್‌ ಮುಖಂಡ ನಿಯಾಜ ಅಲಿ ಮಾತನಾಡಿ, ತಾಲೂಕಿನ ದೋಟಿಕೊಳ, ರುಸ್ತಂಪುರ, ಖುದಾವಂದಪುರ ಗ್ರಾಮಗಳಲ್ಲಿ 2018ರಲ್ಲಿ ಸುಜಲಾ 2 ಯೋಜನೆ ಅಡಿಯಲ್ಲಿ ಎಲ್ಲ ಹಂತದ ಕಾಮಗಾರಿಗಳ ಕುರಿತು ಜಿಪಿಆರ್‌ ಎಸ್‌ ಪೋಟೋಗಳ ಸಮೇತ ತನಿಖೆ ನಡೆಬೇಕು. ಸುಜಲಾ 2 ಯೋಜನೆಗೆ ಬಿಡುಗಡೆಯಾದ 18ಕೋಟಿ ರೂ. ಕುರಿತು ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿವಿಧ ಬೇಡಿಕೆಗಳ ಮನವಿಪತ್ರವನ್ನು ತಹಶೀಲ್ದಾರ್‌ ಅಂಜುಮ ತಬಸುಮ, ಸೇಡಂ ಕೃಷಿ ಉಪ ಕಾರ್ಯದರ್ಶಿಗಳಿಗೆ ಸಲ್ಲಿಸಿದರು. ಮುಖಂಡರಾದ ಸುರೇಂದ್ರಕುಮಾರ ಕುಂಚಾವರಂ, ಗೌರಿಶಂಕರ ಸೂರವಾರ, ಶರಣಪ್ಪ ಮಾಳಗಿ, ವಿಷ್ಣುಕಾಂತ ಮೂಲಗೆ, ಹಣಮಂತ ಪೂಜಾರಿ, ರಾಹುಲ್‌ ಯಾಕಾಪುರ, ರವೀಂದ್ರ ಮಾಳಗಿ, ಕಲಾವತಿ ಕನಕಟ್ಟಿ, ನಾಗೀಂದ್ರಪ್ಪ ಗುರಂಪಳ್ಳಿ, ಅರವಿಂದ ಜೋತಗೊಂಡ, ಬಸವರಾಜ ಸಿರಸಿ, ಸನ್ನಿ ಜಾಬಶೆಟ್ಟಿ, ದವಲಪ್ಪ ಸುಣಗಾರ, ಕುಂಚಾವರಂ, ಚಿಮ್ಮನಚೋಡ, ಮಿರಿಯಾಣ, ಐನೋಳಿ, ದೇಗಲಮಡಿ, ಚಂದನಕೇರಾ, ಸುಲೇಪೇಟ, ಚಂದಾಪುರ ಇನ್ನಿತರ ಗ್ರಾಮಗಳಿಂದ ಜೆಡಿಎಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.