ವನಿತಾ ವಿಶ್ವಕಪ್: ಇಂಗ್ಲೆಂಡ್ ಗೆ ಭರ್ಜರಿ ಜಯ, ಭಾರತದ ಹಾದಿ ಕಠಿಣ, ವಿಂಡೀಸ್ ಗೆ ಮಳೆ ಲಾಭ

ಪಂದ್ಯ ರದ್ದು, ದಕ್ಷಿಣ ಆಫ್ರಿಕಾ ಸೆಮಿ ಫೈನಲ್ ಪ್ರವೇಶ

Team Udayavani, Mar 24, 2022, 2:51 PM IST

1-wewqewq

ವೆಲ್ಲಿಂಗ್ಟನ್ : ಐಸಿಸಿ ಮಹಿಳಾ ವಿಶ್ವಕಪ್ 2022 ರ ಅಂಕ ಪಟ್ಟಿಯಲ್ಲಿ ಮಿಥಾಲಿ ರಾಜ್ ನಾಯಕತ್ವದ ಟೀಮ್ ಇಂಡಿಯಾ ಐದನೇ ಸ್ಥಾನಕ್ಕೆ ಕುಸಿದಿದ್ದು, ಸೆಮಿ ಪ್ರವೇಶಕ್ಕೆ ಹಾದಿ ಕಠಿಣವಾಗಿದ್ದು, ಈಗಾಗಲೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿರುವ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಗುರುವಾರ  ನಡೆದ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಪಾಕಿಸ್ಥಾನದ ವಿರುದ್ಧ ಇಂಗ್ಲೆಂಡ್‌ 9  ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಭರ್ಜರಿ ರನ್ ರೇಟ್ ನೊಂದಿದೆ ನಾಲ್ಕನೇ ಸ್ಥಾನಕ್ಕೆ ಏರಿ, ಭಾರತವನ್ನು ಕೆಳಕ್ಕೆ ತಳ್ಳಿದೆ. ಭಾರತದ 0.768 ರನ್ ರೇಟ್ ಗೆ ಹೋಲಿಸಿದರೆ ಇಂಗ್ಲೆಂಡ್ 6  ಪಂದ್ಯಗಳಿಂದ 6  ಅಂಕಗಳೊಂದಿಗೆ 0.778 ನ ಉತ್ತಮ ರನ್ ರೇಟ್ ಪಡೆದಿದೆ.

ಇಂದಿನ  ಪಂದ್ಯದಲ್ಲಿ ಪಾಕ್ ಮಹಿಳೆಯರು 41.3 ಓವರ್ ಗಳಲ್ಲಿ 105 ರನ್ ಗಳಿಗೆ ಆಲೌಟ್ ಆದರು. ಸಣ್ಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ವನಿತೆಯರು 19.2 ಓವರ್ ಗಳಲ್ಲಿ 1 ವಿಕೆಟ್ ಮಾತ್ರ ಕಳೆದುಕೊಂಡು 107 ರನ್ ಗಳಿಸಿ 9 ವಿಕೆಟ್ ಗಳ ಅಮೋಘ ಗೆಲುವು ಸಾಧಿಸಿತು.

ಮಳೆಯಿಂದ ಪಂದ್ಯವೇ ರದ್ದು

ಇಂದು ನಡೆದ ನಿರ್ಣಾಯಕ ದ. ಆಫ್ರಿಕಾ-ವೆಸ್ಟ್‌ ಇಂಡೀಸ್‌ ನಡುವಿನ ಲೀಗ್‌ ಪಂದ್ಯದ ಫ‌ಲಿತಾಂಶ ಭಾರತದ ಪಾಲಿಗೆ ಕಹಿಯಾಯಿತು. ಮಳೆಯಿಂದಾಗಿ ಪಂದ್ಯ ಆರಂಭವಾಗಿ ಕೆಲ ಹೊತ್ತಿನಲ್ಲೇ ರದ್ದಾಗಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ದಕ್ಷಿಣ ಆಫ್ರಿಕಾ 10.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 61 ರನ್ ಗಳಿಸಿತ್ತು, ಈ ವೇಳೆ ಭಾರಿ ಮಳೆ ಸುರಿದು ಪಂದ್ಯವನ್ನು ರದ್ದು ಮಾಡಲಾಗಿದ್ದು, 6 ಪಂದ್ಯಗಳಲ್ಲಿ 4 ಗೆದ್ದಿರುವ ದಕ್ಷಿಣ ಆಫ್ರಿಕಾ 9 ಅಂಕ ಗಳೊಂದಿಗೆ +0.092 ರನ್ ರೇಟ್ ಹೊಂದಿ ಸೆಮಿ ಫೈನಲ್ ಪ್ರವೇಶ ಮಾಡಿದ ಎರಡನೇ ತಂಡವಾಗಿದೆ. ಆಸ್ಟ್ರೇಲಿಯಾ ಈಗಾಗಲೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ವೆಸ್ಟ್ ಇಂಡೀಸ್ ಗೆ ಮಳೆ ಲಾಭ

ಕೊನೆಯ ಲೀಗ್‌ ಪಂದ್ಯ ಆಡುತ್ತಿದ್ದ ರನ್‌ರೇಟ್‌ ಮೈನಸ್‌ನಲ್ಲಿದ್ದ ವಿಂಡೀಸ್‌ ಇಂದಿನ ಪಂದ್ಯ ಸೋತರೆ ಅಂಕ ಆರರಲ್ಲೇ ಉಳಿಯುತ್ತಿತ್ತು.ಆದರೆ ಪಂದ್ಯ ರದ್ದುಗೊಂಡು ಒಂದೊಂದು ಅಂಕಗಳನ್ನು ಹಂಚಿದ ಪರಿಣಾಮ ವಿಂಡೀಸ್ -0.890ರನ್ ರೇಟ್ ಹೊಂದಿ 7 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ರವಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಲೀಗ್‌ ಹಂತದ ಕಟ್ಟಕಡೆಯ ಪಂದ್ಯವನ್ನು ಭಾರತ ಆಡಲಿದ್ದು, ಸೆಮಿ ಪ್ರವೇಶಿಸಬೇಕಾದರೆ ಆ ಪಂದ್ಯವನ್ನು ಭಾರತ ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.