ಆರೋಗ್ಯ ಕೇಂದ್ರದ ಸುತ್ತ ಅನಾರೋಗ್ಯ ವಾತಾವರಣ: ಕೇಂದ್ರದ ಸುತ್ತಲೂ ಕುಡುಕರ ಹಾವಳಿ
ಎರಡು ತಿಂಗಳಿಂದ ಆರೋಗ್ಯ ಉಪಕೇಂದ್ರಕ್ಕೆ ಬೀಗ: ಕೇಂದ್ರದಲ್ಲಿರುವ 3 ಹುದ್ದೆ ಖಾಲಿ
Team Udayavani, Mar 24, 2022, 2:59 PM IST
ದೋಟಿಹಾಳ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಆರೋಗ್ಯಕ್ಕಾಗಿ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಲಾಗುತ್ತದೆ. ಅದು ಕೇವಲ ಕಾಗದದಲ್ಲಿ ಇದೆ. ಆದರೆ ಅದು ಸಾರ್ವಜನಿಕರ ಉಪಯೋಗಕ್ಕೆ ಮಾತ್ರ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ ಇಲ್ಲಿಯ ಗ್ರಾಮಸ್ಥರು.
ಸಮೀಪದ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗರ್ಜಿನಾಳ ಉಪ ಕೇಂದ್ರವಾದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಳೆದ ಒಂದುವರೆ ತಿಂಗಳಿಂದ ಬೀಗ ಹಾಕಿದ್ದು ಸಾರ್ವಜನಿಕರ ಸೂಕ್ತ ಚಿಕಿತ್ಸೆಯಿಲ್ಲದೆ ಪರದಾಡುವಂತಾಗಿದೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗರ್ಜಿನಾಳ ಗ್ರಾಮದಲ್ಲಿ ಸಾರ್ವಜನಿಕರಿಗೆ ಸಣ್ಣ ಪುಟ್ಟ ಕಾಯಿಲೆಗೆ ಚಿಕಿತ್ಸೆಯಿಲ್ಲದೆ ಪರದಾಡುವಂತಾಗಿದ್ದು, ಗ್ರಾಮದಲ್ಲಿ ಚಿಕ್ಕಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ, ಏನಾದರೂ ತೊಂದರೆಯಾದರೆ. ಹತ್ತು ಹದಿನೈದು ಕಿಲೋಮೀಟರ್ ದೂರದ ತಾವರಗೇರಾ ಸರಕಾರಿ ಆಸ್ಪತ್ರೆ ಹೋಗಬೇಕು. ರಾತ್ರಿ ಹೊತ್ತು ತೊಂದರೆಯಾದರೆ ಸಾರ್ವಜನಿಕರಿಗೆ ಕಷ್ಟವಾಗುತ್ತದೆ. ಈ ವೇಳೆ ಕೆಲವರು ಖಾಸಗಿ ವಾಹನದ ಮೂಲಕ ಚಿಕಿತ್ಸೆಗಾಗಿ ಹೋಗುತ್ತಾರೆ. ಬಡಕುಟುಂಬದಲ್ಲಿ ರಾತ್ರಿ ವೇಳೆ ಏನಾದರೂ ತೊಂದರೆಯಾದರೆ ಅವರ ಪಾಡು ಹೇಳತೀರದಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಕೇಂದ್ರದ ಬಾಗಿಲು ಹಾಕಿದ ಕಾರಣ ಸಾರ್ವಜನಿಕರು ಹಾಗೂ ಪಡ್ಡೆ ಹುಡುಗರು ಇದನ್ನೇ ತಮ್ಮ ತಾಣವಾಗಿ ಮಾಡಿಕೊಂಡಿರುವುದು ಕಂಡುಬರುತ್ತಿದೆ. ಆರೋಗ್ಯ ಇಲಾಖೆಯ ಸುತ್ತಲೂ ಅನಾರೋಗ್ಯದ ವಾತಾವರಣ ಕಂಡುಬರುತ್ತಿದೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಇದರ ಬಗ್ಗೆ ತಿಳುವಳಿಕೆ ನೀಡಬೇಕೆಂಬುದು ನಾಗರಿಕರ ಕಳಕಳಿಯಾಗಿದೆ.
ಇದನ್ನೂ ಓದಿ:ವಿಷಯವನ್ನು ಅತಿರಂಜಿತಗೊಳಿಸಬೇಡಿ…ಹಿಜಾಬ್ ಮೇಲ್ಮನವಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ
ಕೇಂದ್ರದಲ್ಲಿ ಮೂರು ಹುದ್ದೆಗಳಿದ್ದು, ಈ ಮೂರು ಹುದ್ದೆಗಳು ಸದ್ಯ ಖಾಲಿ ಇರುವದರಿಂದ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ. ಇದರ ಬಗ್ಗೆ ಮಾಹಿತಿಯಿದ್ದರೂ ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಬೇಕಾದ ಆರೋಗ್ಯ ಇಲಾಖೆಯವರು ಮೂಕಪ್ರೇಕ್ಷಕರಾಗಿ ಕುಳಿತಿರುವುದು ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ.
ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆ ಖಾಲಿ ಇದ್ದು, ಎ.ಎನ್.ಎಮ್ ಅವರು ಹೆರಿಗೆ ರಜೆ ಹೋದ ಕಾರಣ ಈ ಉಪಕೇಂದ್ರದಲ್ಲಿ ಯಾವುದೇ ಸಿಬ್ಬಂದಿಗಳು ಇಲ್ಲದ ಕಾರಣ ಕೇಂದ್ರಕ್ಕೆ ಬೀಗ ಹಾಕಲಾಗಿದೆ.
ಈ ಕೇಂದ್ರದ ವ್ಯಾಪ್ತಿಗೆ ಬರುವ ಹಳ್ಳಿಗರಲ್ಲಿ ಸಕ್ಕರೆ ಕಾಯಿಲೆ, ಮಧುಮೇಹ, ರಕ್ತದೊತ್ತಡ, ಕ್ಷಯರೋಗ, ಸೇರಿದಂತೆ ಇತರ ಕಾಯಿಲೆಗಳಿಂದ ಇರುವ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
ಗರ್ಜಿನಾಳ ಆರೋಗ್ಯ ಉಪಕೇಂದ್ರದ ಸಮಸ್ಯೆಯ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಲ್ಲಿ ಮೂರು ಹುದ್ದೆ ಖಾಲಿ ಇದ್ದರೆ, ವಾರದಲ್ಲಿ ಮೂರು ದಿನಗಳ ಕಾಲ ಬೇರೊಬ್ಬರನ್ನು ಅಲ್ಲಿಗೆ ಕಳಿಹಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆ. – ಡಾ.ಆನಂದ ಗೋಟೂರ ತಾಲೂಕು ಆರೋಗ್ಯಾಧಿಕಾರಿ ಕುಷ್ಟಗಿ
-ಮಲ್ಲಿಕಾರ್ಜುನ ಮೆದಿಕೇರಿ. ದೋಟಿಹಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.