ಸದನದಲ್ಲಿ ಮತ್ತೆ ಗದ್ದಲಕ್ಕೆ ಕಾರಣವಾದ ಪರೇಶ್ ಮೇಸ್ತಾ ಕೊಲೆ ಪ್ರಕರಣ
Team Udayavani, Mar 24, 2022, 5:28 PM IST
ವಿಧಾನಸಭೆ : ಉತ್ತರ ಕನ್ನಡ ಜಿಲ್ಲೆಯಲ್ಲಿ 2017ರಲ್ಲಿ ನಡೆದ ಪರೇಶ್ ಮೇಸ್ತಾ ಪ್ರಕರಣ ಗುರುವಾರ ವಿಧಾನಸಭೆಯಲ್ಲಿ ಮತ್ತೆ ಬಿಜೆಪಿ- ಕಾಂಗ್ರೆಸ್ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.
ಕಾನೂನು- ಸುವ್ಯವಸ್ಥೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶ ಮಾಡಿದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ಪರೇಶ್ ಮೇಸ್ತಾ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದರು. ಘಟನೆ ನಡೆದಾಗ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯಲ್ಲೇ ಇದ್ದರೂ ಸಂತ್ರಸ್ತರ ಮನೆಗೆ ಭೇಟಿ ನೀಡಿಲ್ಲ. ಈ ಬಗ್ಗೆ ಮಾತನಾಡುವುದಕ್ಕೆ ನನಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಕಾಂಗ್ರೆಸ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ನಾನು ಯಾವುದೇ ಕಾರಣಕ್ಕೂ ಮಾತು ನಿಲ್ಲಿಸುವುದಿಲ್ಲ ಎಂದು ಸಿದ್ದರಾಮಯ್ಯ ಹಠ ಹಿಡಿದರೆ, ಮಹಿಳೆಯರಿಗೆ ಅವಕಾಶ ನೀಡಿ ಎಂದು ಬಿಜೆಪಿ ಶಾಸಕರು ಪಟ್ಟು ಹಿಡಿದರು.
ಅನಗತ್ಯ ವಿಚಾರ ಪ್ರಸ್ತಾಪ ಬೇಡಿ. ಈ ಬಗ್ಗೆ ನಮ್ಮ ಸರಕಾರವೇ ಸಿಬಿಐ ತನಿಖೆಗೆ ನೀಡಿದೆ ಎಂದರೂ ಬಿಜೆಪಿ ಶಾಸಕರು ರೂಪಾಲಿ ನಾಯ್ಕರಿಗೆ ಮಾತನಾಡಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಒಂದು ಹಂತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಗುಂಪಾಗಿ ಧರಣಿಗೆ ಮುಂದಾದರು.ಕೊನೆಗೆ ಎರಡು ಪಕ್ಷದ ಮುಖ್ಯ ಸಚೇತಕರು ಶಾಸಕರ ನ್ನು ಸಮಾಧಾನಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.