ಕೋವಿಡ್ ನಿಂದ ಗುಣಮುಖರಾದವರಿಗೆ ಕ್ಷಯ: ಅಧ್ಯಯನ ವರದಿ ಸಲ್ಲಿಸಲು ಸೂಚನೆ
ಕ್ಷಯಕ್ಕೆ ಚಿಕಿತ್ಸೆ ಜೊತೆಗೆ ಆಪ್ತ ಸಮಾಲೋಚನೆಯೂ ಅಗತ್ಯ
Team Udayavani, Mar 24, 2022, 5:56 PM IST
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, ‘ವಿಶ್ವ ಕ್ಷಯರೋಗ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ ದೃಢಪಟ್ಟಿದೆ. ಕೋವಿಡ್ ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಕೋವಿಡ್ ನಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗ. ಕೋವಿಡ್ ವೈರಸ್ ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾದಿಂದ ಬರುತ್ತದೆ. 2030 ರ ವೇಳೆಗೆ ಜಗತ್ತನ್ನು ಕ್ಷಯರೋಗದಿಂದ ಮುಕ್ತ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 2025 ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡಬೇಕು ಎಂಬ ಗುರಿ ಪ್ರಕಟಿಸಿದೆ. ಇದು ಕೇವಲ ವೈದ್ಯರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ. ಇದಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.
ಸಾಮಾನ್ಯವಾಗಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯಲಾಗುತ್ತದೆ. ಇದರ ಬದಲು ಲಕ್ಷಣಗಳು ಕಂಡುಬಂದ ಕೂಡಲೇ ಚಿಕಿತ್ಸೆ ಪಡೆಯಲು ಆರಂಭಿಸಬೇಕು. ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು. ಈಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ಪರೀಕ್ಷೆ ಮಾಡುವ ಸೌಲಭ್ಯವಿದೆ. ಜನರು ಇಂತಹ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.
ಗ್ರಾಮೀಣ ಭಾಗಗಳಲ್ಲಿ ಜನರು ಖಾಯಿಲೆ ಇದ್ದರೂ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸುವುದಿಲ್ಲ. ಒಬ್ಬ ಕ್ಷಯ ರೋಗಿಯಿಂದ ಕನಿಷ್ಠ 10 ಜನರಿಗೆ ರೋಗ ಹರಡಬಹುದು. ಹೀಗಾದಲ್ಲಿ, ಒಬ್ಬರ ತಪ್ಪಿನಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕಿದೆ. ರಾಜ್ಯ ಸರ್ಕಾರ ರೋಗಗಳ ಬಗ್ಗೆ ಅರಿವು ಮೂಡಿಸಲು ವರ್ಷಕ್ಕೆ 5 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದರು.
ರೋಗಿಯನ್ನು ದೂರ ಮಾಡಬಾರದು
ಸಾಂಕ್ರಾಮಿಕ ರೋಗವೆಂದರೆ, ರೋಗಿಯ ವಿರುದ್ಧ ಯುದ್ಧ ಆರಂಭವಾಗಿಬಿಡುತ್ತದೆ. ಈ ರೀತಿಯ ಪರಿಸ್ಥಿತಿ ಸಮಾಜದಲ್ಲಿ ಉಂಟಾಗಬಾರದು. ಇದರಿಂದಾಗಿ ರೋಗಿಗಳು ಮಾನಸಿಕವಾಗಿ ಬಳಲುತ್ತಾರೆ. ಇಂತಹವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕೋವಿಡ್ ಬಂದ ಬಳಿಕ ನಿಮ್ಹಾನ್ಸ್ ಸಂಸ್ಥೆಯು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಿದೆ. ಇದೇ ರೀತಿ, ಕ್ಷಯದ ಚಿಕಿತ್ಸೆಯ ಜೊತೆಗೆ ರೋಗಿಗೆ ಹಾಗೂ ಕುಟುಂಬದವರಿಗೆ ಆಪ್ತ ಸಮಾಲೋಚನೆ ಮಾಡಬೇಕಿದೆ. ಕ್ಷಯ ಕಂಡುಬಂದ ಬಳಿಕ ಆ ಸೋಂಕು ರೋಗಿಯ ಮನೆಯವರಿಗೆ ಹರಡದಂತೆ ಎಚ್ಚರ ವಹಿಸಲು ಮಾರ್ಗದರ್ಶನ ನೀಡಬೇಕು ಎಂದರು.
ಕ್ಷಯ ನಿಯಂತ್ರಣ
ಕ್ಷಯ ನಿಯಂತ್ರಣದಲ್ಲಿ ರಾಜ್ಯದ ಐದು ಜಿಲ್ಲೆಗಳಿಗೆ ಬೆಳ್ಳಿ ಪದಕ ಬಂದಿದೆ. ಈ ಜಿಲ್ಲೆಗಳಲ್ಲಿ ಹಿಂದಿನ ಸಾಲಿಗೆ ಹೋಲಿಸಿದರೆ ಈ ವರ್ಷ ಕ್ಷಯ ಪ್ರಕರಣಗಳ ಪ್ರಮಾಣ ಶೇ.40 ರಷ್ಟು ಇಳಿಕೆಯಾಗಿದೆ. ಇದೇ ರೀತಿ 9 ಜಿಲ್ಲೆಗಳಿಗೆ ಕಂಚಿನ ಪದಕ ಲಭಿಸಿದೆ. ಒಟ್ಟು 14 ಜಿಲ್ಲೆಗಳಲ್ಲಿ ಕ್ಷಯ ನಿಯಂತ್ರಣದಲ್ಲಿ ಗಮನಾರ್ಹ ಸಾಧನೆಯಾಗಿರುವುದು ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚು ಕ್ರಮ ಕೈಗೊಂಡು ಚಿನ್ನದ ಪದಕ ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.