ಮಕ್ಕಳಿಗೆ ಸಾಮಾಜಿಕ-ಧಾರ್ಮಿಕ ತಿಳಿವಳಿಕೆ ನೀಡಿ:ವಿಜಯೇಂದ್ರ
ಮೌನವಾಗಿಯೇ ಜಯಿಸಿದ ಜಡೆಯ ಶಾಂತಲಿಂಗ ಸ್ವಾಮೀಜಿ ಅವರಲ್ಲಿ ಜ್ಞಾನವೇ ಘನಗೊಂಡಿದೆ
Team Udayavani, Mar 24, 2022, 5:55 PM IST
ಗದಗ: ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರರ ಬದುಕೇ ಪವಾಡ. ಮನುಕುಲದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದು, ಸತು³ರುಷರ ಬದುಕು ನಮ್ಮೆಲ್ಲರಿಗೆ ಮಾದರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಮುಳಗುಂದ ರಸ್ತೆಯಲ್ಲಿರುವ ತೋಂಟೇಶ ಮಾನ್ವಿ ಅವರ ನಿವಾಸದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಸಾವಿರ ತಿಂಗಳ ಸತು³ರುಷ, ಮೌನತಪಸ್ವಿ ಶ್ರೀ ಜಡೆಯ ಶಾಂತಲಿಂಗ ಸ್ವಾಮೀಜಿ ಜನ್ಮದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಮೌನ ತಪಸ್ವಿಯ ಪಾದ ಸ್ಪರ್ಶದಿಂದ ಗದಗ ನಗರ ಪಾವನವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಾನವೀಯ ಸಂಬಂಧಗಳು ಸಡಿಲಗೊಳ್ಳುತ್ತಿವೆ. ಮಕ್ಕಳಿಗೆ ತಂದೆ, ತಾಯಿ ಎಂಬ ಪರಿವೇ ಇಲ್ಲವೆಂಬಂತೆ ಬೆಳೆಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸಬೇಕು. ನಮ್ಮ ಸಂಸ್ಕೃತಿ, ಪರಂಪರೆ, ಸಂಪ್ರದಾಯ, ಆಚಾರ ವಿಚಾರಗಳನ್ನು ಬೆಳೆಸಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಇಂತಹ ಸತು³ರುಷರ ಉಪನ್ಯಾಸ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಕರೆ ತಂದು ಅವರಲ್ಲಿ ಸಾಮಾಜಿಕ, ಧಾರ್ಮಿಕ ಜವಾಬ್ದಾರಿಗಳ ತಿಳಿವಳಿಕೆ ನೀಡಿ, ಸನ್ಮಾರ್ಗ ದಲ್ಲಿ ಮುನ್ನಡೆಸಬೇಕು ಎಂದು ಸಲಹೆ ನೀಡಿದರು.
ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ಜಡೆಯ ಶಾಂತಲಿಂಗೇಶ್ವರರು ಸಾವಿರ ತಿಂಗಳು ಸತ್ಪುರುಷ ಎನ್ನುತ್ತಾರೆ. ಆದರೆ, ಅವರು ಸಾವಿರದ ಸತು³ರುಷರು. ಜೀವನ ನಿರ್ವಹಣೆ ಹಾಗೂ ಸಂವಹನದಲ್ಲಿ ಭಾಷೆ ಎಂಬುದು ಮಹತ್ವದ ಪಾತ್ರವಹಿಸುತ್ತದೆ. ವಿಶ್ವದ ಅನೇಕ ಭಾಷೆಗಳನ್ನು ಕಲಿತು, ಅದರಲ್ಲಿ ಪಿಎಚ್‌ಡಿ ಪದವಿ ಪಡೆದ ಏಕೈಕ ವ್ಯಕ್ತಿ ಎಂಬ ಕೀರ್ತಿ ತಮಿಳುನಾಡಿನ ಸ್ವಾಮಿನಾಥನ್ ಅವರಿಗೆ ಸಲ್ಲುತ್ತದೆ ಎಂದರು.
ಜೀವನದ ಬಹುಭಾಗವನ್ನು ಮೌನವಾಗಿಯೇ ಜಯಿಸಿದ ಜಡೆಯ ಶಾಂತಲಿಂಗ ಸ್ವಾಮೀಜಿ ಅವರಲ್ಲಿ ಜ್ಞಾನವೇ ಘನಗೊಂಡಿದೆ. ಮೌನಾ ನುಷ್ಠಾನದ ಮೂಲಕವೇ ಸಮಾಜಕ್ಕೆ ಬೆಳಕಾಗಿ ಭಕ್ತರ ಹೃದಯಲ್ಲಿ ಅಜರಾಮರಾಗಿದ್ದಾರೆ. ಮೌನದಿಂದಲೇ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ದಂಪತಿಯನ್ನು ಸನ್ಮಾನಿಸಲಾಯಿತು. ಶ್ರೀ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಮೊಗ್ಗ ಗೂಗ್ಲಿಹಳ್ಳಿಯ ಪಂಚಮಠದ ಶ್ರೀ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿವಲಿಂಗೇಶ್ವರ ವಿರಕ್ತಮಠದ ಸದಾಶಿವ ಸ್ವಾಮೀಜಿ, ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ತಮಕೂರಿನ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಾಸಕ ಕಳಕಪ್ಪ ಬಂಡಿ, ಮಾಜಿ ಸಚಿವರಾದ ವಿನಯ ಕುಲಕರ್ಣಿ, ಅಲ್ಲಂ ವೀರಭದ್ರಪ್ಪ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿ.ಎಸ್. ಪಾಟೀಲ, ಸಂಘಟಕರಾದ ತೋಂಟೇಶ ಮಾನ್ವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.