ಹರ್ಷ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ
Team Udayavani, Mar 25, 2022, 7:00 AM IST
ಬೆಂಗಳೂರು/ಹೊಸದಿಲ್ಲಿ: ದೇಶಾದ್ಯಂತ ಸುದ್ದಿ ಮಾಡಿದ್ದ ಬಜರಂಗದಳದ ಕಾರ್ಯಕರ್ತ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲಾಗಿದೆ.
ಬುಧವಾರವೇ ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಯು ಹೊಸದಿಲ್ಲಿಯ ವಿಶೇಷ ಕೋರ್ಟ್ ನಲ್ಲಿ ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಹೀಗಾಗಿ ಸದ್ಯ ಬಂಧಿತರಾಗಿರುವ ಹತ್ತು ಮಂದಿಯನ್ನು ಶೀಘ್ರವೇ ಎನ್‌ಐಎ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಕರಣದ ಬಗ್ಗೆ ಎನ್‌ಐಎ ತನಿಖೆಯಾಗಬೇಕು. ಹರ್ಷರಿಗೆ ಮುಸ್ಲಿಂ ಸಂಘಟನೆಗಳಿಂದ ಬೆದರಿಕೆ
ಇತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಫೆ.22ರಂದು ಪತ್ರ ಬರೆದಿದ್ದರು. ಅದಕ್ಕೆ ಫೆ.28ರಂದು ಸಮ್ಮತಿ ಸೂಚಿಸಿದ್ದ ಗೃಹ ಸಚಿವರು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಶಿಫಾರಸು ಮಾಡಿದ್ದರು.
ಹತ್ಯೆಗೆ ಸಂಬಂಧಿಸಿ ಹರ್ಷನ ತಾಯಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದರು. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಕೇಸು ದಾಖಲಿಸಿದ್ದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಮುಸ್ಲಿಂ ಸಂಘಟನೆಗಳ ಕೈವಾಡ ಇರಬಹುದು ಎಂಬ ಅನುಮಾನವನ್ನು ರಾಜ್ಯ ಸರಕಾರವೂ ವ್ಯಕ್ತಪಡಿಸಿತ್ತು. ರಾಜ್ಯದ ಬಿಜೆಪಿ ಮುಖಂಡರೂ ಹಲವು ಸಂದರ್ಭಗಳಲ್ಲಿ ಪ್ರಕರಣದ ಬಗ್ಗೆ ಸಿಬಿಐ ಅಥವಾ ಎನ್‌ಐಎಯಿಂದಲೇ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.
ಪ್ರಕರಣದ ಹಿನ್ನೆಲೆ :
ಫೆ.20ರಂದು ಹರ್ಷನನ್ನು ಹತ್ಯೆ ಮಾಡಲಾಗಿತ್ತು. ಬಳಿಕ ಶಿವಮೊಗ್ಗದ ಕೆಲವೆಡೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು. ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅನ್ವಯ ಪ್ರಕರಣ ದಾಖಲಿಸಲಾಗಿತ್ತು.
ಬೆಂಗಳೂರಿಗೆ ಕರೆತರಲು ಸಿದ್ಧತೆ:
ಬಂಧಿತರನ್ನು ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲಾಗಿದೆ. ಈಗ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲು ಪೊಲೀಸ್ ಇಲಾಖೆ ವಿಶೇಷ ಕ್ರಮ ಕೈಗೊಳ್ಳುತ್ತಿದೆ.
ಶಿವಮೊಗ್ಗ ಪೊಲೀಸರು ಯುಎಪಿಎ ಅನ್ವಯವೂ ಕೇಸು ದಾಖಲಿಸಿದ್ದಾರೆ. ಹೀಗಾಗಿ, ಅದು ಎನ್‌ಐಎ ವ್ಯಾಪ್ತಿಗೂ ಬರುತ್ತದೆ. ಮುಂದಿನ ತನಿಖೆ ನಿಮಿತ್ತ ಎನ್‌ಐಎ ಶಿವಮೊಗ್ಗ ಪೊಲೀಸರ ಜತೆಗೆ ಸಂಪರ್ಕ ಸಾಧಿಸಿದೆ. – ಆರಗ ಜ್ಞಾನೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.