ರಸ್ತೆ ಅಪಘಾತ ಎಸಗಿದ ಚಾಲಕನಿಗೆ ಶಿಕ್ಷೆ
Team Udayavani, Mar 25, 2022, 11:18 AM IST
ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಟೆಂಪೋ ಹರಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದ ಟಂಪೋ ಚಾಲಕ ಮತ್ತು ಮಾಲೀನಿಗೆ ಕೋರ್ಟ್ ದಂಡ ಹಾಗೂ ಶಿಕ್ಷೆ ವಿಧಿಸಿ ಆದೇಶಿಸಿದೆ.
ಟೆಂಪೋ ಚಾಲಕ ಮಂಜು (27)ಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ 5,500 ರೂ. ದಂಡ ಮತ್ತು ಮಾಲಿಕ ಅನಿಲ್ (39)ಗೆ ಏಳು ಸಾವಿರ ದಂಡ ವಿಧಿಸಲಾಗಿದೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರ ಜನವರಿ 5ರಂದು ಅಯ್ಯಪ್ಪ ಬೇಕರಿ ಸ್ವೀಟ್ಸ್ ಆ್ಯಂಡ್ ಚಾಟ್ಸ್, ಸರ್ವೀಸ್ ರಸ್ತೆಯ ನಂದಿನಿ ಲೇಔಟ್ ಬಳಿ ಚಾಲಕ ಮಂಜು ಅತೀ ವೇಗವಾಗಿ ಗೊರಗುಂಟೆಪಾಳ್ಯಯಿಂದ ಸುಮ್ಮನಹಳ್ಳಿ ಜಂಕ್ಷನ್ ಕಡೆಗೆ ಟೆಂಪೋ ಚಲಾಯಿಸಿಕೊಂಡು ಹೋಗುತ್ತಿದ್ದ. ಆಗ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಟೆಂಪೋ ಮುಂದಿನ ಎರಡು ಚಕ್ರಗಳು ಮಹಿಳೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದರು.
ಟೆಂಪೋ ಚಾಲಕ ಮತ್ತು ಮಾಲಿಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ರಾಜಾಜಿನಗರ ಸಂಚಾರಿ ಠಾಣೆ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾ ರೋಪಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ಮುಕ್ತಾಯಗೊಳಿಸಿರುವ ಕೋರ್ಟ್ ಆರೋಪಿಗೆ ಚಾಲಕನಿಗೆ ಶಿಕ್ಷೆ, ದಂಡ ಹಾಗೂ ಟೆಂಪೋ ಮಾಲಿಕನಿಗೆ 7 ಸಾವಿರ ರೂ. ದಂಡ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.