2025ಕ್ಕೆ ಕ್ಷಯ ಮುಕ್ತ ಭಾರತದ ಗುರಿ
ಕ್ಷಯ ನಿರ್ಮೂಲನೆಯಲ್ಲಿ ಜಿಲ್ಲೆಗೆ ಕೇಂದ್ರ ಸರ್ಕಾರದ ಬೆಳ್ಳಿ ಪದಕ
Team Udayavani, Mar 25, 2022, 2:18 PM IST
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಆಶ್ರಯದಲ್ಲಿ ನಗರದ ಜೆಎನ್‌ಎಂಸಿ ಆವರಣದ ಪ್ರೊ. ಡಾ. ಬಿ.ಎಸ್. ಕೊಡಕಿಣಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನ ಗುರುವಾರ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ಕ್ಷಯರೋಗ ನಿರ್ಮೂಲನೆಯಡಿಯಲ್ಲಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸಮಾಜದ ಕೊನೆಯ ವ್ಯಕ್ತಿಗಳಿಗೆ ಮುಟ್ಟಿಸಿ 2025ನೇ ವೇಳೆಗೆ ಕ್ಷಯ ಮುಕ್ತ ಭಾರತವನ್ನು ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯನ್ನು ಮುಟ್ಟಲು ಎಲ್ಲರೂ ಕೂಡಿ ಕಾರ್ಯನಿರ್ವಹಿಸುವಂತೆ ಹಾಗೂ ಭಾರತದೇಶದಿಂದ ಕ್ಷಯರೋಗವನ್ನು ಓಡಿಸಲು ಕರೆ ನೀಡಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ದೇಶಾದ್ಯಾಂತ ಕೇಂದ್ರ ಸರ್ಕಾರದಿಂದ ಕೈಗೊಂಡ ಸಮೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯು ಕ್ಷಯರೋಗ ನಿಯಂತ್ರಣದಲ್ಲಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪ್ರಯುಕ್ತ ಗಣನೀಯ ಪ್ರಮಾಣದಲ್ಲಿ ಕ್ಷಯರೋಗಿಗಳ ಸಂಖ್ಯೆ ಇಳಿಮುಖವಾಗಿದೆ.
ಕೇಂದ್ರ ಸರ್ಕಾರದಿಂದ ಬೆಳ್ಳಿ ಪದಕವನ್ನು ನೀಡಿ ಗೌರವಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮುಂದಿನ ವರ್ಷ ಜಿಲ್ಲೆಯು ಕ್ಷಯರೋಗ ನಿರ್ಮೂಲನೆಯಡಿ ಸ್ವರ್ಣ ಪದಕವನ್ನು ಪಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ. ಎಸ್.ಸಿ. ಮಾಸ್ತಿಹೊಳಿ ಸ್ವಾಗತಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎನ್ ತುಕ್ಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ವಿ. ಮುನ್ಯಾಳ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲೆಯ ಸಂಘ ಸಂಸ್ಥೆಗಳ ಸೇವೆ ಹಾಗೂ ಜಿಲ್ಲಾ ಆಡಳಿತದ ಮಾರ್ಗದರ್ಶನ, ಚುನಾಯಿತ ಪ್ರತಿನಿಧಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಕ್ಷಯರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಹೆಮ್ಮೆಯ ಸಂಗತಿ. ಇವತ್ತಿನ ದಿನ ನವದೆಹಲಿ ವಿಜ್ಞಾನ ಭವನದಲ್ಲಿ ಕೇಂದ್ರ ಸರ್ಕಾರದಿಂದ ಬೆಳಗಾವಿ ಜಿಲ್ಲೆಗೆ ಬೆಳ್ಳಿ ಪದಕ ನೀಡಿ ಗೌರವಿಸಿದ್ದು, ತಮ್ಮೆಲ್ಲರ ಪರಿಶ್ರಮವೇ ಕಾರಣವೆಂದು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸುಧಾಕರ ಆರ್.ಸಿ,, ಡಾ. ಮೋಗಾಶಿರ, ಸ್ವಪ್ನಿಲ್ ಕಾಂಬಳೆ, ಜಿಲ್ಲೆಯ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು, ಎನ್.ಜಿ.ಓ.ಗಳು ಇದ್ದರು.
ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಉತ್ತಮ ಪ್ರಗತಿ ತೋರಿದ ಆಧಿಕಾರಿಗಳು, ಆಶಾ ಕಾರ್ಯಕರ್ತೆ, ಆರೋಗ್ಯ ಸಿಬ್ಬಂದಿ, ಖಾಸಗಿ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲಿಗಾರ 2025 ನೇ ಸಾಲಿಗೆ ಕ್ಷಯಮುಕ್ತ ಭಾರತ ದೇಶವನ್ನಾಗಿ ಮಾಡುವ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾಜಿ ಮಳೆಗನ್ನವರ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.