ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ: ತನಿಖೆಗೆ ಆದೇಶ


Team Udayavani, Mar 25, 2022, 2:25 PM IST

16bag

ಮೈಸೂರು: ಜಿಲ್ಲೆಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಬಟ್ಟೆ ಬ್ಯಾಗ್‌ಗಳ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ ಗಳ ಸರಬರಾಜು ಸಂಬಂಧ ನಡೆದಿರುವ ಅಕ್ರಮ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೌರಾಡಳಿತ ನಿರ್ದೇಶನಾಲಯವು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.

ಈ ಪ್ರಕರಣದಲ್ಲಿ ಅವ್ಯವಹಾರ ನಡೆದಿದೆ ಎಂದು ಶಾಸಕ ಸಾ.ರಾ.ಮಹೇಶ್‌ ಆರೋಪಿಸಿದ್ದರು. ಈ ಕುರಿತು 2021ರ ಸೆಪ್ಟೆಂಬರ್‌ 3ರಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ಹೊರ ಬಿದ್ದಿದೆ. ಆದ್ಯತೆ ಮೇಲೆ ತನಿಖೆ ನಡೆಸಿ ಅಭಿಪ್ರಾಯ ಸಹಿತ ವರದಿ ನೀಡುವಂತೆ ಸೂಚಿಸಲಾಗಿದೆ.

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಮೂಲಕ ಬ್ಯಾಗ್‌ ಖರೀದಿಸುವ ಸಂಬಂಧ ಜಿಲ್ಲಾಧಿಕಾರಿಯು 2021ರ ಏ.9ರಂದು ಕಾರ್ಯಾದೇಶ ಹೊರಡಿಸಿದ್ದರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಮೈಸೂರು ಜಿಲ್ಲಾ ವ್ಯಾಪ್ತಿಗೆ ಸರಬರಾಜು ಮಾಡುವ ಸಂಬಂಧ ವಿನಾಯಿತಿಯಡಿಯಲ್ಲಿ ದರ ಪಟ್ಟಿ ಪಡೆದಿದ್ದಾರೆ. ಅದರಂತೆ 5 ಕೆ.ಜಿ ಮತ್ತು 10 ಕೆ.ಜಿ ಸಾಮರ್ಥ್ಯದ ಬಟ್ಟೆ ಬ್ಯಾಗ್‌ಗೆ ಜಿಎಸ್‌ಟಿ ಸೇರಿ 52 ರೂ.ಗೆ ನಿಗದಿಪಡಿಸಿ ಒಟ್ಟು 14.71 ಲಕ್ಷ ಬ್ಯಾಗ್‌ ಖರೀದಿಸಲು ಅನುಮೋದನೆ ನೀಡಿರುವುದು ಕಾರ್ಯಾದೇಶದಲ್ಲಿದೆ. ಬ್ಯಾಗ್‌ ವಿತರಣೆ ಸಂಬಂಧ ಮೈಸೂರು ಮಹಾನಗರ ಪಾಲಿಕೆ, ಪುರಸಭೆಗಳ ಸಾಮಾನ್ಯ ಸಭೆಯಲ್ಲಿ ಯಾವುದೇ ಅನುಮೋದನೆ ಪಡೆದಿರುವುದಿಲ್ಲ ಎಂದು ಈಗಿನ ಜಿಲ್ಲಾಧಿಕಾರಿಗೆ ಬರೆದಿರುವ ಪತ್ರದಲ್ಲಿ ನಮೂದಿಸಲಾಗಿದೆ.

ನಿಗಮದವರು ಸರಬರಾಜು ಮಾಡಿರುವ ಬಟ್ಟೆ ಬ್ಯಾಗ್‌ಗಳಷ್ಟೇ ಗುಣಮಟ್ಟ ಮತ್ತು ಗಾತ್ರ ಹೊಂದಿರುವ ಬ್ಯಾಗ್‌ಗಳು ಮುಕ್ತ ಮಾರುಕಟ್ಟೆಯಲ್ಲಿ ಜಿಎಸ್‌ಟಿ ಸೇರಿ 10ರಿಂದ 13 ರೂ. ದರಕ್ಕೆ ಮಾರುಕಟ್ಟೆಯಲ್ಲಿ ಲಭ್ಯ ಇದೆ. ಆದರೆ, ಈ ಪ್ರಕರಣದಲ್ಲಿ 52 ರೂ. ನಿಗದಿಪಡಿಸಿ ಅನುಮೋದನೆ ನೀಡಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಲಾಗಿದೆ. ಬ್ಯಾಗ್‌ಗಳನ್ನು ನಿಗಮದಿಂದಲೇ ತಯಾರಿಸಿ ಸರಬರಾಜು ಮಾಡುವ ಬದಲು ಮಧ್ಯವರ್ತಿಯಿಂದ ಬ್ಯಾಗ್‌ ಖರೀದಿಸಿ ಸರಬರಾಜು ಮಾಡಿರುತ್ತಾರೆ. ಈ ಸಂಬಂಧ ಸಂಪೂರ್ಣ ಪ್ರಕ್ರಿಯೆಯನ್ನು ತನಿಖೆ ನಡೆಸಿ, ಕಾರ್ಯಾದೇಶ ನೀಡಿದ್ದ ಜಿಲ್ಲಾಕಾರಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾ.ರಾ.ಮಹೇಶ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.  ಈ ವಿಷಯವಾಗಿ ಸಾ.ರಾ.ಮಹೇಶ್‌ ಮತ್ತು ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವೆ ಆರೋಪ-ಪ್ರತ್ಯಾರೋಪ ನಡೆಯುವ ರಂಪಾಟವೇ ನಡೆದಿತ್ತು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.