ಸ್ವಾಮೀಜಿಗಳ ಕುರಿತಾಗಿ ಹೇಳಿಕೆ : ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ
ಸಿದ್ದರಾಮಯ್ಯನವರೇ.. ಹಿಜಾಬ್ ನಿಷೇಧಿಸಿಲ್ಲ, ತರಗತಿಯೊಳಗೆ ಅವಕಾಶ ನಿರಾಕರಿಸಲಾಗಿದೆ
Team Udayavani, Mar 25, 2022, 2:59 PM IST
ಬೆಂಗಳೂರು : ”ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ” ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಪಾಳಯ ಮುಗಿಬಿದ್ದಿದೆ. ಸಚಿವ ಬಿ.ಸಿ ನಾಗೇಶ್, ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಕೆಂಡಾಮಂಡಲರಾಗಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,”ಹಿಜಾಬ್ ವಿವಾದ ಕಾಂಗ್ರೆಸ್ ಪ್ರೇರಿತ ಸಮಸ್ಯೆ.ವ್ಯವಸ್ಥಿತವಾಗಿ ಪ್ರಚೋದನೆ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಹಿಂದುಗಳ ಅವಹೇಳನ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
”ಮುಸ್ಲಿಂ ಸಮುದಾಯದ ತುಷ್ಠೀಕರಣ ಮಾಡುತ್ತಿದ್ದಾರೆ. ಅವರಿಗೆ ಹಿಂದೂ ಧರ್ಮವನ್ನ ಅವಹೇಳನ ಮಾಡುವುದೇ ಕೆಲಸ .ಸಿದ್ದರಾಮಯ್ಯ ಹಿಂದೂ ಕೇಸರಿಪೇಟ ಹಾಕಿದರೆ ಅದನ್ನ ಕಿತ್ತು ಎಸೆಯುತ್ತಾರೆ. ಸಿದ್ದರಾಮಯ್ಯ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸುತ್ತಲೇ ಇದ್ದಾರೆ” ಎಂದು ಆರೋಪಿಸಿದರು.
ಇದನ್ನೂ ಓದಿ : ಮುಸ್ಲಿಂ ಹುಡುಗಿಯರು ತಲೆಗೆ ದುಪಟ್ಟ ಹಾಕಿದರೆ ತಪ್ಪೇನು,ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ?
”ಶಾಲಾ ಪಠ್ಯ ಪರಿಷ್ಕರಣೆಯನ್ನು ನಾನು ಸ್ವಾಗತಿಸುತ್ತೇನೆ. ಯಾರ ಯಾರದ್ದೋ ವೈಭವೀಕರಣಕ್ಕೆ ಕಡಿವಾಣ ಹಾಕಬೇಕಿದೆ. ವೈಭವೀಕರಣ ತೆಗೆದು ವಾಸ್ತವಿಕತೆಯ ಪಾಠ ಅಳವಡಿಸಲಿ ಎಂದರು. ಟಿಪ್ಪು, ಅಕ್ಬರ್, ಬಾಬರ್ ನ್ನ ವೈಭವೀಕರಿಸಿ ಪಠ್ಯದಲ್ಲಿ ಸೇರಿಸಲಾಗಿದೆ.ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ. ಶಿವಾಜಿ ಕುರಿತ ಇತಿಹಾಸ ತಿಳಿಸಬೇಕಿದೆ” ಎಂದರು.
”ಮಾನ್ಯ ಸಿದ್ದರಾಮಯ್ಯನವರೇ, ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ.ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ.ಹಿಜಾಬ್ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ” ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.