ರಾಜ್ಯ-ದೇಶದಲ್ಲಿ ಇವೆ ಭ್ರಷ್ಟ ಸರ್ಕಾರಗಳು

ಮಾಜಿ ಶಾಸಕ ಹಂಪನಗೌಡ ನಿವಾಸದಲ್ಲಿ ಡಿಕೆಶಿಗೆ ಅದ್ಧೂರಿ ಸ್ವಾಗತ

Team Udayavani, Mar 25, 2022, 4:17 PM IST

ಸಿಂಧನೂರು: ಈ ರಾಜ್ಯ-ದೇಶದಲ್ಲಿ ನಂಬರ್‌ ಒನ್‌ ಭ್ರಷ್ಟ ಸರ್ಕಾರಗಳು ಅಸ್ತಿತ್ವದಲ್ಲಿವೆ. ಇವರು ರೈತರಿಗೆ ಸುಳ್ಳು ಹೇಳಿ ಮೋಸ ಮಾಡಿದ್ದು, ಅವರನ್ನು ತೊಲಗಿಸಲು ಜನ ಪಣ ತೊಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ನಗರದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ಬರೀ ಸುಳ್ಳು ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ರೈತರಿಗೆ ಸರಿಯಾದ ರೀತಿ ಬೆಂಬಲ ಬೆಲೆ ಕೊಟ್ಟಿಲ್ಲ. ಖಾದಿ ಭಂಡಾರ ಉತ್ತೇಜಿಸುವುದಾಗಿ ಹೇಳಿದ ಇವರಿಂದ ಸಿಲ್ಕ್ ಇಲ್ಲ; ಮಿಲ್ಕ್ ಇಲ್ಲಾ ಎಂಬುದು ಗೊತ್ತಾಗಿದೆ ಎಂದು ಹರಿಹಾಯ್ದರು.

ನಮ್ಮ ಹೋರಾಟದ ಫಲ

ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಾವು ಹೋರಾಡಿದ ಮೇಲೆ ಬಜೆಟ್‌ ನಲ್ಲಿ ಅನುದಾನ ಕೊಟ್ಟರು. ಆವರೆಗೂ ಸುಮ್ಮನಿದ್ದರು. ಮೊದಲು ರಾಜಕಾರಣ ಎಂದರು. ಹಾಗಿದ್ದರೆ, 1 ಸಾವಿರ ಕೋಟಿ ರೂ. ಅನುದಾನ ಯಾಕೆ ಕೊಟ್ಟರು?. ಇದು ಬಿಜೆಪಿಯ ಡಬಲ್‌ ಸ್ಟ್ರಾಂಡ್‌ ತೋರಿಸುತ್ತದೆ. ನಾವು ಜನಪರ ಹೋರಾಟ ರೂಪಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಮಾನವೀಯತೆ ಮುಖ್ಯ

ಬುದ್ಧ, ಬಸವ, ಅಂಬೇಡ್ಕರ್‌ ಜನಿಸಿದ ನಾಡು ನಮ್ಮದು. ಇಲ್ಲಿ ಮಾನವೀಯತೆಯೇ ಮುಖ್ಯ. ಅಮಾನವೀಯ ರೀತಿಯಲ್ಲಿ ಜಾತ್ರೆ, ಹಬ್ಬಗಳಲ್ಲಿ ಒಂದು ವರ್ಗ ನಿಷೇಧಿ ಸುವ ಕ್ರಮ ಸರಿಯಲ್ಲ. ಇದನ್ನು ನಾವು ಒಪ್ಪುವುದಿಲ್ಲ ಎಂದರು. ಈ ವೇಳೆ ಕೊಪ್ಪಳ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಜಿಪಂ ಸದಸ್ಯ ಬಸವರಾಜ ಹಿರೇಗೌಡರ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಉಪಾಧ್ಯಕ್ಷ ಮುರ್ತುಜಾ ಹುಸೇನ್‌, ಮಾಜಿ ಅಧ್ಯಕ್ಷ ಜಾಫರ್‌ ಜಾಹಗೀರದಾರ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.