ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ: ಪರ್ಕಳ ವಾಮನ್ ನಾಯಕ್ ಬಲಿ
ವಿದ್ಯಾರ್ಥಿನಿ ಹಾಗೂ ಕಾರು ಪೊಲೀಸರ ವಶಕ್ಕೆ
Team Udayavani, Mar 25, 2022, 7:06 PM IST
ಉಡುಪಿ : ಕಡಿಯಾಳಿ ಸಮೀಪ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಭಕ್ತಿ ಸಂಗೀತ ಕಲಾವಿದ, ಪರ್ಕಳದ ಹೃದಯಭಾಗದಲ್ಲಿರುವ ಮೆಡಿಕಲ್ ಶಾಪ್ ನ ಮಾಲೀಕ ವಾಮನ ನಾಯಕ್ ಅವರು ಮೃತಪಟ್ಟಿದ್ದಾರೆ.
ವಾಮನ ನಾಯಕ್ ಅವರು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕಾಗಿ ಮಗನನ್ನು ಉಡುಪಿಯಲ್ಲಿ ಬಿಟ್ಟು ಬೈಕ್ ನಲ್ಲಿ ಪರ್ಕಳದ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ವಿದ್ಯಾರ್ಥಿನಿಯೊಬ್ಬರು ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ. ತತ್ ಕ್ಷಣ ಅವರನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಮಗ, ಮಗಳನ್ನು ಅಗಲಿದ್ದಾರೆ.
ಉತ್ತಮ ಕಲಾವಿದ
ವಾಮನ ನಾಯಕ್ ಉತ್ತಮ ಭಜನೆ ಹಾಡುಗಾರರಾಗಿದ್ದರು ಮತ್ತು ಸಂಗೀತದ ಪರಿಕರಗಳನ್ನು ನುಡಿಸುತ್ತಿದ್ದರು, ಉಡುಪಿಯ ಸುತ್ತಮುತ್ತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಿಗೀತೆ ಹಾಡುವ ಮೂಲಕ ಜನಮನ್ನಣೆ ಗಳಿಸಿದ್ದರು.
ಅಪಘಾತದ ಬಳಿಕ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿನಿ ಇಳಿದು ವಾಮನ ನಾಯಕ್ ಅವರು ಗಂಭೀರ ಗಾಯಗೊಂಡಿದ್ದನ್ನು ಕಂಡು ಕಾರಿನಲ್ಲಿ ಸ್ಥಳದಿಂದ ತೆರಳಿದ್ದಾಳೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಬಳಿಕ ಕಾರಿನ ನಂಬರ್ ಮೂಲಕ ಅಪಘಾತ ನಡೆಸಿದ ವಿದ್ಯಾರ್ಥಿನಿ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.