ಯೋಗಿ ಪ್ರಮಾಣವಚನ: ಪೇಜಾವರ, ಆದಿಚುಂಚನಗಿರಿ ಶ್ರೀ ಭಾಗಿ
ಕಾಡಿದ ಟ್ರಾಫಿಕ್ ಜಾಮ್, 2 ಕಿ.ಮೀ. ನಡೆದ ಸ್ವಾಮೀಜಿ
Team Udayavani, Mar 26, 2022, 6:55 AM IST
ಉಡುಪಿ: ಲಕ್ನೋದಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಇಸ್ಕಾನ್‌ನ ಮಧುಪಂಡಿತ ದಾಸ್ ಪಾಲ್ಗೊಂಡರು.
ನೂರಾರು ಸಾಧು ಸಂತರನ್ನು ಆಮಂತ್ರಿ ಸಲಾಗಿದ್ದು, ಅವರ ಆತಿಥ್ಯಕ್ಕಾಗಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಸಮಾರಂಭದಲ್ಲಿ ಮಠಾಧೀಶರು, ಸ್ವಾಮೀಜಿಯವರಿಗೆ ಪ್ರತ್ಯೇಕ ಆಸನ ಇತ್ತು. ಯೋಗಿ ಮತ್ತೆ ಅಧಿಕಾರ ಸ್ವೀಕರಿಸುತ್ತಿರುವುದನ್ನು ಉತ್ತರ ಪ್ರದೇಶದ ಜನ ಸಂಭ್ರಮಿಸುತ್ತಿರುವುದು ಎಲ್ಲೆಲ್ಲೂ ಕಂಡುಬಂತು. ರಸ್ತೆ ಇಕ್ಕೆಲಗಳಲ್ಲಿ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ನೂರಾರು ನೃತ್ಯ ತಂಡಗಳ ನೃತ್ಯ ಪ್ರದರ್ಶನ ನಡೆಯುತ್ತಿತ್ತು. ಬ್ಯಾಂಡ್ ಇತ್ಯಾದಿ ವಾದ್ಯಗಳನ್ನು ನುಡಿಸುತ್ತ ಸಂಭ್ರಮಿಸುತ್ತಿದ್ದರು ಎಂದು ಪೇಜಾವರ ಶ್ರೀಗಳು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಯೋಗಿ ಸಂಪುಟ 2.0 ರಲ್ಲಿ ಐವರು ಮಹಿಳೆಯರಿಗೆ ಸಚಿವ ಪದವಿ
ಕಾಡಿದ ಟ್ರಾಫಿಕ್ ಜಾಮ್, 2 ಕಿ.ಮೀ. ನಡೆದ ಸ್ವಾಮೀಜಿ
ಲಕ್ನೋದಲ್ಲಿ ಶುಕ್ರವಾರ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಲಕ್ಷಾಂತರ ಜನ ಸಮಾರಂಭಕ್ಕೆ ಆಗಮಿಸಿದ್ದರಿಂದ ಮತ್ತು ಮೋದಿ, ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರ ದಂಡೇ ಆಗಮಿಸಿದ್ದರಿಂದ ಅವರ ಬೆಂಗಾವಲು ವಾಹನಗಳ ಸರತಿ ಸಾಲು ಪ್ರಮುಖ ರಸ್ತೆಗಳಲ್ಲಿ ಸೇರಿದ್ದರಿಂದ ಉಂಟಾದ ಟ್ರಾಫಿಕ್ ಜಾಮ್‌ನಲ್ಲಿ ಅನೇಕರು ಸಿಲುಕಿದರು. ಪೇಜಾವರ ಶ್ರೀಗಳ ವಾಹನವೂ ಸರತಿಯಲ್ಲಿ ಮುಂದೆ ಹೋಗದ ಪರಿಸ್ಥಿತಿ ಎದುರಾದಾಗ ಶ್ರೀಗಳು ವಾಹನದಿಂದ ಇಳಿದು ಸುಮಾರು ಎರಡು ಕಿ.ಮೀ. ನಡೆದೇ ಸ್ಟೇಡಿಯಂ ತಲುಪಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.