![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 26, 2022, 5:55 AM IST
ಮಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಭಾರತಕ್ಕೆ ಮರಳಿರುವ ವೈದ್ಯ ವಿದ್ಯಾರ್ಥಿಗಳು ತಮ್ಮ ವ್ಯಾಸಂಗವನ್ನು ಮುಂದುವರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ನಿರ್ಧರಿಸಲು ರಾಜ್ಯ ಸರಕಾರ ಈಗಾಗಲೇ ಸಮಿತಿಯೊಂದನ್ನು ರಚಿಸಿದ್ದು, ಇದರ ಸಲಹೆಯಂತೆ ಕಾರ್ಯ ಪ್ರವೃತ್ತವಾಗಲಿದ್ದೇವೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಸುಧಾಕರ್ ಹೇಳಿದ್ದಾರೆ.
ಉಕ್ರೇನ್‌ನಿಂದ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೆಲವರು ಮೊದಲನೇ ವರ್ಷ, ಕೆಲವರು ಅಂತಿಮ ವರ್ಷ -ಹೀಗೆ ವಿವಿಧ ಹಂತಗಳಲ್ಲಿದ್ದಾರೆ. ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದು ಅನಿಶ್ಚಿತ. ವ್ಯಾಸಂಗ ಮೊಟಕುಗೊಳ್ಳದೆ ಮುಂದುವರಿಯಬೇಕು ಎಂಬ ದೃಷ್ಟಿಯಿಂದ ಅದಕ್ಕೆ ಅವಕಾಶ ಮಾಡಿಕೊಡುತ್ತಿದ್ದೇವೆ. ಇದಕ್ಕೆ ಪೂರಕವಾಗಿ ಸಮಿತಿ ರಚನೆ ಮಾಡಿದ್ದೇವೆ ಎಂದು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಅವರು ತಿಳಿಸಿದರು.
ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ
ಯುದ್ಧ ಮುಗಿದ ಬಳಿಕ ವಿದ್ಯಾರ್ಥಿಗಳು ಅಲ್ಲಿಗೆ ಮರಳುತ್ತಾರೆಯೇ ಅಥವಾ ಯಾವ ರೀತಿ ವ್ಯಾಸಂಗ ಮುಂದುವರಿಸುತ್ತಾರೆ ಎಂಬುದು ಅನಿಶ್ಚಿತ. ಸಾಧಕ -ಬಾಧಕ ಚರ್ಚಿಸಿ ಮತ್ತು ನಿಯಮ ಪಾಲಿಸಿ ಅವರಿಗೆ ಆರ್ಥಿಕ ಹೊರೆಯಾಗದಂತೆ ರಾಜ್ಯದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮುಂದುವರಿಸುವ ಅವಕಾಶ ಒದಗಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.