ಕೆಲಸದಿಂದ ತೆಗೆದಿದ್ದಕ್ಕೆ ಎಚ್‌ಆರ್‌ ಕೊಲೆಗೆ ಸ್ಕೆಚ್‌: ಐವರ ಬಂಧನ

ಕೂದಲೆಳೆ ಅಂತರದಲ್ಲಿ ಪಾರಾದ ಮಾನವ ಸಂಪನ್ಮೂಲ ನಿರ್ದೇಶಕ

Team Udayavani, Mar 26, 2022, 1:44 PM IST

ಕೆಲಸದಿಂದ ತೆಗೆದಿದ್ದಕ್ಕೆ ಎಚ್‌ಆರ್‌ ಕೊಲೆಗೆ ಸ್ಕೆಚ್‌: ಐವರ ಬಂಧನ

ಬೆಂಗಳೂರು: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೆಲಸದಿಂದ ತೆಗೆದು ಹಾಕಿದ್ದ ಖಾಸಗಿ ಸಂಸ್ಥೆಯ ಮಾನವ ಸಂಪನ್ಮೂಲ ನಿರ್ದೇಶಕನ (ಎಚ್‌ಆರ್‌) ಕೊಲೆಗೆ ಯತ್ನಿಸಿದ ಐವರನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಸ್‌ಮೋಸ್‌ ಎಚ್‌ಇಟಿ ಟೆಕ್ನೋಲಾಜಿಸ್‌ ಲಿ.ಕಂಪನಿಯ ಎಚ್‌ ಆರ್‌ ರಾಜರಾಜೇಶ್ವರಿನಗರದ ನಿವಾಸಿ ರಾಜಶೇಖರ್‌ ರೈ (46) ನೀಡಿದ ದೂರಿನ ಆಧಾರದಲ್ಲಿ ಶಿಡ್ಲ ಘಟ್ಟದ ನಿವಾಸಿ ಮಧು (30), ಆತನ ಸಹಚರರಾದ ಪ್ರಮೋದ್‌ (26), ಅಲೆಕ್ಸಾಂಡರ್‌ (27), ಚಿನ್ನರಾಜು (34), ಇಮ್ರಾನ್‌ಪಾಷಾ (29) ಅವರನ್ನು ಬಂಧಿಸಲಾಗಿದೆ.

ಬಾಗಲೂರಿನ ಕೆಐಎಡಿಬಿ ಪ್ರದೇಶದ ಎಸ್‌ಇಝಡ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿರುವ ಸಾಸ್‌ ಮೋಸ್‌ ಎಚ್‌ಇಟಿ ಟೆಕ್ನೋಲಾಜಿಸ್‌ ಲಿ. ಸಂಸ್ಥೆಯು ದೇಶದ ರಕ್ಷಣಾ ಪಡೆಗಳಿಗೆ(ಡಿಫೆನ್ಸ್‌) ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದೆ. ಇಲ್ಲಿ ತಯಾರಾಗುವ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಸಿಬ್ಬಂದಿಯು ಫೋಟೋ ಅಥವಾ ವಿಡಿಯೋ ಮಾಡಬಾರದು ಎಂಬ ನಿಯಮವಿದೆ. ಆದರೆ, ಆರೋಪಿ ಮಧು ಸಂಸ್ಥೆಯ ನಿಯಮಗಳನ್ನು ಉಲ್ಲಂ ಸಿ ಕೆಲ ಉತ್ಪನ್ನಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಇದು ಕಂಪನಿಯ ಮೇಲ್ವಿಚಾರಕರ ಗಮನಕ್ಕೆ ಬಂದು ಆತನಿಗೆ ನೋಟಿಸ್‌ ನೀಡಿದ್ದರು. ನೋಟಿಸ್‌ಗೂ ಉತ್ತರಿಸದ ಪರಿಣಾಮ, ಕಳೆದ ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ಅಮಾನತು ಮಾಡಲಾಗಿತ್ತು.

ಮಾರಕಾಸ್ತ್ರ ಹಿಡಿದು ಐದಾರು ಜನಬೆನ್ನಟ್ಟಿದರೂ ಪಾರಾದ ಎಚ್‌ಆರ್‌ : ಕೆಲಸ ಕಳೆದುಕೊಂಡಿದ್ದರಿಂದ ಆಕ್ರೋಶಗೊಂಡ ಮಧು ತನ್ನ ಸಹಚರರ ಜೊತೆ ಸೇರಿ ದೂರುದಾರ ರಾಜಶೇಖರ್‌(ಎಚ್‌ಆರ್‌) ಕೊಲೆಗೆ ಸಂಚು ರೂಪಿಸಿದ್ದ. ಮಾ.8ರಂದು ರಾತ್ರಿ 8 ಗಂಟೆ ಸುಮಾರಿಗೆ ರಾಜಶೇಖರ್‌ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಬಿ.ಕೆ.ಪಾಳ್ಯ ಕ್ರಾಸ್‌ನಲ್ಲಿ ಕಾರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಪ್ರಯತ್ನಿಸಿದ್ದರು. ಕಾರು ಚಾಲಕನ ಸಮಯಪ್ರಜ್ಞೆಯಿಂದ ರಾಜಶೇಖರ್‌ ಆರೋಪಿಗಳಿಂದ ಪಾರಾಗಿದ್ದರು. ಆದರೂ ಆರೋಪಿಗಳು ಹಿಂಬಾಲಿಸುತ್ತಲೇ ಇದ್ದರು. ಕೊನೆಗೆ ಮಾರ್ಗಮಧ್ಯೆ ಬಾಗಲೂರು ಪೊಲೀಸ್‌ ಠಾಣೆ ಬಂದ ತಕ್ಷಣ ಕಾರನ್ನು ನೇರವಾಗಿ ಪೊಲೀಸ್‌ ಠಾಣೆ ಆವರಣದೊಳಕ್ಕೆ ಬಂದಿದ್ದರು. ಹಿಂದೆ ಹಿಂಬಾಲಿಸುತ್ತಿದ್ದ ಆರೋಪಿಗಳು ಪೊಲೀಸ್‌ ಠಾಣೆ ಬೋರ್ಡ್‌ ನೋಡಿ ಪರಾರಿಯಾಗಿದ್ದರು. ಆದರೆ, ಆರೋಪಿಗಳೆಲ್ಲರೂ ಮಾಸ್ಕ್ ಧರಿಸಿದ್ದರಿಂದ ಯಾರಿರಬಹುದೆಂದು ಸರಿಯಾಗಿ ಸುಳಿವು ಸಿಕ್ಕಿರಲಿಲ್ಲ.

ಠಾಣೆ ಬಿಟ್ಟು ಮನೆಗೆ ಬಂದ ಆರೋಪಿಗಳು: ರಾಜಶೇಖರ್‌ ಠಾಣೆಯಲ್ಲಿ ದೂರು ನೀಡಿ ಮನೆಗೆ ಬರುವ ಹೊತ್ತಿಗೆ ತಡರಾತ್ರಿಯಾಗಿತ್ತು. ಆದರೆ, ಬಾಗಲೂರು ಠಾಣೆ ಬಳಿಯಿಂದ ನೇರವಾಗಿ ರಾಜರಾಜೇಶ್ವರಿನಗರದಲ್ಲಿರುವ ರಾಜಶೇಖರ್‌ ಮನೆ ಬಳಿ ಆರೋಪಿಗಳು ಬಂದು ಕಾರು ನಿಲ್ಲಿಸಿ ಕಾಯ್ದಿದ್ದರು. ರಾಜಶೇಖರ್‌ ಬರುವುದು ತಡವಾಗಿದ್ದರಿಂದ ಆರೋಪಿಗಳು ಮದ್ಯ ಸೇವಿಸಿ ನಿದ್ದೆಗೆ ಜಾರಿದ್ದರು. ಹೀಗಾಗಿ ರಾಜೇಶೇಖರ್‌ ಮನೆಗೆ ಬಂದದ್ದು ಆರೋಪಿಗಳಿಗೆ ಗೊತ್ತಾಗಿರಲಿಲ್ಲ. ಮರುದಿನ ಎಚ್ಚರವಾದ ಮೇಲೆ ಆರ್‌ಆರ್‌ ನಗರದಿಂದ ಪರಾರಿಯಾಗಿದ್ದರು. ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ, ಪ್ರಕರಣದ ಕಿಂಗ್‌ಪಿನ್‌ ಮಧು ಶಿಡ್ಲಘಟ್ಟದಲ್ಲಿರುವುದು ಪತ್ತೆಯಾಗಿತ್ತು. ಕೂಡಲೇ ಆತನನ್ನು ಬಂಧಿಸಿ, ಆತ ಕೊಟ್ಟ ಸುಳಿವಿನ ಆಧಾರದ ಮೇಲೆ ಇತರ ಆರೋಪಿಗಳನ್ನು ಪಾಂಡಿಚೇರಿಯಲ್ಲಿ ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.

ಟಾಪ್ ನ್ಯೂಸ್

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.