SSLC ಪರೀಕ್ಷೆ: 14,022 ವಿದ್ಯಾರ್ಥಿಗಳು ಸಜ್ಜು : ಈ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ

ಉಡುಪಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರ

Team Udayavani, Mar 26, 2022, 2:22 PM IST

ಎಸೆಸೆಲ್ಸಿ ಪರೀ ಕ್ಷೆ: 14,022 ವಿದ್ಯಾರ್ಥಿಗಳು ಸಜ್ಜು : ಉಡುಪಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರ

ಉಡುಪಿ : ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಮಾ. 28ರಿಂದ ಎ.11ರ ವರೆಗೆ ಸುಗಮವಾಗಿ ಪರೀಕ್ಷೆ ನಡೆಸಲು ಬೇಕಿರುವ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ.

2 ಖಾಸಗಿ ಕೇಂದ್ರ ಸಹಿತವಾಗಿ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಠಡಿ ಮೇಲ್ವಿಚಾರಕರು, ವಿಚಕ್ಷಣದ ದಳ ಸಿಬಂದಿ ನಿಯೋಜನೆಯೂ ಪೂರ್ಣಗೊಂಡಿದೆ. ಜಿಲ್ಲೆಯ 266 ಪ್ರೌಢಶಾಲೆಯ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 13,672 ಹೊಸ ಹಾಗೂ 350 ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಇದ್ದಾರೆ.

ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಡೆಸ್ಕ್ ಮೇಲೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಇರಲಿದೆ.

ಜತೆಗೆ ಕೊಠಡಿಯ ಬೋರ್ಡ್‌ನಲ್ಲೂ ನೋಂದಣಿ ಸಂಖ್ಯೆಯ ಕ್ರಮಾಂಕ ಬರೆಯಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಆಗದಂತೆ ಕೊಠಡಿ ಮಾರ್ಗಸೂಚಕ ಹಾಗೂ ಮಾಹಿತಿ ನೀಡಲು ಸಿಬಂದಿಯೂ ಇರುತ್ತಾರೆ.

ಇದನ್ನೂ ಓದಿ : ಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನ ಸಲಾಂ ಆರತಿ ನಿಲ್ಲಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ

ಕೊರೊನಾ ಮುಂಜಾಗೃತಿ
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ವಿದ್ಯಾರ್ಥಿಯಿಲ್ಲ. ಆದರೂ, ಪರೀಕ್ಷಾ ಕೇಂದ್ರವನ್ನು ಸಂಪೂರ್ಣವಾಗಿ ಸುರಕ್ಷಿತವಾಗಿಡಲು ಸ್ಯಾನಿಟೈಸೇಷನ್‌ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ, ಮೇಲ್ವಿಚಾರಕರಿಗೆ ಹಾಗೂ ಭದ್ರತಾ ಸಿಬಂದಿ ಸಹಿತ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಎಲ್ಲ ಕೇಂದ್ರದಲ್ಲೂ ವಿಶೇಷ ಕೊಠಡಿ ಇರುತ್ತದೆ. ಆರೋಗ್ಯ ತಪಾಸಣೆ, ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಗುತ್ತದೆ. ದಿಢೀರ್‌ ಅಸ್ವಸ್ಥತೆಗೆ ಒಳಗಾದ ವಿದ್ಯಾರ್ಥಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ.

ಯಾವುದಕ್ಕೆಲ್ಲ ಅವಕಾಶವಿಲ್ಲ?
ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್‌, ಸ್ಮಾರ್ಟ್‌ ವಾಚ್‌, ಕೆಮರಾ, ಅತ್ಯಾಧುನಿಕ ಕ್ಯಾಲ್ಕುಲೇಟರ್‌ ಸಹಿತವಾಗಿ ಯಾವುದೇ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಮೊಬೈಲ್‌ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.

ಸಕಲ ವ್ಯವಸ್ಥೆ
ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಪರೀಕ್ಷಾ ದಿನ ಗ ಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
-ಗೋವಿಂದ ಮಡಿವಾಳ, ಡಿಡಿಪಿಐ, ಉಡುಪಿ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ವಿದ್ಯಾರ್ಥಿಗಳು ಇಲ್ಲ. ಆದರೆ, ಎಲ್ಲ ಕೇಂದ್ರದಲ್ಲೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿದೆ.

– ಜಾಹ್ನವಿ ಸಿ., ಎಸೆಸೆಲ್ಸಿ ಜಿಲ್ಲಾ ನೋಡಲ್‌ ಅಧಿಕಾರಿ

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.