ಉತ್ತರ ಕರ್ನಾಟಕದ ಮೊದಲ ಕೇಂದ್ರ: ನಾಡಿದ್ದು ಹಾಸ್ಪೈಸ್ ಕೇಂದ್ರ ಲೋಕಾರ್ಪಣೆ

ಹಾಸ್ಪೈಸ್‌ನಲ್ಲಿ ವೈದ್ಯರು, ನರ್ಸ್‌ಗಳನ್ನು ನೇಮಕ ಮಾಡಲಾಗಿದ್ದು, ಕೌನ್ಸೆಲಿಂಗ್‌ ವ್ಯವಸ್ಥೆಯೂ ಇರಲಿದೆ.

Team Udayavani, Mar 26, 2022, 1:20 PM IST

ಉತ್ತರ ಕರ್ನಾಟಕದ ಮೊದಲ ಕೇಂದ್ರ: ನಾಡಿದ್ದು ಹಾಸ್ಪೈಸ್ ಕೇಂದ್ರ ಲೋಕಾರ್ಪಣೆ

ಹುಬ್ಬಳ್ಳಿ: ಕ್ಯಾನ್ಸರ್‌ ರೋಗಿಗಳಿಗೆ ನೆಮ್ಮದಿ ವಾತಾವರಣ ಕಲ್ಪಿಸುವ, ವಸತಿ-ಊಟೋಪಚಾರ ಸೌಲಭ್ಯ ಒದಗಿಸುವ ಮಜೇಥಿಯಾ ಫೌಂಡೇಶನ್‌ನ ಉತ್ತರ ಕರ್ನಾಟಕದ ಮೊದಲ ರಮೀಲಾ ಪ್ರಶಾಂತಿ ಮಂದಿರ ಹಾಸ್ಪೈಸ್‌ ಲೋಕಾರ್ಪಣೆ ಸೋಮವಾರ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೌಂಡೇಶನ್‌ ಟ್ರಸ್ಟಿ ಡಾ| ಕೆ.ರಮೇಶಬಾಬು, 1967ರ ಸುಮಾರಿಗೆ ಇಂಗ್ಲೆಂಡ್‌ನ‌ಲ್ಲಿ ಹಾಸ್ಪೈಸ್‌ ವ್ಯವಸ್ಥೆ ಜಾರಿಗೊಂಡಿತ್ತು. ಕ್ಯಾನ್ಸರ್‌ ರೋಗಿಗಳು ನೆಮ್ಮದಿಯಿಂದ ಕಾಲ ಕಳೆಯುವಂತಾಗಲು ಇಂತಹ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಬೆಂಗಳೂರಿನಲ್ಲಿ ಕರುಣಾಶ್ರಮ ಮಾದರಿಯ ಹಾಸ್ಪೈಸ್‌ ವ್ಯವಸ್ಥೆ ಕೈಗೊಂಡಿದೆ. ಮೈಸೂರು, ಉಡುಪಿಯಲ್ಲಿಯೂ ಹಾಸ್ಪೈಸ್‌ಗಳು ಇವೆ. ಉತ್ತರ ಕರ್ನಾಟಕದಲ್ಲಿ ಮೊದಲ ಹಾಸ್ಪೈಸ್‌ ಹುಬ್ಬಳ್ಳಿಯಲ್ಲಿ ಆರಂಭವಾಗುತ್ತಿದೆ ಎಂದರು.

ಮಜೇಥಿಯಾ ಫೌಂಡೇಶನ್‌ ಇಂತಹ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದು, ನವನಗರದ ಕ್ಯಾನ್ಸರ್‌ ಆಸ್ಪತ್ರೆ ಆವರಣದಲ್ಲಿ ಹಾಸ್ಪೈಸ್‌ ಕಟ್ಟಡ ನಿರ್ಮಿಸಲಾಗಿದೆ. ಹಾಸ್ಪೈಸ್‌ನಲ್ಲಿ ಒಟ್ಟು 30 ರೋಗಿಗಳಿಗೆ ಅವಕಾಶ ನೀಡಲಾಗುತ್ತಿದೆ. ಜನರಲ್‌ ವಾರ್ಡ್‌ನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ತಲಾ 10 ಜನರಿಗೆ ಅವಕಾಶ ನೀಡಲಾಗುತ್ತಿದ್ದು, ಜನರಲ್‌ ವಾರ್ಡ್‌ನ ರೋಗಿಗಳಿಗೆ ಚಿಕಿತ್ಸೆ, ಉಪಹಾರ-ಊಟ, ವಸತಿ ಎಲ್ಲವೂ ಉಚಿತವಾಗಿರಲಿದೆ. ಉಳಿದ 10 ಜನ ರೋಗಿಗಳಿಗೆ ಪ್ರತ್ಯೇಕ ಕೋಣೆ ವ್ಯವಸ್ಥೆ ಇದ್ದು, ಅವರಿಗೆ ಅತ್ಯಲ್ಪ ರೀತಿ ಶುಲ್ಕ ನಿಗದಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಹಾಸ್ಪೈಸ್‌ನಲ್ಲಿ ವೈದ್ಯರು, ನರ್ಸ್‌ಗಳನ್ನು ನೇಮಕ ಮಾಡಲಾಗಿದ್ದು, ಕೌನ್ಸೆಲಿಂಗ್‌ ವ್ಯವಸ್ಥೆಯೂ ಇರಲಿದೆ. ರೋಗಿಗಳಿಗೆ ಧ್ಯಾನ, ಆಧ್ಯಾತ್ಮಿಕ-ಪ್ರೇರಣಾದಾಯಕ ಉಪನ್ಯಾಸ, ಸಂಗೀತ, ಲಘು ಕ್ರೀಡೆ, ಯೋಗ, ಗ್ರಂಥಾಲಯ ಇನ್ನಿತರ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕ್ಯಾನ್ಸರ್‌ ತಜ್ಞರಿಂದ ಶಿಫಾರಸು ತಂದವರಿಗೆ ಮಾತ್ರ ಹಾಸ್ಪೈಸ್‌ಗೆ ಪ್ರವೇಶ ನೀಡಲಾಗುತ್ತಿದೆ. ಕೋವಿಡ್‌ ಕಾರಣದಿಂದ ಉದ್ಘಾಟನೆ ಮುಂದೂಡಿಕೆಯಾಗಿತ್ತು.ಇದೀಗ ಮಾ. 28ರಂದು ಸರಳವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಮಜೇಥಿಯಾ ಫೌಂಡೇಶನ್‌ ಸಂಸ್ಥಾಪಕ ಚೇರ್ಮನ್‌ ಜಿತೇಂದ್ರ ಮಜೇಥಿಯಾ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಇದೊಂದು ಹೊಸ ಯೋಜನೆಯಾಗಿದೆ. ಡಾ| ವಿ.ಬಿ. ನಿಟ್ಟಾಲಿ ಅವರ ಸಲಹೆಯಂತೆ ಇದನ್ನು ಕೈಗೊಂಡಿದ್ದು, ಈ ಭಾಗದ ಕ್ಯಾನ್ಸರ್‌ ರೋಗಿಗಳಿಗೆ ನೆಮ್ಮದಿ ವಾತಾವರಣ ಸೃಷ್ಟಿಸುವ ಕಾರ್ಯವನ್ನು ಹಾಸ್ಪೈಸ್‌ ಮಾಡಲಿದೆ ಎಂದು ಹೇಳಿದರು.

ಬೆಂಗಳೂರಿನ ಕರುಣಾಶ್ರಮ ಸುಮಾರು 8.5 ಕೋಟಿ ರೂ. ವೆಚ್ಚದಲ್ಲಿ ಹಾಸ್ಪೈಸ್‌ ನಿರ್ಮಾಣ ಮಾಡಿದ್ದು, 72 ಜನರಿಗೆ ಅವಕಾಶ ನೀಡಲಾಗಿದೆ. ನಮ್ಮ ಹಾಸ್ಪೈಸ್‌ ಸಿಬ್ಬಂದಿಗೆ ಕರುಣಾಶ್ರಮದಲ್ಲಿ ತರಬೇತಿ ಕೊಡಿಸಲಾಗಿದೆ. ನಾವು ಸದ್ಯಕ್ಕೆ 30 ರೋಗಿಗಳಿಗೆ ಅವಕಾಶ ಕಲ್ಪಿಸಿದ್ದು, ಬೇಡಿಕೆ ಹೆಚ್ಚಾದರೆ ಇನ್ನೊಂದು ಹಂತದ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.

ಹಾಸ್ಪೈಸ್‌ ಕಟ್ಟಡಕ್ಕೆ ನವನಗರ ಕ್ಯಾನ್ಸರ್‌ ಆಸ್ಪತ್ರೆ ಜಾಗದ ವ್ಯವಸ್ಥೆ ಕಲ್ಪಿಸಿದ್ದು, ಕಟ್ಟಡದ ಮುಂದಿನ ಜಾಗವನ್ನು ಬಳಸಿಕೊಳ್ಳಲು ತಿಳಿಸಿದ್ದು, ಉತ್ತಮ ಉದ್ಯಾನವನ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಡಾ| ವಿ.ಬಿ. ನಿಟ್ಟಾಲಿ, ಎಚ್‌. ಆರ್‌. ಪ್ರಹ್ಲಾದರಾವ್‌, ಫೌಂಡೇಶನ್‌ ಸಿಇಒ ಅಜಿತ ಕುಲಕರ್ಣಿ, ಅಮೃತಭಾಯಿ ಪಟೇಲ್‌, ಅಮರೇಶ ಹಿಪ್ಪರಗಿ, ಸುಶಾಂತರಾಜೆ ಮಟಣಿಕರ ಇದ್ದರು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.