ಆಲೂರು ತಾಲೂಕು ರೈಲ್ವೆ ಸೇವೆ ಕೊರತೆ ಬಗ್ಗೆ ಪ್ರಸಾಪ್ತ


Team Udayavani, Mar 26, 2022, 3:51 PM IST

ಆಲೂರು ತಾಲೂಕು ರೈಲ್ವೆ ಸೇವೆ ಕೊರತೆ ಬಗ್ಗೆ ಪ್ರಸಾಪ್ತ

ಆಲೂರು: ಮಾ.4ರ ಉದಯವಾಣಿ ಪತ್ರಿಕೆ ಸಂಚಿಕೆ ಯಲ್ಲಿ “ಆಲೂರು ತಾಲೂಕಿಗೆ ರೈಲ್ವೇ ಸೇವೆ ಲಭಿಸುತ್ತಾ’ ಎಂಬ ಶಿರ್ಷಿಕೆಯಡಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಈ ಹಿನ್ನೆಲೆ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಉದಯವಾಣಿ ಫಲಶೃತಿಯಾಗಿ ವಿಧಾನಸೌಧ ಅಧಿವೇಶನದಲ್ಲಿ ರೈಲು ನಿಲುಗಡೆ ಬಗ್ಗೆ ಮಾತನಾಡಿದ್ದಾರೆ.

ಆಲೂರು ತಾಲೂಕಿನ ಹಂತನಮನೆ ಬಳಿ ಸುಮಾರು ಮೂರ್ನಾಲ್ಕು ದಶಕಗಳಿಂದ ಸುಸಜ್ಜಿತವಾದ ರೈಲ್ವೇ ನಿಲ್ದಾಣವಿದ್ದು ಅದರೆ ಇದುವರೆವಿಗೂ ರೈಲು ನಿಲುಗಡೆ ಭಾಗ್ಯ ಮಾತ್ರ ಇರಲಿಲ್ಲ. ಈ ಬಗ್ಗೆ ಹಲವು ಬಾರಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ.ದೇವೇ ಗೌಡ, ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅದರೆ ಯಾವ ಪ್ರಯೋಜನವಾಗಿರಲಿಲ್ಲ. ಇದು ಜನಸಾಮಾನ್ಯರಲ್ಲಿ ಅಸಮಾಧಾನ ವ್ಯಕ್ತಪಡಿಸಿ ದ್ದರು.

ಏಪ್ರಿಲ್‌ನಲ್ಲಿ ಅಧಿಸೂಚನೆ ಸಾಧ್ಯತೆ: ರಾಧಮ್ಮ ಜನಸ್ಪಂಧನ ಸಂಸ್ಥೆ ಜನಸಾಮಾನ್ಯರ ಅಹವಾಲು ಪಡೆದು ಸಂಬಂಧಪಟ್ಟ ಕೇಂದ್ರ ಸರ್ಕಾರದ ರೈಲ್ವೇ ಮಂತ್ರಿಗಳು ಹಾಗೂ ರೈಲ್ವೇ ಇಲಾಖೆ ಹಿರಿಯ ಅಧಿಕಾರಿಗಳು ಪತ್ರ ಬರೆದು ರೈಲು ನಿಲುಗಡೆಗೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆ ಸಂಬಂಧಪಟ್ಟ ರೈಲ್ವೇ ಅಧಿಕಾರಿಗಳು ಈಗಾಗಲೇ ರೈಲು ನಿಲುಗಡೆ ಸಂಬಂಧಪಟ್ಟಂತೆ ಮಾಹಿತಿ ಕಲೆ ಹಾಕಿದ್ದು ಏಪ್ರಿಲ್‌ ಮೊದಲ ವಾರದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪತ್ರಿಕೆ ವರದಿಯಿಂದ ಎಚ್ಚೆತ್ತ ಶಾಸಕರು: ಸುಮಾರು ಹದಿನಾಲ್ಕು ವರ್ಷಗಳಿಂದ ಮೂರು ಬಾರಿ ಶಾಸಕರಾಗಿರುವ ಕುಮಾರಸ್ವಾಮಿ ರೈಲ್ವೇ ವಿಷಯದಲ್ಲಿ ಇದುವರೆಗೂ ಮೌನ ವಹಿಸಿದ್ದರು. ಉದಯವಾಣಿ ದಿನಪತ್ರಿಕೆ ವರದಿ ನಂತರ ಶಾಸಕರಿಗೆ ಜ್ಞಾನೋದಯವಾಗಿದೆ. ನಾನು ಕೂಡ ಆಲೂರಿನ ಜನರ ಹಿತದೃಷ್ಟಿಯಿಂದ ಗಟ್ಟಿಯಾಗಿ ಮಾತನಾಡಿದ್ದೆ. ರಾಧಮ್ಮ ಸಂಸ್ಥೆ ಕೂಡ ಕೇಂದ್ರದ ಮಂತ್ರಿ ಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಶಾಸಕರು ಈಗ ವಿಧಾನಸಭೆ ಅಧಿವೇಶನದಲ್ಲಿ ಮಾತ ನಾಡಿರುವುದು ಸಂತೋಷದ ವಿಷಯ. ಇದು ರಾಜಕೀಯ ಗಿಮಿಕ್‌ ಆಗಬಾರದು ಎಂದರು.

ರೈಲ್ವೆ ಇಲಾಖೆ ಕ್ರಮ: ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥ ಹೇಮಂತ್‌ ಕುಮಾರ್‌ ಉದಯವಾಣಿ ಪತ್ರಿಕೆಯೊಂದಿಗೆ ಮಾತನಾಡಿದರು. ಆಲೂರು ಪಟ್ಟಣದ ರೈಲ್ವೇ ನಿಲ್ದಾಣದಲ್ಲಿ ರೈಲು ನಿಲುಗಡೆ ಬಗ್ಗೆ ನಮ್ಮ ಸಂಸ್ಥೆ ಕೇಂದ್ರ ಸರ್ಕಾರದ ರೈಲ್ವೇ ಮಂತ್ರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿತ್ತು. ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಮೂರು ತಿಂಗಳ ಮಟ್ಟಿಗೆ ಪ್ರಯೋಗಿಕ ವಾಗಿ ರೈಲು ನಿಲುಗಡೆಗೆ ಕ್ರಮ ಕೈಗೊಂಡಿದ್ದಾರೆ.

ರಾಜಕೀಯ ಗಿಮಿಕ್‌ ಆಗದಿರಲಿ: ಇದುವರೆವಿಗೂ ಈ ಬಗ್ಗೆ ದ್ವನಿ ಎತ್ತದ ಶಾಸಕ ಎಚ್‌. ಕೆ.ಕುಮಾರಸ್ವಾಮಿ ಶುಕ್ರವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಮೂರು ಬಾರಿ ಇವರೇ ಶಾಸಕರಾಗಿದ್ದಾರೆ. ಇವರಿಗೆ ತಾಲೂಕಿನ ಜನ ರೈಲು ನಿಲುಗಡೆ ಮಾಡಿಸಬೇಡಿ ಎಂದು ಕೈ ಹಿಡಿದಿದ್ದರಾ? ರೈಲ್ವೇ ಇಲಾಖೆ ರೈಲು ನಿಲುಗಡೆ ಬಗ್ಗೆ ಆಗುತ್ತಿರುವ ಬೆಳವಣಿಗೆ ತಿಳಿದು ಇದರ ಫಲ ಬೇರೆ ಯವರಿಗೆ ಸೀಗಬಾರದು ಎನ್ನುವ ಉದ್ದೇಶದಿಂದ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಕ್ಷೇತ್ರದ ಜನರ ಗಮನ ಬೇರೆಡೆಗೆ ಹೋಗ ಬಾರದು ಎನ್ನುವ ತಂತ್ರ ಅಷ್ಟೇ ಎಂದು ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥ ಹೇಮಂತ್‌ ಕುಮಾರ್‌ ಲೇವಡಿ ಮಾಡಿದ್ದಾರೆ.

ಮಲೆನಾಡು ಕರ್ನಾಟಕ ಘೊಷಣೆಗೆ ಶಾಸಕರ ಆಗ್ರಹ :

ವಿಧಾನಸಭೆ: ಮಲೆನಾಡು ಪ್ರದೇಶ ಹೊಂದಿ ರುವ ಜಿಲ್ಲೆಗಳನ್ನು ಒಟ್ಟುಗೂಡಿಸಿ ಅಭಿವೃದ್ಧಿ ದೃಷ್ಟಿ ಯಿಂದ ಮಲೆನಾಡು ಕರ್ನಾಟಕ ಎಂದು ಘೋ ಷಣೆ ಮಾಡಬೇಕೆಂದು ಜೆಡಿಎಸ್‌ ಶಾಸಕ ಎಚ್‌. ಕೆ. ಕುಮಾರಸ್ವಾಮಿ ಮನವಿ ಮಾಡಿದರು. ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ಧಿ ದೃಷ್ಟಿಯಿಂದ ಕಿತ್ತೂರು ಕರ್ನಾಟಕ ಘೋಷಣೆ ಮಾಡಿದಂತೆ ಮಲೆನಾಡು ಕರ್ನಾಟಕ ಘೋಷಣೆ ಮಾಡಿ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದರು.

ಅನುದಾನದ ಹಂ ಚಿಕೆಯಲ್ಲಿ ಸಾಕಷ್ಟು ತಾರತಮ್ಯವಾಗುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ನೀಡು ವ ವವ್ಯಸ್ಥೆ ಆಗಬೇಕು. ಉಡುಪಿ, ದಕ್ಷಿಣ ಕನ್ನಡ ದಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ, ಅಲ್ಲಿಗೆ 30 ಕೋಟಿ ರೂ. ನೀಡುತ್ತಾರೆ. ನಮಗೆ 2 ಕೋಟಿ ಕೊಡುತ್ತಾರೆ. ಈ ತಾರತಮ್ಯ ನಿಲ್ಲಬೇಕು. ಇಲ್ಲದಿ ದ್ದರೇ ಕಾನೂನು ಮೆಟ್ಟಿಲು ಹತ್ತಬೇಕಾಗುತ್ತದೆ ಎಂದು ಹೇಳಿದರು. ಸರ್ಕಾರದಲ್ಲಿ ಅನಗತ್ಯ ಹುದ್ದೆಗಳನ್ನು ಕಡಿತ ಮಾಡಬೇಕು. ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್‌. ಕೆ.ಕುಮಾರಸ್ವಾಮಿ ಸಲಹೆ ನೀಡಿದರು.

 

– ಟಿ.ಕೆ.ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.