ಸಾಗರ ಕ್ಷೇತ್ರದ ಗರಿಮೆ ಹೆಚ್ಚಳಕ್ಕೆ ಗುಂಡಾ ಜೋಯಿಸ್ ಆಯ್ಕೆ ಕಾರಣ: ಹಾಲಪ್ಪ


Team Udayavani, Mar 26, 2022, 6:08 PM IST

ಸಾಗರ ಕ್ಷೇತ್ರದ ಗರಿಮೆ ಹೆಚ್ಚಳಕ್ಕೆ ಗುಂಡಾ ಜೋಯಿಸ್ ಆಯ್ಕೆ ಕಾರಣ: ಹಾಲಪ್ಪ

ಸಾಗರ: ಕೆಳದಿ ಇತಿಹಾಸ ಸಂಶೋಧನಾ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಗುಂಡಾ ಜೋಯಿಸ್ ಅವರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜನೆ ಗೊಂಡಿರುವುದು ಸಾಗರ ಕ್ಷೇತ್ರದ ಗರಿಮೆ ಹೆಚ್ಚಿಸಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ಅಣಲೆಕೊಪ್ಪದಲ್ಲಿ  ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಡಾ. ಕೆಳದಿ ಗುಂಡಾ ಜೋಯಿಸ್ ಅವರನ್ನು ಅಧಿಕೃತವಾಗಿ ಆಹ್ವಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಜೋಯಿಸ್ ಅವರು ಎಲೆಮರೆಯ ಕಾಯಿಯಂತೆ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಬಂದವರು. ಇತಿಹಾಸಕ್ಕೆ ಸಂಬಂಧಿಸಿದ ಸಾಕಷ್ಟು ಕ್ರತಿಗಳನ್ನು ಅವರು ಬರೆದಿದ್ದಾರೆ. ಅದರಲ್ಲಿಯೂ ಕೆಳದಿ ಇತಿಹಾಸ ಜನಮಾನಸದಲ್ಲಿ ನೆಲೆಯೂರುವಂತೆ ಮಾಡುವಲ್ಲಿ ಇವರ ಪಾತ್ರ ಪ್ರಮುಖವಾಗಿದ್ದು, ನಮ್ಮೂರಿನ ಜೋಯಿಸ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜನೆ ಮಾಡಿರುವ ಪರಿಷತ್‌ಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಹ್ವಾನ ಸ್ವೀಕರಿಸಿ ಮಾತನಾಡಿದ ಗುಂಡಾ ಜೋಯಿಸ್, ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ನಾನು ಆಯ್ಕೆಯಾಗಿರುವುದು ಸಂತೋಷ ತಂದಿದೆ. ಈ ಸ್ಥಾನವು ಕೆಳದಿ ಇತಿಹಾಸಕ್ಕೆ ಸಂದ ಗೌರವವಾಗಿದೆ. ಕೆಳದಿ ಸಂಸ್ಥಾನವು ಮೈಸೂರು ಸಂಸ್ಥಾನಕ್ಕಿಂತ ನಾಲ್ಕುಪಟ್ಟು ದೊಡ್ಡದು. ಆದರೆ ಕೆಳದಿ ಇತಿಹಾಸವನ್ನು ಮರೆಮಾಚುವ ಕೆಲಸ ಲಾಗಾಯ್ತಿನಿಂದ ನಡೆದಿತ್ತು. ಇದೀಗ ಆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನನ್ನನ್ನು ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜನೆ ಮಾಡಿದ್ದರಿಂದ ಇತಿಹಾಸ ತನ್ನ ಪುಟಗಳನ್ನು ಮತ್ತೆ ತೆರೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್., ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಎನ್.ಲಲಿತಮ್ಮ, ಆರ್.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ ಇನ್ನಿತರರು ಉಪಸ್ಥಿತರಿದ್ದರು. ಕುಗ್ವೆ ಕಲಾತಂಡ ಪ್ರಾರ್ಥಿಸಿದರು. ವಿ.ಟಿ.ಸ್ವಾಮಿ ಸ್ವಾಗತಿಸಿದರು. ಜಿ.ನಾಗೇಶ್ ವಂದಿಸಿದರು. ನಾರಾಯಣಮೂರ್ತಿ ನಿರೂಪಿಸಿದರು.

ಟಾಪ್ ನ್ಯೂಸ್

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.