ಬಾಲಕಿಯ ಗ್ಯಾಂಗ್ ರೇಪ್ : ಕಾಂಗ್ರೆಸ್ ಶಾಸಕನ ಪುತ್ರ ಸೇರಿ ಐವರ ಮೇಲೆ ಕೇಸ್
ಅಶ್ಲೀಲ ವಿಡಿಯೋ ಮಾಡಿ 5 ಲಕ್ಷ ರೂ., ಚಿನ್ನಾಭರಣಗಳ ಸುಲಿಗೆ
Team Udayavani, Mar 26, 2022, 6:53 PM IST
ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕರ ಪುತ್ರ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪ್ರಮುಖ ಆರೋಪಿಯನ್ನು ಅಲ್ವಾರ್ ಜಿಲ್ಲೆಯ ರಾಜ್ಗಢ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೋಹರಿ ಲಾಲ್ ಮೀನಾ ಅವರ ಪುತ್ರ ದೀಪಕ್ ಮೀನಾ ಎಂದು ಪೊಲೀಸರು ಗುರುತಿಸಿದ್ದಾರೆ.
ಐವರು ಆರೋಪಿಗಳಲ್ಲಿ ಒಬ್ಬನಾದ ವಿವೇಕ್ ಶರ್ಮಾ ಸಂತ್ರಸ್ತೆಯ ಬಳಿ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ 15 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮಾಂದಾವರ್ ಪೊಲೀಸ್ ಠಾಣೆಯ ಎಸ್ಎಚ್ಒ ನಾಥು ಲಾಲ್ ಹೇಳಿದ್ದಾರೆ.
ರಾಜ್ಗಢ ಶಾಸಕರ ಪುತ್ರ ದೀಪಕ್ ಮೀನಾ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು,ಇತರ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಐಪಿಸಿಯ ಇತರ ಸೆಕ್ಷನ್ಗಳ ಅಡಿಯಲ್ಲಿ ಅಪ್ರಾಪ್ತ ವಯಸ್ಕ ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯು ಬಾಲಕಿಯನ್ನು ಮಾಹ್ವಾ-ಮಂದಾವರ್ ರಸ್ತೆಯಲ್ಲಿರುವ ಹೋಟೆಲ್ಗೆ ಕರೆದೊಯ್ದು ಅಪರಾಧ ಎಸಗಿದ್ದಾನೆ, ಆಕೆಗೆ ಬೆದರಿಕೆ ಹಾಕಲು ಅಶ್ಲೀಲ ವಿಡಿಯೋ ಕೂಡ ಮಾಡಿದ್ದಾರೆ ಎಂದು ಎಸ್ಎಚ್ಒ ಹೇಳಿದ್ದಾರೆ.
ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಈ ವಿಚಾರದಲ್ಲಿ ಕುಟುಂಬಸ್ಥರು ಆರಂಭದಲ್ಲಿ ಕಳ್ಳತನದ ದೂರು ದಾಖಲಿಸಿದ್ದರು. ಈ ಕೃತ್ಯದಲ್ಲಿ ಶರ್ಮಾ ಭಾಗಿಯಾಗಿರುವುದು ಕಂಡುಬಂದಿದೆ, ನಂತರ ಸಂತ್ರಸ್ತ ಬಾಲಕಿ ತನ್ನ ತಾಯಿಯೊಂದಿಗೆ ತನ್ನ ಕಷ್ಟವನ್ನು ಹಂಚಿಕೊಳ್ಳಲು ಧೈರ್ಯ ತೋರಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.