ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ: ಉಭಯ ಜಿಲ್ಲೆಗಳು ಸನ್ನದ್ಧ
ದ.ಕ.: 99 ಪರೀಕ್ಷಾಕೇಂದ್ರಗಳು; 29,712 ವಿದ್ಯಾರ್ಥಿಗಳು; ಉಡುಪಿ: 957 ಅಧಿಕಾರಿ, ಸಿಬಂದಿ
Team Udayavani, Mar 27, 2022, 6:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15,615 ಹುಡುಗರು ಮತ್ತು 14,097 ಹುಡುಗಿಯರ ಸಹಿತ ಒಟ್ಟು 29,712 ಮಂದಿ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ.
ಜಿಲ್ಲೆಯ 7 ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ಒಟ್ಟು 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 523 ಶಾಲೆಗಳ ವಿದ್ಯಾರ್ಥಿ ಗಳಿಗೆ ಪರೀಕ್ಷೆ ಬರೆಯಲು 1,489 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ವಿಶ್ರಾಂತಿಗಾಗಿ 198 ಕೊಠಡಿಗಳನ್ನು ಕಾದಿರಿಸಲಾಗಿದೆ.
99 ಪರೀಕ್ಷಾ ಕೇಂದ್ರಗಳಿಗೆ 99 ಮುಖ್ಯ ಅಧೀಕ್ಷಕರು, 24 ಉಪ ಮುಖ್ಯ ಅಧೀಕ್ಷಕರು, 99 ಕಸ್ಟೋಡಿಯನ್, 99 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, 99 ಮಂದಿ ಮೊಬೈಲ್ ಫೋನ್ ಸ್ವಾಧೀನಾಧಿಕಾರಿಗಳು, 35 ಮಾರ್ಗಾಧಿಕಾರಿಗಳು, 1588 ಮಂದಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸುಧಾಕರ್ ಕೆ. ಮಾಹಿತಿ ನೀಡಿದ್ದಾರೆ.
ಬಂಟ್ವಾಳದಲ್ಲಿ 17 ಪರೀಕ್ಷಾ ಕೇಂದ್ರಗಳಿದ್ದು, 96 ಶಾಲೆಗಳ ವಿದ್ಯಾರ್ಥಿಗಳು 292 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಬೆಳ್ತಂಗಡಿಯಲ್ಲಿ 14 ಕೇಂದ್ರಗಳ 205 ಕೊಠಡಿಗಳಲ್ಲಿ 72 ಶಾಲೆಗಳ ವಿದ್ಯಾರ್ಥಿಗಳು, ಮಂಗಳೂರು ಉತ್ತರದ 20 ಕೇಂದ್ರಗಳ 281 ಕೊಠಡಿಗಳಲ್ಲಿ 98 ಶಾಲೆಗಳ ವಿದ್ಯಾರ್ಥಿಗಳು, ಮಂಗಳೂರು ದಕ್ಷಿಣದಲ್ಲಿ 23 ಕೇಂದ್ರಗಳ 273 ಕೊಠಡಿಗಳಲ್ಲಿ 110 ಶಾಲಾ ವಿದ್ಯಾರ್ಥಿಗಳು, ಮೂಡಬಿದಿರೆಯ 5 ಕೇಂದ್ರಗಳ 92 ಕೊಠಡಿಗಳಲ್ಲಿ 31 ಶಾಲೆಗಳ ವಿದ್ಯಾರ್ಥಿಗಳು, ಪುತ್ತೂರಿನ 14 ಕೇಂದ್ರಗಳ 248 ಕೊಠಡಿಗಳಲ್ಲಿ 28 ಶಾಲೆಗಳ ವಿದ್ಯಾರ್ಥಿಗಳು, ಸುಳ್ಯದ 6 ಕೇಂದ್ರಗಳ 98 ಕೊಠಡಿಗಳಲ್ಲಿ 36 ಶಾಲೆಗಳ ವಿದ್ಯಾರ್ಥಿಗಳ ಸಹಿತ ಒಟ್ಟು 523 ಶಾಲೆಗಳ ವಿದ್ಯಾರ್ಥಿಗಳು ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಒಟ್ಟು 29,712 ವಿದ್ಯಾರ್ಥಿಗಳ ಪೈಕಿ 28,639 ರೆಗ್ಯುಲರ್, 932 ಖಾಸಗಿ ಹಾಗೂ 141 ಪುನರಾವರ್ತಿತ ವಿದ್ಯಾರ್ಥಿಗಳು.
ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಸಾಮಾನ್ಯವಾಗಿ ಜಿಲ್ಲಾ ಕೇಂದ್ರದಲ್ಲಿ ಇರುತ್ತದೆ. ಆದರೆ ಈ ಬಾರಿ ಪುತ್ತೂರು, ಸುಳ್ಯ ಕಡಬ, ಬೆಳ್ತಂಗಡಿ ತಾಲೂಕುಗಳ ಖಾಸಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ಇದೆ ಎಂದು ಡಿಡಿಪಿಐ ಸುಧಾಕರ್ ತಿಳಿಸಿದ್ದಾರೆ. ಎಲ್ಲ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆದಿದೆ ಎಂದು ಡಿಡಿಪಿಐ ಸುಧಾಕರ್ ತಿಳಿಸಿದ್ದಾರೆ.
200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಹೊರಡಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮತ್ತು ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.
8 ಮಂದಿ ಎಂಡೋ
ಪೀಡಿತ ವಿದ್ಯಾರ್ಥಿಗಳು
8 ಮಂದಿ ಎಂಡೋಪೀಡಿತ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವುದು ಈ ಬಾರಿಯ ವಿಶೇಷ. ಈ 8 ಮಂದಿ ವಿದ್ಯಾರ್ಥಿಗಳಿಗಾಗಿ ಪುತ್ತೂರು ತಾಲೂಕಿನ ರಾಮಕುಂಜ ಪದವಿಪೂರ್ವ ಕಾಲೇಜಿನಲ್ಲಿ ಉಪ ಪರೀಕ್ಷಾ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. 5 ಮಂದಿ ಖಾಸಗಿ ಮತ್ತು 3 ಮಂದಿ ರೆಗ್ಯುಲರ್ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಉಡುಪಿ: 957 ಅಧಿಕಾರಿ, ಸಿಬಂದಿ
ಉಡುಪಿ: ಸೋಮವಾರ ಆರಂಭವಾಗಲಿರುವ ಎಸೆಸೆಲ್ಸಿ ಪರೀಕ್ಷೆಗೆ ಜಿಲ್ಲೆಯ 58 ಕೇಂದ್ರಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, 266 ಪ್ರೌಢಶಾಲೆಗಳ 14,022 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆ ಭದ್ರತೆ ಸಹಿತ ವಿವಿಧ ಕಾರ್ಯಗಳಿಗೆ 957 ಮಂದಿ ಯನ್ನು ನಿಯೋಜಿಸಲಾಗಿದೆ. ಮುಖ್ಯ ಅಧೀಕ್ಷಕರು, ಉಪ ಮುಖ್ಯಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು ಕೊಠಡಿ ಮೇಲ್ವಿಚಾರಕರಿಗೆ ತರಬೇತಿ ನೀಡ ಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆ ಪಡೆಯಲು 46 ಮಾರ್ಗಾಧಿ ಕಾರಿಗಳ ತಂಡಗಳನ್ನು ರಚಿಸಲಾಗಿದೆ.
ಪರೀಕ್ಷೆ ಅವ್ಯವಹಾರ ತಡೆಯಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಸಂಚಾರಿ ವಿಚಕ್ಷಣ ದಳ ನೇಮಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಸ್ಥಾನಿಕ ಜಾಗೃತ ದಳ, ಪೊಲೀಸ್ ಪಹರೆ, ತುರ್ತು ಚಿಕಿತ್ಸಾ ಘಟಕ ಸ್ಥಾಪಿಸಲಾಗಿದೆ. ಕೇಂದ್ರದ ಸುತ್ತಮುತ್ತ 200 ಮೀ. ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ ಮತ್ತು ಎಸ್‌ಒಪಿ ಅನುಸಾರ ಕ್ರಮ ತೆಗೆದುಕೊಳ್ಳಲಾಗಿದೆ.
ಸಮವಸ್ತ್ರ ನಿಯಮ ಪಾಲನೆ
ಸರಕಾರಿ ಶಾಲೆಯಲ್ಲಿ ಸರಕಾರ ನಿಗದಿಪಡಿಸಿರುವ ಸಮವಸ್ತ್ರ ಹಾಗೂ ಖಾಸಗಿ, ಅನುದಾನಿತ ಶಾಲೆಗಳಲ್ಲಿ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.
ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ವಿದ್ಯಾರ್ಥಿ ಗಳು ಶಾಲೆಯ ಸಮವಸ್ತ್ರ ದಲ್ಲಿ ಬಂದು ಪರೀಕ್ಷೆ ಬರೆಯಬೇಕು.
– ಕೂರ್ಮಾ ರಾವ್ ಎಂ.,
ಜಿಲ್ಲಾಧಿಕಾರಿ, ಉಡುಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.