ಮದುವೆಗೆ ಬಂದವರು ಮಸಣ ಸೇರಿದರು! 50ಅಡಿ ಪ್ರಪಾತಕ್ಕೆ ಬಿದ್ದಬಸ್; 7ಮಂದಿ ಸಾವು, 45ಜನರಿಗೆ ಗಾಯ
Team Udayavani, Mar 27, 2022, 8:39 AM IST
ತಿರುಪತಿ: ಮದುವೆ ಸಮಾರಂಭಕ್ಕೆ ತೆರಳಿದ್ದ ಜನರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಂದರಕ್ಕೆ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್‌ನಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ನಡೆದಿದೆ. ಪರಿಣಾಮವಾಗಿ, ಏಳು ಜನರು ಸಾವನ್ನಪ್ಪಿ, 45 ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಭಾಕರಪೇಟ್ ಪ್ರದೇಶವು ತಿರುಪತಿಯಿಂದ ಕೇವಲ 25 ಕಿಲೋಮೀಟರ್ ದೂರದಲ್ಲಿದೆ.
ಖಾಸಗಿ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ 52 ಜನರನ್ನು ಹೊತ್ತೊಯ್ಯುತ್ತಿತ್ತು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಅಡುಪುತಪ್ಪಿ ಕಣಿವೆಗೆ ಬಿದ್ದಿದೆ.
ಇದನ್ನೂ ಓದಿ:ಬಾಲಕಿಯರನ್ನು ಬಳಸಿ ವೇಶ್ಯಾವಾಟಿಕೆ ಪ್ರಕರಣ: ಮಾಲ್, ಪಾರ್ಕ್, ಥಿಯೇಟರ್‌ಗಳಲ್ಲಿ ಆಮಿಷ!
“ಚಾಲಕರ ನಿರ್ಲಕ್ಷ್ಯದಿಂದ ಬಸ್ ಬಿದ್ದು ಅಪಘಾತ ಸಂಭವಿಸಿದೆ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿರುಪತಿಯ ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.
Andhra Pradesh | 7 people killed and 45 injured in a bus accident last night in Chittoor
Accident happened as the bus fell off the cliff due to driver’s negligence in Bakrapeta, 25 kms away from Tirupati. Aggrieved were shifted to a nearby hospital: SP, Tirupati pic.twitter.com/Vi3DFj36Uy
— ANI (@ANI) March 27, 2022
ಪೊಲೀಸರು, ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ, ಕಣಿವೆ 50 ಅಡಿ ಆಳವಿರುವುದರಿಂದ ಕತ್ತಲೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳಗ್ಗೆಯೂ ಕಾರ್ಯಾಚರಣೆ ಮುಂದುವರೆಯಿತು. ಬದುಕುಳಿದವರನ್ನು ಹಗ್ಗದ ಸಹಾಯದಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.