ಸಾವಂತ್ ಪ್ರಮಾಣ ವಚನಕ್ಕೆ ಬಿಗಿ ಭದ್ರತೆ : 3 ಉಚಿತ ಸಿಲಿಂಡರ್ ನಿರೀಕ್ಷೆಯಲ್ಲಿ ಗೋವಾ ಜನತೆ
Team Udayavani, Mar 27, 2022, 5:51 PM IST
ಪಣಜಿ: ಸೋಮವಾರ ಬೆಳಿಗ್ಗೆ ಪಣಜಿ ಸಮೀಪದ ಬಾಂಬೋಲಿಂ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಪ್ರಮೋದ ಸಾವಂತ್ ಮತ್ತು ಅವರ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ , ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ವಿವಿದೆಡೆಯಿಂದ ಸುಮಾರು 60,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವುದರಿಂದ ಬಹುಹಂತದ ಭದ್ರತೆಯನ್ನು ಕಲ್ಪಿಸಲಾಗುವುದು. ಆಗಮಿಸುವ ಜನರಲ್ಲಿ ಕಪ್ಪು ಮಾಸ್ಕ್ ಅಥವಾ ಬಟ್ಟೆ ಧರಿಸಿದವರಿಗೆ ಪ್ರವೇಶಾವಕಾಶ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ನಡೆಯಲಿದೆ. ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವವರು ಬೆಳಿಗ್ಗೆ 10 ಗಂಟೆಗೆ ಸ್ಟೇಡಿಯಂಗೆ ಆಗಮಿಸುವಂತೆ ಬಿಜೆಪಿ ಮನವಿ ಮಾಡಿದೆ.
ಬುಲೆಟ್ ಪ್ರೂಫ್ ವಾಹನಗಳ ಆಗಮನ
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿರುವುದರಿಂದ ಭದ್ರತೆಗಾಗಿ 6 ಬುಲೆಟ್ ಫ್ರೂಫ್ ಮತ್ತು ಜಾಮರ್ ವಾಹನಗಳು ಈಗಾಗಲೇ ರಾಜ್ಯಕ್ಕೆ ಆಗಮಿಸಿವೆ. ಬುಲೆಟ್‍ಪ್ರೂಫ್ ಲ್ಯಾಂಡ್ ಕ್ರೂಜರ್ ಮತ್ತು ಟೊಯೊಟಾ ಫಾರ್ಚುನರ್ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಪ್ರಮುಖ ನಾಯಕರು ಬಳಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಲಿಂಡರ್ ನಿರೀಕ್ಷೆ ಆರಂಭ
ಗೋವಾದಲ್ಲಿ ಪ್ರಸಕ್ತ ಬಾರಿ ಬಿಜೆಪಿಯು ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ಕುಟುಂಬವೊಂದಕ್ಕೆ ವರ್ಷಕ್ಕೆ 3 ಸಿಲಿಂಡರ್ ಉಚಿತ ನೀಡುವ ಭರವಸೆ ನೀಡಿತ್ತು.ಉಚಿತ ಸಿಲಿಂಡರ್ ಘೋಷಣೆಯ ನಿರೀಕ್ಷೆ ಹೆಚ್ಚಾಗಿದೆ.
2012 ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಪ್ರಮುಖವಾಗಿ ಗೃಹಿಣಿಯರಿಗೆ ಮಾಸಿಕವಾಗಿ 1500 ರೂ ಭತ್ತೆ ನೀಡುವ ಗೃಹ ಆಧಾರ, ಲಾಡಲಿ ಲಕ್ಷ್ಮಿ, ಇವು ಪ್ರಮುಖ ಯೋಜನೆಗಳಾಗಿದೆ. ಪ್ರಮಾಣವಚನ ಸಮಾರಂಭ ಪೂರ್ಣಗೊಂಡು ಒಂದು ವಾರದಲ್ಲಿ ಉಚಿತ ಸಿಲಿಂಡರ್ ನೀಡುವ ಯೋಜನೆಯ ಘೋಷಣೆಯಾಗುವ ನಿರೀಕ್ಷೆಯಿದೆ.
ಸದ್ಯ ಅಡುಗೆ ಅನೀಲ ಸಿಲಿಂಡರ್ ದರ ಸುಮಾರು 1000 ರೂ ಗೆ ತಲುಪಿದ್ದು, ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಉಚಿತ ಸಿಲಿಂಡರ್ ಘೋಷಣೆಯ ನಿರೀಕ್ಷೆ ಜನರಲ್ಲಿ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.