ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ
Team Udayavani, Mar 27, 2022, 6:25 PM IST
ಮೂಡಲಗಿ: ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೋಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಉಪಕ್ರಮದ ಆರಂಭಿಕ ಸುತ್ತಿನಲ್ಲಿ ಎನ್‌ಜಿಒಗಳು/ಖಾಸಗಿ ಶಾಲೆಗಳು/ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 21 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ಅದರಲ್ಲಿ ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯು ಸೇರಿದೆ ಎಂದರು.
ಜಿಲ್ಲೆಯ ಸಂಗೊಳ್ಳಿ ಗ್ರಾಮದ 100 ಎಕರೆ ಜಾಗದಲ್ಲಿ ಸುಮಾರು 230 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಅದನ್ನು ಕೇಂದ್ರ ರಕ್ಷಣಾ ಸಚಿವಾಲಯ ತನ್ನ ಅಧೀನಕ್ಕೆ ಪಡೆದು ಮುನ್ನಡೆಸಿಕೊಂಡು ಹೊಗಲು ಕರ್ನಾಟಕ ಸರ್ಕಾರ ಈಗಾಗಲೇ ಮನವಿ ಮಾಡಿತ್ತು ಎಂದರು.
ಸದರಿ ವಿಷಯದ ಕುರಿತು ನಾನು ಕೂಡ ಕೇಂದ್ರ ಸಚಿವರಿಗೆ ಪತ್ರ ಮುಖೇನ ಒತ್ತಾಯ ಮಾಡಿದ್ದೇ, ಅಲ್ಲದೇ ಮಾ.15 ರಂದು ರಾಜ್ಯಸಭೆಯ ಕಲಾಪದ ಶೂನ್ಯವೇಳೆಯಲ್ಲಿ ಈ ವಿಷಯವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಕರ್ನಾಟಕದ ಜನತೆಯ ಮನವಿಯನ್ನು ಗಮನಿಸಿ ಕೇಂದ್ರ ರಕ್ಷಣಾ ಸಚಿವಾಲಯ ಸೈನಿಕ ಶಾಲೆಯನ್ನು ತನ್ನ ಅಧೀನದಲ್ಲಿ ಮುನ್ನಡಿಸಿಕೊಂಡು ಹೊಗಲಿಕ್ಕೆ ಅನುಮೋದನೆ ನೀಡಿರುವುದು ಇದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಮೂರು ರಾಜ್ಯಗಳ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಹಾಗೂ ಹೊಸ ಸೈನಿಕ ಶಾಲೆಯು ಈಗಿರುವ ಶಾಲೆಗಳಿಗಿಂತ ಅತ್ಯಂತ ವಿಭಿನ್ನವಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸಾವಂತ್ ಪ್ರಮಾಣ ವಚನಕ್ಕೆ ಬಿಗಿ ಭದ್ರತೆ : 3 ಉಚಿತ ಸಿಲಿಂಡರ್ ನಿರೀಕ್ಷೆಯಲ್ಲಿ ಗೋವಾ ಜನತೆ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಈ ಕಾರ್ಯಕ್ಕೆ ಸಹಕಾರ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದಿಂದ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.