ಸಂಚಾರ ನಿಯಮ ಉಲ್ಲಂಘನೆಗೆ ಎಸ್‌ಎಂಎಸ್‌ ದಂಡ!

ಈ ಹಿಂದೆ ಅಂಚೆ ಮೂಲಕ ನೋಟಿಸ್‌ ಕೊಡಲಾಗುತ್ತಿತ್ತು. ಅದಕ್ಕಾಗಿಯೇ ಪೊಲೀಸರ ಶ್ರಮ, ಸಮಯ, ಹಣ ವ್ಯಯವಾಗುತ್ತಿತ್ತು

Team Udayavani, Mar 28, 2022, 8:15 AM IST

ಸಂಚಾರ ನಿಯಮ ಉಲ್ಲಂಘನೆಗೆ ಎಸ್‌ಎಂಎಸ್‌ ದಂಡ!ಸಂಚಾರ ನಿಯಮ ಉಲ್ಲಂಘನೆಗೆ ಎಸ್‌ಎಂಎಸ್‌ ದಂಡ!

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಕುರಿತು ಸಂಚಾರ ಪೊಲೀಸರ ಮೊಬೈಲ್‌ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಲಕ್ಷಾಂತರ ವಾಹನ ಸವಾರರು ಕೇವಲ ಮೂರೂವರೆ ತಿಂಗಳಲ್ಲೇ ಬರೋಬ್ಬರಿ ಐದು ಕೋಟಿ ರೂ.ಗೂ ಅಧಿಕ ದಂಡ ಪಾವತಿಸಿದ್ದಾರೆ.

ಹೌದು, ಸಂಚಾರ ಪೊಲೀಸರ ವಿನೂತನ ಪ್ರಯೋಗಕ್ಕೆ ವಾಹನ ಸವಾರರು ಸ್ಪಂದಿಸಿದ್ದು, ಸಂಚಾರ ಉಲ್ಲಂಘನೆ ದಂಡವನ್ನು ಆನ್‌ಲೈನ್‌ ಮೂಲಕವೇ ಪಾವತಿಸುತ್ತಿದ್ದಾರೆ. ಇದರಿಂದ ನಿತ್ಯ ಲಕ್ಷಾಂತರ ರೂ. ದಂಡ ಸಂಗ್ರಹವಾಗುತ್ತಿದೆ.

ಈ ಮೊದಲು ಸಂಚಾರ ನಿಯಮ ಉಲ್ಲಂಘಿಸಿದರೆ ಫೋಟೋ ಸಮೇತ ವಾಹನ ಮಾಲಕರ ಮನೆಗೆ ಅಂಚೆ ಮೂಲಕ ನೋಟಿಸ್‌ ಕಳುಹಿಸಲಾಗುತ್ತಿತ್ತು. ಆದರೆ, ಇದಕ್ಕೆ ಸಾಕಷ್ಟು ಹಣವನ್ನೂ ವ್ಯಯಿಸಬೇಕಾಗಿತ್ತು. ಸಾರಿಗೆ ಇಲಾಖೆ ವಾಹನಗಳ ನೋಂದಣಿ ಜತೆಗೆ ಸಂಬಂಧಿತ ಮಾಲಕರ ಮೊಬೈಲ್‌ ಸಂಖ್ಯೆಗಳನ್ನು ಸಂಗ್ರಹಿಸುತ್ತಿದೆ. ಈ ನಂಬರ್‌ಗಳನ್ನು ಸಾರಿಗೆ ಇಲಾಖೆ ಬೆಂಗಳೂರು ಪೊಲೀಸರ ಜತೆ ಹಂಚಿಕೊಳ್ಳುತ್ತದೆ. ಇದನ್ನು ಆಧರಿಸಿ ಯಾವುದೇ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾದರೆ, ಒಂದೆರಡು ದಿನಗಳಲ್ಲಿಯೇ ಅದರ ಮಾಲಕರಿಗೆ ನೋಟಿಸ್‌ ಸಂಖ್ಯೆ, ವಾಹನದ ನೋಂದಣಿ ಸಂಖ್ಯೆ, ಸಂಚಾರ ನಿಯಮ ಉಲ್ಲಂಘನೆ ಸ್ವರೂಪ, ದಿನಾಂಕ, ಸಮಯ ಮತ್ತು ದಂಡದ ಮೊತ್ತ ಒಳಗೊಂಡ ಎಸ್‌ಎಂಎಸ್‌ ಅನ್ನು ನೋಂದಾಯಿತ ಮೊಬೈಲ್‌ ಸಂಖ್ಯೆಗೆ ರವಾನಿಸಲಾಗುತ್ತದೆ. ಪಾವತಿಗೆ 7 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ದಂಡ ಪಾವತಿಯ ಲಿಂಕ್‌ಗಳನ್ನು ಎಸ್‌ಎಂಎಸ್‌ ಒಳಗೊಂಡಿರುತ್ತದೆ. ಮೂರೂವರೆ ತಿಂಗಳಲ್ಲಿ ಅಂದಾಜು 40.60 ಲಕ್ಷಕ್ಕೂ ಅಧಿಕ ಸಂದೇಶ ಕಳುಹಿಸಲಾಗಿದೆ ಎಂದು ಸಂಚಾರ ಪೊಲೀಸ್‌ ಮೂಲಗಳು ತಿಳಿಸಿವೆ.

ಸಂಚಾರ ಜಾಗೃತಿ ಸಂದೇಶ
ವಾಹನ ಸವಾರರಿಗೆ ಕೇವಲ ದಂಡ ಸಂಗ್ರಹಕ್ಕಷ್ಟೇ ಸಂದೇಶ ಕಳುಹಿಸುತ್ತಿಲ್ಲ. ಜತೆಗೆ ಬಿ-ಸೇಫ್ ಎನ್ನುವ ಘೋಷವಾಕ್ಯದಡಿ ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಸಂದೇಶ ರವಾನಿಸಲಾಗುತ್ತಿದೆ. ಉತ್ತಮ ಗುಣಮಟ್ಟದ ಹೆಲ್ಮೆಟ್‌ ಧರಿಸುವುದು, ಸಿಗ್ನಲ್‌ ಜಂಪ್‌ ಮಾಡದಂತೆ ಸೇರಿ ಸೇರಿ ಎಲ್ಲ ಮಾದರಿಯ ಸಂಚಾರ ನಿಯಮ ಉಲ್ಲಂಘನೆ ಮಾಡದಂತೆ ಅರಿವು ಮೂಡಿಸಲಾಗುತ್ತಿದೆ. ಈ ಮೂಲಕ ವಾಹನ ಸವಾರರಲ್ಲಿ ಎಲ್ಲ ಮಾರ್ಗಗಳಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ಫೆಬ್ರವರಿಯಿಂದ ಇದುವರೆಗೂ ಎರಡು ಕೋಟಿಗೂ ಅಧಿಕ ಜಾಗೃತಿ ಸಂದೇಶ ಕಳುಹಿಸಲಾಗಿದೆ ಎಂದು ಸಂಚಾರ ಪೊಲೀಸ್‌ ಮೂಲಗಳು ತಿಳಿಸಿವೆ.

ಎಸ್‌ಎಂಎಸ್‌ ಮೂಲಕ ಕೇವಲ ಸಂಚಾರ ನಿಯಮ ಉಲ್ಲಂಘನೆ, ದಂಡ ಪಾವತಿಗೆ ಸೂಚಿಸುವುದಿಲ್ಲ. ಜತೆಗೆ ಗುಣಮಟ್ಟದ ಹೆಲ್ಮೆಟ್‌ ಧರಿಸುವಂತೆ ಹಾಗೂ ಇತರೆ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಎಸ್‌ಎಂಎಸ್‌ನಿಂದ ವಾಹನ ಮಾಲಕರು ಎಚ್ಚೆತ್ತುಕೊಂಡು ನಿಯಮ ಉಲ್ಲಂಘನೆಯನ್ನು ನಿಯಂತ್ರಿಸಲಿ¨ªಾರೆ. ಅದರಿಂದ ಮುಂದಿನ ದಿನಗಳಲ್ಲಿ ಅಪಘಾತಗಳ ಪ್ರಮಾಣ ಕಡಿಮೆಯಾಗುವ ವಿಶ್ವಾಸವಿದೆ.
-ಡಾ| ಬಿ.ಆರ್‌. ರವಿಕಾಂತೇಗೌಡ,
ಸಂಚಾರ ವಿಭಾಗದ ಜಂಟಿ ಆಯುಕ್ತರು

–  ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.