ಬಜೆಟ್‌ ಅನುಷ್ಠಾನಕ್ಕಾಗಿ ಸಮಿತಿ; ಭರವಸೆ ಜಾರಿಯಾಗಲಿ

Team Udayavani, Mar 28, 2022, 6:00 AM IST

ಬಜೆಟ್‌ ಅನುಷ್ಠಾನಕ್ಕಾಗಿ ಸಮಿತಿ; ಭರವಸೆ ಜಾರಿಯಾಗಲಿ

ತೀರಾ ಅಪರೂಪವೆಂಬಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಯೋಜನೆಗಳ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿ, ಇದರ ಮೇಲುಸ್ತುವಾರಿಯನ್ನೂ ತಾವೇ ವಹಿಸಿಕೊಳ್ಳುವುದಾಗಿ ಹೇಳಿದ್ದಾರೆ. ಮೇಲ್ನೋಟಕ್ಕೆ ನೋಡಿದರೆ ಇದು ಉತ್ತಮ ನಿರ್ಧಾರದಂತೆಯೇ ಕಾಣಿಸುತ್ತಿದೆ. ಸಾಮಾನ್ಯವಾಗಿ ಬಜೆಟ್‌ನಲ್ಲಿ ಘೋಷಿಸಿದ ಮೇಲೆ ಅದೆಷ್ಟೋ ಯೋಜನೆಗಳು ಜಾರಿಯಾಗದೇ ಹಾಗೆಯೇ ಉಳಿಯುವುದುಂಟು. ಇದಕ್ಕಾಗಿಯೇ ಪ್ರತೀ ಬಜೆಟ್‌ನಲ್ಲಿಯೂ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳ ಯಥಾಸ್ಥಿತಿ ವರದಿಯನ್ನೂ ನೀಡಲಾಗುತ್ತದೆ. ಇದನ್ನು ಕೂಲಂಕಶವಾಗಿ ಪರಿಶೀಲಿಸಿದರೆ ಘೋಷಣೆಯಾದ ಯೋಜನೆಗಳ ಜಾರಿ ಕುರಿತ ಮಾಹಿತಿ ಸಿಗುತ್ತದೆ.

ಪ್ರತೀ ವರ್ಷವೂ ಬಜೆಟ್‌ ಮಂಡನೆಯಾದ ಮೇಲೆ, ಇದರ ಮೇಲೆ ಚರ್ಚೆ ಮತ್ತು ಬಜೆಟ್‌ನ ಅಂಗೀಕಾರಕ್ಕಾಗಿ ಅಧಿವೇಶನ ನಡೆಯುತ್ತದೆ. ಇದರಲ್ಲಿ ಪ್ರಮುಖವಾಗಿ ಚರ್ಚೆಯಾಗುವುದು ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳ ಜಾರಿ ಕುರಿತ ವಿಚಾರಗಳೇ. ಅಲ್ಲದೆ, ವಿಪಕ್ಷಗಳಿಗೆ ಈ ಜಾರಿಯಾಗದ ಯೋಜನೆಗಳೇ ಆಹಾರವಾಗುತ್ತವೆ. ಹಳೇ ಯೋಜನೆಗಳನ್ನೇ ಜಾರಿ ಮಾಡದೇ ಮತ್ತೆ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದು ಉತ್ತಮವೇ ಎಂಬ ಪ್ರಶ್ನೆಗಳೂ ವಿಪಕ್ಷಗಳ ಕಡೆಯಿಂದ ಬರುತ್ತವೆ. ಆಡಳಿತದಲ್ಲಿರುವವರಿಗೆ ಇಂಥ ಪ್ರಶ್ನೆಗಳಿಗೆ ಉತ್ತರ ಕೊಡುವುದು ಕೆಲವೊಮ್ಮೆ ಇರುಸು ಮುರುಸಿಗೂ ಕಾರಣವಾಗಬಹುದು.

ಹೀಗಾಗಿಯೇ ಈ ಬಾರಿ ಮುಖ್ಯಮಂತ್ರಿಗಳು ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲು ಹೊರಟಿರುವುದು ಉತ್ತಮ ನಿರ್ಧಾರ. ಅಂದರೆ ಕಾಲಮಿತಿಯಲ್ಲಿ ಯೋಜನೆಗಳ ಜಾರಿ, ಬಜೆಟ್‌ ತೀವ್ರಗತಿ ಅನುಷ್ಠಾನ ಮಾಡುವಂತೆ ನೋಡಿಕೊಳ್ಳುವುದು ಈ ಸಮಿತಿಯ ಪ್ರಮುಖ ಜವಾಬ್ದಾರಿ. ಇದಕ್ಕಾಗಿ ಮುಖ್ಯ ಕಾರ್ಯ ದರ್ಶಿಗಳ ಹಣಕಾಸು ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಲಿದ್ದಾರೆ. ಹಾಗೆಯೇ ಬಜೆಟ್‌ನ ಪ್ರಮುಖ ಯೋಜನೆಗಳಿಗೆ ಕಾರ್ಯಾದೇಶ ನೀಡುವುದರಿಂದ ಹಿಡಿದು, ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನೂ ಈ ಸಮಿತಿಯೇ ನೋಡಿಕೊಳ್ಳಲಿದೆ ಎಂಬುದು ವಿಶೇಷ.

ಸಾಮಾನ್ಯವಾಗಿ ಕೆಲವೊಂದು ಯೋಜನೆಗಳಿಗೆ ಎರಡು ಮೂರು ಇಲಾಖೆಗಳ ಸಹಭಾಗಿತ್ವ ಬೇಕಾಗುತ್ತದೆ. ಕೆಲವು ಬಾರಿ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಯೋಜನೆಗಳ ಜಾರಿ ವಿಳಂಬವಾಗಬಹುದು. ಈಗ ಮುಖ್ಯ ಕಾರ್ಯದರ್ಶಿಗಳೇ ಸಮಿತಿಯ ನೇತೃತ್ವವಹಿಸಿಕೊಂಡರೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಸುಲಭವಾಗುತ್ತದೆ ಎಂಬ ಉದ್ದೇಶವೂ ಇದರ ಹಿಂದಿದೆ. ಏನೇ ಆಗಲಿ ಪ್ರತೀ ಬಾರಿಯ ಬಜೆಟ್‌ ಘೋಷಣೆ ಬಳಿಕ, ಇದರಲ್ಲಿನ ಎಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ ಎಂಬ ಕುರಿತಂತೆ ಚರ್ಚೆ ನಡೆಯುತ್ತದೆ. ಅದು ಯಾವುದೇ ಪಕ್ಷದ ಸರಕಾರ ಇರಲಿ, ಘೋಷಣೆಗೂ ಜಾರಿಯ ನಡುವೆ ವ್ಯತ್ಯಾಸವಂತೂ ಇರುತ್ತದೆ. ಈ ವ್ಯತ್ಯಾಸವನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ ಆಗ ಅದು ಅತ್ಯುತ್ತಮ ನಿರ್ಧಾರವಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಟಾಪ್ ನ್ಯೂಸ್

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.