ಭಾರತೀಯ ರೆಸ್ಟೋರೆಂಟ್ ವಿರುದ್ಧ ಕ್ರಮಕ್ಕೆ ಆದೇಶ
Team Udayavani, Mar 28, 2022, 8:30 AM IST
ಮನಾಮ: ಮಧ್ಯಪ್ರಾಚ್ಯ ರಾಷ್ಟ್ರವಾದ ಬಹ್ರೈನ್‌ನಲ್ಲಿರುವ ಭಾರತೀಯ ರೆಸ್ಟೋರೆಂಟೊಂದರಲ್ಲಿ, ಶಾಲು ಧರಿಸಿ ಬಂದಿದ್ದ ಮಹಿಳೆಯೊಬ್ಬರನ್ನು ರೆಸ್ಟೋರೆಂಟ್‌ನೊಳಕ್ಕೆ ಪ್ರವೇಶ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಆ ಹೊಟೇಲನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.
ನೊಂದ ಮಹಿಳೆಯು ತಾನು ಶಾಲು ಧರಿಸಿ ಬಂದಿದ್ದಕ್ಕೆ ತಮ್ಮನ್ನು ಹೊಟೇಲ್‌ನೊಳಗೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಬಹ್ರೈನ್‌ಪ್ರವಾಸೋದ್ಯಮ ಹಾಗೂ ಪ್ರದರ್ಶನ ಆಯೋಗ (ಬಿಟಿಇಎ) ಹೊಟೇಲನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ
ಈ ಹೊಟೇಲ್ 1987ರಿಂದ ಬಹ್ರೈನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ಹೇಳಿವೆ. ಮತ್ತೊಂದೆಡೆ ಹೊಟೇಲ್‌ನ ಆಡಳಿತ ಮಂಡಳಿ, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ, ಸಾರ್ವಜನಿಕರ ಕ್ಷಮಾಪಣೆ ಕೋರಿದೆ. ಘಟನೆಯ ಹಿನ್ನೆಲೆಯಲ್ಲಿ ರೆಸ್ಟೋರೆಂಟ್‌ನ ಮ್ಯಾನೇಜರ್‌ರನ್ನು ಕೆಲಸದಿಂದ ಕಿತ್ತುಹಾಕಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.