ಕೊಡಚಾದ್ರಿ ಬೆಟ್ಟ- ಕೊಲ್ಲೂರು: ಕರಾವಳಿಗೂ ಬರಲಿದೆ ಕೇಬಲ್ ಕಾರ್ ಯೋಜನೆ
Team Udayavani, Mar 28, 2022, 7:00 AM IST
ಕೊಲ್ಲೂರು: ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ 1,200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೇಬಲ್ ಕಾರ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಗೊಳಿಸಲು ಕೇಂದ್ರ ಸರಕಾರ ಶುಕ್ರವಾರ ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದಿಲ್ಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ರಸ್ತೆ ನಿರ್ಮಾಣಕ್ಕೆ ಪರಿಸರ ಇಲಾಖೆಯ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿದ ಸಚಿವರು ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ ಎಂದು ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ತಿಳಿಸಿದರು.
15 ನಿಮಿಷಗಳಲ್ಲಿ ತಲುಪಲು ಸಾಧ್ಯ
ಕೊಲ್ಲೂರು – ಕೊಡಚಾದ್ರಿ ನಡುವೆ ರಸ್ತೆಯ ಮೂಲಕವಾದರೆ ಸುಮಾರು 40 ಕಿ.ಮೀ. ದೂರವಿದೆ. ಇದನ್ನು ಕ್ರಮಿಸಲು ಅಂದಾಜು ಒಂದೂವರೆ ತಾಸು ಬೇಕು. ಈಗಿರುವ ರಸ್ತೆಯೂ ದುರ್ಗಮವಾಗಿದ್ದು, ಜೀಪ್ ಪ್ರಯಾಣ ಸೌಲಭ್ಯ ಮಾತ್ರ ಇದೆ. ಕೇಬಲ್ ಕಾರ್ ಯೋಜನೆ ಜಾರಿಗೊಂಡರೆ ನೇರ ಅಂತರ 8 ಕಿ.ಮೀ.ಗೆ ಇಳಿಯಲಿದ್ದು, ಕೇವಲ 15 ನಿಮಿಷಗಳಲ್ಲಿ ಕ್ರಮಿಸಲು ಸಾಧ್ಯ.
ಸಂಸದ ರಾಘವೇಂದ್ರ ಅವರು ಈ ಯೋಜನೆ ಅನುಷ್ಠಾನಕ್ಕೆ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಯೋಜನೆ ಜಾರಿಯಿಂದ ಅನೇಕ ಮಂದಿಗೆ ಉದ್ಯೋಗಾವಕಾಶ, ಪ್ರವಾ ಸೋದ್ಯಮ ಅಭಿವೃದ್ಧಿ ಆಗಲಿದೆ. ಯೋಜನೆ ಜಾರಿಯ ಸಂದರ್ಭ ಪರಿಸರಕ್ಕೆ ಹಾನಿ ಆಗ ದಂತೆ ನೋಡಿಕೊಳ್ಳಲು ಅತ್ಯಾಧುನಿಕ ಮಾರ್ಗೋ ಪಾಯ ಅನುಸರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಗೆ ಬಂಡವಾಳ ಹೂಡಲು ಈಗಾಗಲೇ ಹಲವು ಕಂಪೆನಿಗಳು ಮುಂದೆ ಬಂದಿವೆ.
ಪ್ರಗತಿಗೆ ಪೂರಕ
ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಅನುಷ್ಠಾನಗೊಂಡರೆ ಕರಾವಳಿ ಪ್ರದೇಶದ ಮೊದಲ ಕೇಬರ್ ಕಾರ್ ಯೋಜನೆ ಎಂಬ ಹೆಗ್ಗಳಿಕೆ ಗಳಿಸಲಿದೆ. ಇದರಿಂದ ಬೈಂದೂರು, ಕುಂದಾಪುರ ತಾಲೂಕುಗಳಲ್ಲಿ ಆರ್ಥಿಕ ಮತ್ತು ಸಾಮಾ ಜಿಕ ಪ್ರಗತಿಯೂ ಉಂಟಾಗ ಲಿದೆ. ಕೊಲ್ಲೂರು ದೇಗುಲಕ್ಕೆ ಪ್ರತಿದಿನ ಸಾವಿರಾರು ಯಾತ್ರಾರ್ಥಿಗಳು ಆಗಮಿಸುತ್ತಾರೆ. ಇವರಲ್ಲಿ ಅನೇಕರು ಕೊಡಚಾದ್ರಿ ಸರ್ವಜ್ಞ ಪೀಠಕ್ಕೆ ತೆರಳುತ್ತಾರೆ. ಕೇಬಲ್ ಕಾರ್ ಯೋಜನೆ ಅನುಷ್ಠಾನವಾದರೆ ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುವುದು ಸುಲಭವಾಗಲಿದೆ.
ಉದಯವಾಣಿಯಲ್ಲಿ ವರದಿ
ಕೊಲ್ಲೂರಿನಿಂದ ಕೊಡಚಾದ್ರಿಗೆ ರೋಪ್‌ವೇ-ಕೇಬಲ್ ಕಾರ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಯುತ್ತಿರುವ ಬಗ್ಗೆ ಉದಯವಾಣಿಯು 2020ರ ಜೂನ್ 24ರಂದು ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.