ಮರಳು ತುಂಬಿದ ಲಾರಿ ಟಿಪ್ಪರ್ ಹಾಯ್ದು ಬಾಲಕ ಸಾವು: ಟಿಪ್ಪರ್‌ಗೆ ಬೆಂಕಿ
Team Udayavani, Mar 28, 2022, 10:05 AM IST
ಕಲಬುರಗಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ವೊಂದು ನಗರದ ಬಿದ್ದಾಪುರ ಬಡಾವಣೆಯ ಪ್ಲೈ ಓವರ್ ಬಳಿ ಬಾಲಕನ ಮೇಲೆ ಹಾಯ್ದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ. ಘಟನೆಯಿಂದ ರೊಚ್ಚಿಗೆದ್ದ ಜನರು ಟಿಪ್ಪರ್ ಗೆ ಬೆಂಕಿ ಇಟ್ಟು, ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.
ನಗರದ ಬಿದ್ದಾಪುರ ಬಡಾವಣೆಯ ಪ್ರಕೃತಿ ಕಾಲೋನಿ ನಿವಾಸಿ ಮನೀಷ್ ಮಲ್ಲಿಕಾರ್ಜುನ ಹರವಾಳಕರ್ (8) ಅಪಘಾತದಲ್ಲಿ ಮೃತಪಟ್ಟ ಬಾಲಕ.
ಈತ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಟೈಲರ್ ಅಂಗಡಿಗೆ ಹೋಗುವ ಸಂದರ್ಭದಲ್ಲಿ ರಸ್ತೆ ದಾಟುವಾಗ ಫ್ಲೈ ಓವರ್ ಮೇಲೆ ಹೈಕೋರ್ಟ್ ಕಡೆಯಿಂದ ಬಂದ ಮರಳು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಾಲಕನಿಗೆ ಢಿಕ್ಕಿ ಹೊಡೆದಿದೆ.
ಟಿಪ್ಪರ್ ಚಕ್ರ ಬಾಲಕನ ಮೇಲೆ ಹರಿದಿದ್ದರಿಂದ ದೇಹ ನಜ್ಜುಗುಜ್ಜಾಗಿದೆ. ಕಣ್ಣೆದುರಿಗೆ ಹೆತ್ತ ಮಗ ಪ್ರಾಣ ಬಿಟ್ಟಿದ್ದನ್ನು ಕಂಡು ಪೋಷಕರು ಆಘಾತಕ್ಕೊಳಗಾದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನೆ ಸಂಭವಿಸುತ್ತಲೇ ಸುತ್ತಲಿನ ಜನರು ಜಮಾವಣೆಯಾಗಿ ಚಾಲಕನನ್ನು ಹಿಡಿದು ಥಳಿಸಲು ಮುಂದಾದರು. ಈ ವೇಳೆಗೆ ಆತ ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಹೆಚ್ಚಿನ ಜನರು ಜಮಾವಣೆಯಾಗಿ ಪ್ರತಿಭಟನೆ ಆರಂಭಿಸಿದರು. ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ, ಟಿಪ್ಪರ್‌ಗಳಿಗೆ ಕಡಿವಾಣ ಹಾಕುತ್ತಿಲ್ಲ ಎಂದು ರೊಚ್ಚಿಗೆದ್ದ ಜನರು ಟಿಪ್ಪರ್ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕಾಣಿಸದ ವೈದ್ಯರು, ಸಿಬಂದಿ!
ಬಿದ್ದಾಪುರ ಕಾಲೋನಿಯ ಪ್ಲೈ ಓವರ್ ಸುತ್ತಮುತ್ತ ಹಲವು ಶಾಲೆಗಳಿಗೆ ನಿತ್ಯ ಮಕ್ಕಳು ಓಡಾಡುತ್ತಿರುತ್ತಾರೆ. ಮನೆಯಿಂದ ಆಚೆ ಹೋಗಬೇಕಾದರೆ ಫ್ಲೈ ಓವರ್ ರಸ್ತೆ ದಾಟಿಕೊಂಡು ಹೋಗಬೇಕು. ಈ ವೇಳೆ ಮೇಲಿಂದ ವೇಗವಾಗಿ ವಾಹನಗಳು ಬರುವುದರಿಂದ ಅವಘಡಗಳು ಮೇಲಿಂದ ಮೇಲೆ ಸಂಭವಿಸುತ್ತಿವೆ. ಅಲ್ಲದೇ ಪಾದಚಾರಿಗಳಿಗೆ ಪರ್ಯಾಯ ವ್ಯವಸ್ಥೆ ಇಲ್ಲದಿರುವುದೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪರಿಸ್ಥಿತಿಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಜನರನ್ನು ಸಮಧಾನಗೊಳಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಮ್ಸ್ ಗೆ ಸಾಗಿಸಿದರು. ಡಿಸಿಪಿಗಳಾದ ಅಡ್ಮೂರು ಶ್ರೀನಿವಾಸುಲು, ಶ್ರೀಕಾಂತ ಕಟ್ಟಿಮನಿ, ಎಸಿಪಿಗಳಾದ ಸುಧಾ ಆದಿ, ಗಿರೀಶ್ ಎಸ್.ಬಿ, ಇನ್ಸ್‌ಪೆಕ್ಟರ್‌ಗಳಾದ ಅಮರೇಶ, ಪಂಡಿತ ಸಗರ, ಸಿದ್ದರಾಮೇಶ, ಶಾಂತಿನಾಥ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಂಚಾರ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.