ಗರ್ಜಿನಾಳ ಆರೋಗ್ಯ ಉಪಕೇಂದ್ರಕ್ಕೆ ಬೀಗ
ಕೇಂದ್ರದ ಸುತ್ತಲೂ ಕುಡುಕರ ಹಾವಳಿ
Team Udayavani, Mar 28, 2022, 4:28 PM IST
ದೋಟಿಹಾಳ: ಸಮೀಪದ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗರ್ಜಿನಾಳ ಆರೋಗ್ಯ ಉಪಕೇಂದ್ರಕ್ಕೆ ಎರಡು ತಿಂಗಳಿಂದ ಬೀಗ ಹಾಕಿದ್ದು, ಸೂಕ್ತ ಚಿಕಿತ್ಸೆಯಿಲ್ಲದೇ ಜನತೆ ಪರದಾಡುವಂತಾಗಿದೆ. ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿದ ಕಾರಣ ಕೇಂದ್ರದ ಆವರಣ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಾರ್ವಜನಿಕರು ಸಣ್ಣಪುಟ್ಟ ಕಾಯಿಲೆಗೂ ಚಿಕಿತ್ಸೆಯಿಲ್ಲದೇ ಪರದಾಡುವಂತಾಗಿದೆ. ಗ್ರಾಮದಲ್ಲಿ ಚಿಕ್ಕಮಕ್ಕಳು, ಗರ್ಭಿಣಿಯರು, ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾದರೆ 10-12 ಕಿ.ಮೀ. ದೂರದ ತಾವರಗೇರಾ ಸರಕಾರಿ ಆಸ್ಪತ್ರೆ ಹೋಗಬೇಕು. ರಾತ್ರಿ ವೇಳೆ ಸಾರ್ವಜನಿಕರಿಗೆ ತೊಂದರೆಯಾದರೆ ಕಷ್ಟವಾಗುತ್ತದೆ. ಈ ವೇಳೆ ಕೆಲವರು ಖಾಸಗಿ ವಾಹನದ ಮೂಲಕ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಬಡವರು ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ ಎಂದು ಗ್ರಾಮದ ಯುವಕರು ಹೇಳುತ್ತಾರೆ.
ಈ ಆರೋಗ್ಯ ಉಪಕೇಂದ್ರದ ಆವರಣ ನಿರ್ಜನ ಪ್ರದೇಶವಾದ ಕಾರಣ ಕುಡುಕರ ಹಾವಳಿ ಹೆಚ್ಚಾಗಿದೆ. ಆರೋಗ್ಯ ಇಲಾಖೆಯ ಸುತ್ತಲೂ ಅನಾರೋಗ್ಯದ ವಾತಾವರಣ ಕಂಡುಬರುತ್ತಿದೆ.
ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕೆಂಬುದೇ ನಾಗರಿಕರ ಕಳಕಳಿಯಾಗಿದೆ.
ಕೇಂದ್ರದಲ್ಲಿ ಮೂರು ಹುದ್ದೆಗಳಿದ್ದು, ಸದ್ಯ ಈ ಮೂರು ಹುದ್ದೆಗಳು ಖಾಲಿ ಇರುವುದರಿಂದ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.
ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆ ಖಾಲಿ ಇದೆ. ಎಎನ್‌ಎಂ ಅವರು ಹೆರಿಗೆ ಮೇಲೆ ರಜೆ ಹೋಗಿದ್ದಾರೆ. ಹೀಗಾಗಿ ಸಿಬ್ಬಂದಿ ಇಲ್ಲದ ಕಾರಣ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ.
ನಮ್ಮೂರ ಆಸ್ಪತ್ರೆಯ ಬಾಗಿಲು ಹಾಕಿ ಎರಡು ತಿಂಗಳ ಆಗೇತ್ರಿ. ಯಾರಿಗಾದರೂ ಮೈಯಾಗ್ ಹುಷಾರಿಲ್ಲ ಅಂದ್ರೆ ಗಾಡಿ ಮಾಡಿಕೊಂಡು ತಾವರಗೇರಾ ಪಟ್ಟಣಕ್ಕೆ ಹೋಗಬೇಕ್ರಿ. ನಮ್ಮ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಯಾರಿಗೂ ಕಾಳಜಿ ಇಲ್ಲದಂತಾಗೆತ್ರಿ.
-ದುರ್ಗಮ್ಮ ತಿನ್ನಾಳ, ಗರ್ಜಿನಾಳ ಗ್ರಾಮಸ್ಥೆ
ಗರ್ಜಿನಾಳ ಆರೋಗ್ಯ ಉಪಕೇಂದ್ರದ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಲ್ಲಿ ಮೂರು ಹುದ್ದೆ ಖಾಲಿ ಇದ್ದರೆ. ವಾರದಲ್ಲಿ ಮೂರು ದಿನಗಳ ಕಾಲ ಬೇರೊಬ್ಬರನ್ನು ಅಲ್ಲಿಗೆ ಕಳಿಸಿ, ಸಾರ್ವಜನಿಕರ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆ.
-ಡಾ| ಆನಂದ ಗೋಟೂರ, ತಾಲೂಕು ಆರೋಗ್ಯಾಧಿಕಾರಿ
-ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.