ಟ್ರಕ್‌ ಟರ್ಮಿನಲ್‌ ನಿರ್ಮಾಣ ಬೇಡಿಕೆ ಈಡೇರಿಕೆ

ಡಿ. ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ 25 ಕೋಟಿ ರೂ. ಮಂಜೂರು: ಸಚಿವ ಬಿ. ಶ್ರೀರಾಮುಲು

Team Udayavani, Mar 28, 2022, 4:49 PM IST

heddari

ಹೊಸಪೇಟೆ: ಡಿ. ದೇವರಾಜ ಅರಸ್‌ ಟ್ರಕ್‌ ಟ್ರಮಿನಲ್‌ ವತಿಯಿಂದ ನಗರದ ಹಳೆ ಅಮರಾವತಿಯಲ್ಲಿ 37.33 ಎಕರೆ ಪ್ರದೇಶದ ವಿಜಯನಗರ ಟ್ರಕ್‌ ಟ್ರಮಿನಲ್‌ ನಿರ್ಮಾಣಕ್ಕೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಹಾಗೂ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ನಗರದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಟ್ರಕ್‌ ಟರ್ಮಿನಲ್‌ ನಿರ್ಮಾಣ ಬೇಡಿಕೆ ಇದೀಗ ಜಾರಿಗೆ ತರುವ ಕೆಲಸ ಮಾಡಲಾಗಿದೆ. ಡಿ. ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ಗೆ ಈಗಾಗಲೇ 25 ಕೋಟಿ ರೂ. ಮಂಜೂರು ಮಾಡಿದ್ದು, ಇನ್ನೂ ಅನುದಾನ ಅಗತ್ಯವಿದ್ದಲ್ಲಿ ಒದಗಿಸಲಾಗುವುದು. ಹೊಸಪೇಟೆ ಹೆದ್ದಾರಿಯಲ್ಲಿ ಸದಾ ಟ್ರಾಫಿಕ್‌ ಜಾಮ್‌ ಸಮಸ್ಯೆ. ಇಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣದಿಂದ ಅಪಘಾತಕ್ಕೆ ಕಡಿವಾಣ ಬೀಳಲಿದೆ. ಒಟ್ಟಾರೆ ವಿಜಯನಗರ ಟ್ರಕ್‌ ಟರ್ಮಿನಲ್‌ ರಾಜ್ಯದಲ್ಲಿ ಮಾದರಿಯಾಗಲಿದೆ. ಇಡೀ ರಾಜ್ಯದಲ್ಲಿ ದೇವನಹಳ್ಳಿ, ಹುಬ್ಬಳ್ಳಿ ಸೇರಿದಂತೆ ರಾಜ್ಯ ಮತ್ತು ಹೆದ್ದಾರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು. ಹಂತಹಂತವಾಗಿ ಅಗತ್ಯವಿರುವಡೆ ಟ್ರಕ್‌ ಟರ್ಮಿನಲ್‌ಗ‌ಳನ್ನು ನಿರ್ಮಿಸಲಾಗುವುದು. ಟ್ರಕ್‌ ಟರ್ಮಿನಲ್‌ ನಿರ್ಮಾಣದಿಂದ ಕ್ಯಾಂಟೀನ್‌, ಬಿಡಿಭಾಗಗಳ ಅಂಗಡಿ, ಪೆಟ್ರೋಲ್‌ ಬಂಕ್‌, ಶೌಚಾಲಯ ಸೇರಿದಂತೆ ಒಂದು ಸಾವಿರ ಜನರಿಗೆ ಉದ್ಯೋಗ ಸಿಗಲಿದೆ ಎಂದರು.

ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಸುಧಾರಣೆಗಳನ್ನು ತರಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಆನಂದಸಿಂಗ್‌ ಅವರು ಮಾತನಾಡಿ, ಅಮರಾವತಿ ಬಳಿ 37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಟ್ರಕ್‌ ಟರ್ಮಿನಲ್‌ನಲ್ಲಿ ಸುಸಜ್ಜಿತವಾದ ಮೂಲಸೌಕರ್ಯಗಳಿರಲಿದ್ದು, ಸ್ಥಿರ ನಿಲುಗಡೆ ಜಾಗ, ಗೋದಾಮುಗಳು ನಿರ್ಮಾಣ ಹಾಗೂ ಸಾರಿಗೆ ಸಂಬಂಧಿಸಿದ ಚಟುವಟಿಕೆಗೆ ಟ್ರಕ್‌ ಟರ್ಮಿನಲ್‌ನಲ್ಲಿ ನಿವೇಶನಗಳು ಮತ್ತು ಇತರೇ ಸೌಲಭ್ಯಗಳು ಕಲ್ಪಿಸಲಾಗುತ್ತದೆ. ಈ ಟರ್ಮಿನಲ್‌ ನಲ್ಲಿ ಡಾರ್ಮೆಟರಿ, ಸುಲಭ ಶೌಚಾಲಯ, ಕ್ಯಾಂಟೀನ್‌, ವೇರ್‌ಹೌಸ್‌, ಪೆಟ್ರೋಲ್‌ ಬಂಕ್‌, ವರ್ಕಶಾಪ್‌, ಬಿಡಿಭಾಗಗಳ ಅಂಗಡಿ ಮತ್ತು ವೇ ಬ್ರಿಡ್ಜ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟ್ರಕ್‌ ಟರ್ಮಿನಲ್‌ ಅತ್ಯಂತ ಗುಣಮಟ್ಟದಿಂದ ನಿರ್ಮಿಸಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರೀತಿಯ ರಾಜೀ ಮಾಡಿಕೊಳ್ಳಲಾಗದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು.

ಡಿ. ದೇವರಾಜ ಅರಸ್‌ ಟ್ರಕ್‌ ಟ್ರಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮಾತನಾಡಿ, ಸಾರಿಗೆ ಸಚಿವ ಶ್ರೀರಾಮುಲು ಅವರು ಸಾರಿಗೆ ಖಾತೆಯ ಜವಾಬ್ದಾರಿ ಹೊತ್ತ ತಕ್ಷಣ ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ಷಿಪ್ರಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಂದು ಹೆದ್ದಾರಿಯಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದಾಗಿದೆ ಎಂದರು.

ಟ್ರಕ್‌ ಟರ್ಮಿನಲ್‌ನಲ್ಲಿ 500ರಿಂದ 1 ಸಾವಿರ ಲಾರಿಗಳನ್ನು ನಿಲ್ಲಿಸಬಹುದಾಗಿದೆ. ಈ ಟರ್ಮಿನಲ್‌ಗ‌ಳಿಂದ ವಾಹನ ದಟ್ಟಣೆ, ಮಾಲಿನ್ಯ ತಡೆಯಬಹುದು ಎಂದರು. ಈ ಸಂದರ್ಭದಲ್ಲಿ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌. ಶಂಕರಪ್ಪ, ನಗರಸಬೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ ಇನ್ನಿತರರಿದ್ದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

1-gggggggg

Hagaribommanahalli; ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.