ಟ್ರಕ್‌ ಟರ್ಮಿನಲ್‌ ನಿರ್ಮಾಣ ಬೇಡಿಕೆ ಈಡೇರಿಕೆ

ಟ್ರಕ್‌ ಟರ್ಮಿನಲ್‌ನಲ್ಲಿ ನಿವೇಶನಗಳು ಮತ್ತು ಇತರೇ ಸೌಲಭ್ಯಗಳು ಕಲ್ಪಿಸಲಾಗುತ್ತದೆ.

Team Udayavani, Mar 28, 2022, 6:27 PM IST

ಟ್ರಕ್‌ ಟರ್ಮಿನಲ್‌ ನಿರ್ಮಾಣ ಬೇಡಿಕೆ ಈಡೇರಿಕೆ

ಹೊಸಪೇಟೆ: ಡಿ. ದೇವರಾಜ ಅರಸ್‌ ಟ್ರಕ್‌ ಟ್ರಮಿನಲ್‌ ವತಿಯಿಂದ ನಗರದ ಹಳೆ ಅಮರಾವತಿಯಲ್ಲಿ 37.33 ಎಕರೆ ಪ್ರದೇಶದ ವಿಜಯನಗರ ಟ್ರಕ್‌ ಟ್ರಮಿನಲ್‌ ನಿರ್ಮಾಣಕ್ಕೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಹಾಗೂ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ನಗರದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಟ್ರಕ್‌ ಟರ್ಮಿನಲ್‌ ನಿರ್ಮಾಣ ಬೇಡಿಕೆ ಇದೀಗ ಜಾರಿಗೆ ತರುವ ಕೆಲಸ ಮಾಡಲಾಗಿದೆ. ಡಿ. ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ಗೆ ಈಗಾಗಲೇ 25 ಕೋಟಿ ರೂ. ಮಂಜೂರು ಮಾಡಿದ್ದು, ಇನ್ನೂ ಅನುದಾನ ಅಗತ್ಯವಿದ್ದಲ್ಲಿ ಒದಗಿಸಲಾಗುವುದು. ಹೊಸಪೇಟೆ ಹೆದ್ದಾರಿಯಲ್ಲಿ ಸದಾ ಟ್ರಾμಕ್‌ ಜಾಮ್‌ ಸಮಸ್ಯೆ.

ಇಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣದಿಂದ ಅಪಘಾತಕ್ಕೆ ಕಡಿವಾಣ ಬೀಳಲಿದೆ. ಒಟ್ಟಾರೆ ವಿಜಯನಗರ ಟ್ರಕ್‌ ಟರ್ಮಿನಲ್‌ ರಾಜ್ಯದಲ್ಲಿ ಮಾದರಿಯಾಗಲಿದೆ. ಇಡೀ ರಾಜ್ಯದಲ್ಲಿ ದೇವನಹಳ್ಳಿ, ಹುಬ್ಬಳ್ಳಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು.

ಹಂತಹಂತವಾಗಿ ಅಗತ್ಯವಿರುವಡೆ ಟ್ರಕ್‌ ಟರ್ಮಿನಲ್‌ಗ‌ಳನ್ನು ನಿರ್ಮಿಸಲಾಗುವುದು. ಟ್ರಕ್‌ ಟರ್ಮಿನಲ್‌ ನಿರ್ಮಾಣದಿಂದ ಕ್ಯಾಂಟೀನ್‌, ಬಿಡಿಭಾಗಗಳ ಅಂಗಡಿ, ಪೆಟ್ರೋಲ್‌ ಬಂಕ್‌, ಶೌಚಾಲಯ ಸೇರಿದಂತೆ ಒಂದು ಸಾವಿರ ಜನರಿಗೆ ಉದ್ಯೋಗ ಸಿಗಲಿದೆ ಎಂದರು. ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಸುಧಾರಣೆಗಳನ್ನು ತರಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರವಾಸೋದ್ಯಮ, ಪರಿಸರ ಸಚಿವರಾದ ಆನಂದಸಿಂಗ್‌ ಅವರು ಮಾತನಾಡಿ, ಅಮರಾವತಿ ಬಳಿ 37 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಟ್ರಕ್‌ ಟರ್ಮಿನಲ್‌ನಲ್ಲಿ ಸುಸಜ್ಜಿತವಾದ ಮೂಲಸೌಕರ್ಯಗಳಿರಲಿದ್ದು, ಸ್ಥಿರ ನಿಲುಗಡೆ ಜಾಗ, ಗೋದಾಮುಗಳು ನಿರ್ಮಾಣ ಹಾಗೂ ಸಾರಿಗೆ ಸಂಬಂಧಿಸಿದ ಚಟುವಟಿಕೆಗೆ ಟ್ರಕ್‌ ಟರ್ಮಿನಲ್‌ನಲ್ಲಿ ನಿವೇಶನಗಳು ಮತ್ತು ಇತರೇ ಸೌಲಭ್ಯಗಳು ಕಲ್ಪಿಸಲಾಗುತ್ತದೆ.

ಈ ಟರ್ಮಿನಲ್‌ ನಲ್ಲಿ ಡಾರ್ಮೆಟರಿ, ಸುಲಭ ಶೌಚಾಲಯ, ಕ್ಯಾಂಟೀನ್‌, ವೇರ್‌ಹೌಸ್‌, ಪೆಟ್ರೋಲ್‌ ಬಂಕ್‌, ವರ್ಕಶಾಪ್‌, ಬಿಡಿಭಾಗಗಳ ಅಂಗಡಿ ಮತ್ತು ವೇ ಬ್ರಿಡ್ಜ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು. 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟ್ರಕ್‌ ಟರ್ಮಿನಲ್‌ ಅತ್ಯಂತ ಗುಣಮಟ್ಟದಿಂದ ನಿರ್ಮಿಸಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರೀತಿಯ ರಾಜೀ ಮಾಡಿಕೊಳ್ಳಲಾಗದು ಎಂದು ಗುತ್ತಿಗೆದಾರರಿಗೆ ಎಚ್ಚರಿಸಿದರು. ಡಿ. ದೇವರಾಜ ಅರಸ್‌ ಟ್ರಕ್‌ ಟ್ರಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮಾತನಾಡಿ, ಸಾರಿಗೆ ಸಚಿವ ಶ್ರೀರಾಮುಲು ಅವರು ಸಾರಿಗೆ ಖಾತೆಯ ಜವಾಬ್ದಾರಿ ಹೊತ್ತ ತಕ್ಷಣ ಎಲ್ಲ ಅ ಧಿಕಾರಿಗಳೊಂದಿಗೆ
ಸಭೆ ನಡೆಸಿ ಕ್ಷಿಪ್ರಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಪ್ರತಿಯೊಂದು ಹೆದ್ದಾರಿಯಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದಾಗಿದೆ ಎಂದರು. ಟ್ರಕ್‌ ಟರ್ಮಿನಲ್‌ನಲ್ಲಿ 500ರಿಂದ 1 ಸಾವಿರ ಲಾರಿಗಳನ್ನು ನಿಲ್ಲಿಸಬಹುದಾಗಿದೆ. ಈ ಟರ್ಮಿನಲ್‌ಗ‌ಳಿಂದ ವಾಹನ ದಟ್ಟಣೆ, ಮಾಲಿನ್ಯ ತಡೆಯಬಹುದು ಎಂದರು. ಈ ಸಂದರ್ಭದಲ್ಲಿ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌. ಶಂಕರಪ್ಪ, ನಗರಸಬೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ ಇನ್ನಿತರರಿದ್ದರು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.