ಅಂಚೆ ಇಲಾಖೆ ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ಮುಷ್ಕರ
Team Udayavani, Mar 28, 2022, 9:43 PM IST
ಉಡುಪಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಡುಪಿ ಪ್ರಧಾನ ಅಂಚೆ ಕಚೇರಿ ಎದುರು ವಿಭಾಗದ ಅಂಚೆ ಮತ್ತು ಗ್ರಾಮೀಣ ಅಂಚೆ ನೌಕರರು ಸೋಮವಾರ ಮುಷ್ಕರ ನಡೆಸಿದರು.
158 ವರ್ಷ ಇತಿಹಾಸದ ಅಂಚೆ ಇಲಾಖೆಯನ್ನು ಕೇಂದ್ರ ಸರಕಾರ ಖಾಸಗೀಕರಣ ಮಾಡಲು ಹೊರಟಿರುವುದನ್ನು ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘಟನೆ (ಫೋರ್ ಮ್ಯಾನ್ ಮತ್ತು ಎಮ್‌ಟಿಎಸ್) ರಾಜ್ಯಾಧ್ಯಕ್ಷ ವಿಜಯ ನಾಯರಿ ಖಂಡಿಸಿದರು. ಹೊಸ ಪಿಂಚಣಿ ವ್ಯವಸ್ಥೆ ರದ್ದು ಗೊಳಿಸಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು, ಅವೈಜ್ಞಾನಿಕ ಟಾರ್ಗೆಟ್ ನೀಡಿ ನೌಕರರ ಮೇಲೆ ಮಾನಸಿಕ ಒತ್ತಡ ಹೇರುವುದನ್ನು ನಿಲ್ಲಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕೇಂದ್ರ ಸರಕಾರವನ್ನು ಅವರು ಒತ್ತಾಯಿಸಿದರು.
ನೌಕರರ ಸಂಘಟನೆಗಳ ಮುಖಂಡರಾದ ಸುಹಾಸ್, ಪ್ರವೀಣ್ ಜತ್ತನ್, ಭಾಸ್ಕರ ಶೆಟ್ಟಿ, ಸುರೇಶ ಕೆ., ವಾಸುದೇವ ತೊಟ್ಟಂ, ಸಿ.ಕೆ. ನಾರಾಯಣ, ರತ್ನಾಕರ ನಾಯರಿ ಮೊದಲಾದವರು ಪಾಲ್ಗೊಂಡಿದ್ದರು. ವಿಭಾಗದ ಅಂಚೆ ಅಧೀಕ್ಷಕರ ಮೂಲಕ ಪ್ರಧಾನಿಯವರಿಗೆ ಅಂಚೆ ಇಲಾಖೆ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ : ನಾಲ್ಕು ಲಕ್ಷ ಬಿಪಿಎಲ್ ಅರ್ಜಿಗಳಿಗೆ ತಿಂಗಳಲ್ಲಿ ಮುಕ್ತಿ: ಉಮೇಶ್ ಕತ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.