ಗೋಶಾಲೆಗಳು ಕಾಗದದಲ್ಲಿ ಮಾತ್ರ ಇದ್ದಂತಿದೆ: ಹೈಕೋರ್ಟ್
Team Udayavani, Mar 29, 2022, 8:30 AM IST
ಬೆಂಗಳೂರು: ಸರಕಾರದ ಗೋಶಾಲೆಗಳು ಕೇವಲ ಕಾಗದದ ಮೇಲೆ ಇದ್ದಂತಿದೆ ಎಂದು ಹೈಕೋರ್ಟ್ ತೀಕ್ಷ್ಣವಾಗಿ ಹೇಳಿದೆ.
ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಮತ್ತು ಈಗಿರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ಹಾಗೂ ನ್ಯಾ| ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಗೋಶಾಲೆ ನಿರ್ಮಾಣಕ್ಕೆ ಪ್ರತಿ ಜಿಲ್ಲೆಯಲ್ಲೂ ಸ್ಥಳ ಗುರುತಿಸಲಾಗಿದೆ. ಬಜೆಟ್ನಲ್ಲಿ ಹಣ ಸಹ ಮಂಜೂರು ಮಾಡಲಾಗಿದೆ ಎಂದು ಸರಕಾರದ ಪರ ವಕೀಲರು ತಿಳಿಸಿದರು. ಆಗ ಎಲ್ಲೆಲ್ಲಿ, ಎಷ್ಟು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಸರಕಾರದ ಪರ ವಕೀಲರಿಂದ ಸಮರ್ಪಕ ಉತ್ತರ ಬಂದಿಲ್ಲ.
ಇದನ್ನೂ ಓದಿ:ರಾಗಿ, ಜೋಳ ಖರೀದಿಗೆ ಕ್ರಮ ಕೈಗೊಳ್ಳಲು ಆಗ್ರಹ
ಇದರಿಂದ ಬೇಸರಗೊಂಡ ಮುಖ್ಯ ನ್ಯಾಯಮೂರ್ತಿಗಳು, ನೀವು ಗೋಶಾಲೆ ಎಲ್ಲಿದೆ ಎಂದರೆ ಬರಿ ಜಮೀನು ಗುರುತಿಸಿದ್ದೇವೆ, ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತೀರಿ. ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿವೆ, ಎಲ್ಲೆಲ್ಲಿ ನಿರ್ಮಾಣ ಮಾಡುತ್ತಿದ್ದೀರಿ, ಎಲ್ಲಿ ಅಭಿವೃದ್ಧಿಪಡಿಸಿದ್ದೀರಿ ಎಂದರೆ ನಿಮ್ಮ ಬಳಿ ಉತ್ತರವೇ ಇಲ್ಲ. ಹಾಗಾಗಿ, ನಿಮ್ಮ ಗೋಶಾಲೆಯೆಲ್ಲಾ ಬರೀ ಕಾಗದದ ಮೇಲೆ ಇದ್ದಂತಿದೆ’ ಎಂದು ಹೇಳಿದರು.
ಸಮರ್ಪಕ ಮಾಹಿತಿ ನೀಡುವಂತೆ ಸರಕಾರಕ್ಕೆ ತಾಕೀತು ಮಾಡಿ ವಿಚಾರಣೆಯನ್ನು ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.