7ನೇ ಬಾರಿ ಏರಿಕೆ; 100 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ, 100ರ ಸನಿಹಕ್ಕೆ ಡೀಸೆಲ್ ಬೆಲೆ
ಡೀಸೆಲ್ ಬೆಲೆ ಲೀಟರ್ ಗೆ 99.25ರೂಪಾಯಿಗೆ ಏರಿಕೆಯಾಗಿದೆ.
Team Udayavani, Mar 29, 2022, 10:50 AM IST
ನವದೆಹಲಿ:ಮಂಗಳವಾರವೂ(ಮಾರ್ಚ್ 29) ಮತ್ತೆ ತೈಲ ಬೆಲೆ ಏರಿಕೆ ಮುಂದುವರಿದಿದ್ದು, ಪೆಟ್ರೋಲ್ ಪ್ರತಿ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 70 ಪೈಸೆಯಷ್ಟು ಏರಿಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಪ್ಪ ಆತ್ಮಹತ್ಯೆ: ಡೆತ್ ನೋಟ್ ಪತ್ತೆ
ಸತತ ಏಳು ದಿನಗಳಿಂದ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿದ ಪರಿಣಾಮ ದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈ, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 100.21 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್ ಗೆ 91.47 ರೂಪಾಯಿಗೆ ಹೆಚ್ಚಳವಾಗಿದೆ. ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ ಲೀಟರ್ ಗೆ 115.04 ರೂಪಾಯಿಗೆ ಮಾರಾಟವಾಗುತ್ತಿದ್ದು, ಡೀಸೆಲ್ ಬೆಲೆ ಲೀಟರ್ ಗೆ 99.25ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 105.62 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 89.70 ರೂಪಾಯಿಗೆ ಹೆಚ್ಚಳವಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 76 ಪೈಸೆಯಷ್ಟು ಹೆಚ್ಚಳವಾಗಿದ್ದು, ಇಲ್ಲಿ ಪೆಟ್ರೋಲ್ ಬೆಲೆ 105.94 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಬೆಲೆ ಲೀಟರ್ ಗೆ 96 ರೂಪಾಯಿ. ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 109.68 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 94.62 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ರಷ್ಯಾ, ಉಕ್ರೇನ್ ನಡುವಿನ ಯುದ್ಧ ಮುಂದುವರಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ಭಾರತ ಅತೀ ಹೆಚ್ಚು ತೈಲ ಆಮದು ಮಾಡಿಕೊಳ್ಳುತ್ತಿರುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.