ಏ. 3ರಂದು ರಾಜ್ಯ ಕಾರ್ಯಕಾರಿಣಿ


Team Udayavani, Mar 29, 2022, 2:37 PM IST

journalist

ದಾವಣಗೆರೆ: ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಏ. 3ರಂದು ದಾವಣಗೆರೆಯ ಎಂಸಿಸಿ ಎ ಬ್ಲಾಕ್‌ನಲ್ಲಿರುವ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪತ್ರಿಕಾ ವಿತರಕರು ಎದುರಿಸುತ್ತಿರುವ ಸಮಸ್ಯೆ, ವಿವಿಧ ಬೇಡಿಕೆ, ಗುರುತಿನಚೀಟಿ ವಿತರಣೆ ಮುಂತಾದ ವಿಷಯಗಳ ಬಗ್ಗೆ ರಾಜ್ಯ ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಲಾಗುವುದು ಎಂದರು. ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಪತ್ರಿಕಾ ವಿತರಕರು ಹಾಗೂ 3.5 ಲಕ್ಷದಷ್ಟು ಅವರ ಅವಲಂಬಿತರಿದ್ದಾರೆ. ಮುಖ್ಯಮಂತ್ರಿಯಾಗಿ ಎಲ್ಲರ ಸುದ್ದಿಗಳನ್ನು ಮಳೆ, ಬಿಸಿಲು, ಚಳಿ, ಏನನ್ನೂ ನೋಡದೆ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿರುವ ಪತ್ರಿಕಾ ವಿತರಕರ ಬಗ್ಗೆ ಯಾವುದೇ ಸರ್ಕಾರ ಗಮನ ಹರಿಸಿಲ್ಲ ಎಂದು ದೂರಿದರು.

ದಾವಣಗೆರೆ ಒಳಗೊಂಡಂತೆ ಅನೇಕ ಕಡೆ ಪತ್ರಿಕಾ ವಿತರಕರಿಗೆ ಸೂಕ್ತ ಸ್ಥಳದ ಲಭ್ಯತೆ ಇಲ್ಲ. ಮಳೆಗಾಲದಲ್ಲಿ ಪತ್ರಿಕೆ ವಿತರಣೆ ಮಾಡುವುದು ಬಹಳ ಕಷ್ಟವಾಗುತ್ತದೆ. ಪತ್ರಿಕಾ ವಿತರಕರಿಗೆ ಸೂಕ್ತ ಸ್ಥಳ ಇತರೆ ಸವಲತ್ತು ಒದಗಿಸಬೇಕು. ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿಗಾಗಿ ರಾಜ್ಯದ ಪ್ರತಿ ಜಿಲ್ಲೆಗೆ 1 ಕೋಟಿಯಂತೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

2018-19ರಲ್ಲಿ ಹಣಕಾಸು ಸಚಿವರೂ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪತ್ರಿಕಾ ವಿತರಕ ರಿಗಾಗಿ 2 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆದರೆ ಯಾವ ಇಲಾಖೆಯಡಿ ಘೋಷಣೆ ಮಾಡಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆಯೇ ಇಲ್ಲ. ಹಣಕಾಸು, ವಾರ್ತಾ ಇಲಾಖೆ ಜೊತೆಗೆ ಮಾಧ್ಯಮ ಅಕಾಡೆಮಿಗೆ ಪತ್ರ ಬರೆಯಲಾಗಿದೆ. ಸ್ಪಷ್ಟತೆ ಇಲ್ಲದ ಕಾರಣಕ್ಕೆ ಅನುದಾನ ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಈ ಬಗ್ಗೆಯೂ ಸ್ಪಷ್ಟನೆ ನೀಡಬೇಕು ಎಂದರು.

ಪತ್ರಿಕಾ ವಿತರಕರ ಹಲವಾರು ಬೇಡಿಕೆಗಳಿವೆ. ಮೊದಲು ಗುರುತಿನಪತ್ರದ ಮೂಲಕ ನಿಖರ ಸಂಖ್ಯೆಯ ಮಾಹಿತಿ ಪಡೆಯಲಾಗುವುದು. ನಂತರ ಹಂತ ಹಂತವಾಗಿ ಬೇಡಿಕೆ ಈಡೇರಿಕೆಗೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಒಕ್ಕೂಟದ ಚಂದ್ರು, ರಘು ಆಚಾರ್‌, ಅರುಣ್‌ ಕುಮಾರ್‌, ರಮೇಶ್‌ ಜೆ. ವತನ್‌, ತಿಪ್ಪೇಸ್ವಾಮಿ, ವಾಸು, ಮಂಜುನಾಥ್‌, ನಿಂಗಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.