ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಖ್ಯಾತ ನಟ ಪವನ್ ಕಲ್ಯಾಣ್
ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಬಿಸಾಡಬೇಡಿ ಎಂದು ಮನವಿ
Team Udayavani, Mar 29, 2022, 4:05 PM IST
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು.
ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ ಸುಬ್ರಹ್ಮಣ್ಯ ದೇವರಿಗೆ ಸಂಬಂಧ ಪಟ್ಟ ಮರದ ಸಸಿಯನ್ನು ನೆಟ್ಟರು.
ದೇವಾಲಯದ 500ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, ಎಲ್ಲಾ ದೇವಾಲಯದವರು ಕೂಡ ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇಲ್ಲಿ ಬರುವ ಭಕ್ತಾದಿಗಳು ಆದಷ್ಟು ಪ್ಲಾಸ್ಟಿಕ್ ಕಡಿಮೆ ಬಳಕೆ ಮಾಡಿ. ಇದು ವಿವಿಧ ನಾಗ ಸಂಚಾರದ ಕ್ಷೇತ್ರ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಬಿಸಾಡಿ ಅವುಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.
ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸದಸ್ಯ ಪ್ರಸನ್ನ ದರ್ಬೆ, ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.