ಬೇಡಿಕೆ ಈಡೇರಿಕೆಗೆ ಕಾರ್ಮಿಕರ ಆಗ್ರಹ
ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಆಗ್ರಹಿಸಿ ಸಿಐಟಿಯುನಿಂದ ಪ್ರತಿಭಟನೆ
Team Udayavani, Mar 29, 2022, 6:13 PM IST
ಕೊಪ್ಪಳ: ದೇಶಾದ್ಯಂತ ದುಡಿಯುವ ಕಾರ್ಮಿಕರ, ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ಜಿಲ್ಲಾ ಸಮಿತಿಯಿಂದ ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಖಾತ್ರಿಪಡಿಸಿ, ವಿದ್ಯುತ್ಛಕಿ ಮಸೂದೆ ಹಿಂಪಡೆಯಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬೇಡಿ. ನರೇಗಾದಲ್ಲಿ ಹೆಚ್ಚಿನ ನಿಧಿ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು. ಎಲ್ಲ ಅನೌಪಚಾರಿಕ ವಲಯದ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಿ ಕಟ್ಟಡ ಕಾರ್ಮಿಕ ಮಂಡಳಿ ಅಕ್ರಮ ತಡೆಗಟ್ಟಿ ಕಾರ್ಮಿಕರ ಸೌಲಭ್ಯಗಳನ್ನು ಹೆಚ್ಚಿಸಬೇಕು. ಅಂಗನವಾಡಿ, ಆಶಾ, ಬಿಸಿಯೂಟ ನೌಕರರಿಗೆ ಸಮಾಜಿಕ ಭದ್ರತೆಯ ಜೊತೆಗೆ ವೇತನ ಖಾತರಿ ಪಡಿಸಬೇಕು ಎಂದು ಒತ್ತಾಯಿಸಲಾಯಿತು.
ಬಿಸಿಯೂಟ ನೌಕರರ ಈಗಿರುವ ವೇತನವನ್ನು 21,000 ರೂ.ಗೆ ಹೆಚ್ಚಿಸಬೇಕು. ಬಾಕಿ ಇರುವ ವೇತನ ಹಾಗೂ ಪ್ರೋತ್ಸಾಹ ಧನವನ್ನು ತಕ್ಷಣ ಪಾವತಿಸಬೇಕು. ಅನಗತ್ಯವಾಗಿ ಬಿಸಿಯೂಟ ನೌಕರರಿಂದ ಮಾಡಿಸುವ ಕೆಲಸಗಳನ್ನು ಕೈಬಿಡಬೇಕು. ಕಳಪೆ ಗುಣಮುಟ್ಟದ ಹಾಗೂ ಕಡಿಮೆ ತೂಕದ ರೇಷನ್ ಪೂರೈಕೆಯಾಗುತ್ತಿದ್ದು, ಆ ಕುರಿತಂತೆ ತನಿಖೆಯಾಗಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಈಗಿರುವ ಬಿಸಿಯೂಟ ನೌಕರರ ಸಂಖ್ಯೆಯನ್ನು ಸಹ ಹೆಚ್ಚಿಸಬೇಕು. ಕೊರೊನಾ ಮಹಾಮಾರಿ ನಡುವೆ ಜನರಿಗೆ ಸೇವೆ ಸಲ್ಲಿಸುತ್ತಿರುವ ಮುಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಗಳನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.
ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಇತರ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಹೂಡಿಕೆಯನ್ನು ಹೆಚ್ಚಿಸುವುದು. ಕೊಪ್ಪಳದ ಇಎಸ್‌ಐ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಬೇಕು. ಇಪಿಎಫ್ ಬಡ್ಡಿದರ ಕಡಿತ ನೀತಿ ಹಿಂತೆಗೆದುಕೊಳ್ಳಬೇಕು. ಸಣ್ಣ ರೈತರು, ಕೈಷಿ ಕಾರ್ಮಿಕರು ಮತ್ತು ಎಲ್ಲಾ ವಲಯದ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 10,000 ರೂ. ಪಿಂಚಣಿ ನಿಗದಿಪಡಿಸಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಮುಂದುವರಿಸಬೇಕು ಎಂದು ಒತ್ತಾಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.