ಮತ್ತೆ ಏರಿಕೆ ಕಂಡ ತೈಲ ಬೆಲೆ; 9 ದಿನದಲ್ಲಿ 5.60 ರೂ. ಏರಿಕೆ ಕಂಡ ಪೆಟ್ರೋಲ್
Team Udayavani, Mar 30, 2022, 8:43 AM IST
ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಪ್ರತಿ ಲೀಟರ್ ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಲೀಟರ್‌ಗೆ 5.60 ರೂ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ಈ ಹಿಂದೆ 100.21 ರೂ ದಿಂದ 101.01 ರೂ. ಗೆ ಏರಿಕೆಯಾಗಿದ್ದರೆ, ಡೀಸೆಲ್ ದರಗಳು ಲೀಟರ್ ಗೆ 91.47 ರೂ ದಿಂದ 92.27 ರೂ. ಗೆ ಏರಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ 84 ಪೈಸೆ ಏರಿಕೆಯಾಗಿದ್ದರೆ, ಡೀಸಲ್ ಬೆಲೆಯಲ್ಲಿ 79 ಪೈಸೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 106.46 ರೂ ಮತ್ತು 90.49 ರೂ ಇದೆ.
ಮುಂಬೈನಲ್ಲಿ 84 ಪೈಸೆ ಮತ್ತು 85 ಪೈಸೆ ಏರಿಕೆಯಾದ ನಂತರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 115.88 ರೂ. ಮತ್ತು 100.10 ರೂ. ತಲುಪಿದೆ.
ಇದನ್ನೂ ಓದಿ:ಭಾರತ-ಶ್ರೀಲಂಕಾ ನಡುವೆ 6 ಒಪ್ಪಂದ; ವಿವಿಧ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಗೆ ಕ್ರಮ
ದೇಶಾದ್ಯಂತ ತೈಲ ದರಗಳನ್ನು ಹೆಚ್ಚಿಸಲಾಗಿದೆ. ಸ್ಥಳೀಯ ತೆರಿಗೆ ದರವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ತೈಲ ಬೆಲೆಯಲ್ಲಿ ಬದಲಾವಣೆಯಾಗುತ್ತದೆ.
ನಾಲ್ಕು ತಿಂಗಳ ಬಳಿಕ ಮಾರ್ಚ್ 22ರಂದು ಮೊದಲ ಬಾರಿಗ ತೈಲ ಬೆಲೆಯಲ್ಲಿ ಏರಿಕೆಯಾಗಿತ್ತು. ನಂತರ 9 ದಿನದಲ್ಲಿ 8 ಬಾರಿ ಬೆಲೆ ಏರಿಕೆ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.