ಚುಚ್ಚು ಮದ್ದು ನೀಡಲಿರುವ ಶಾ: ಏಪ್ರಿಲ್ 11 ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ
ರಾಜ್ಯದ ಚುನಾವಣಾ ಉಸ್ತುವಾರಿ ಅಮಿತ್ ಶಾ?
Team Udayavani, Mar 30, 2022, 11:21 AM IST
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿ ಘಟಕಕ್ಕೆ ಚುಚ್ಚು ಮದ್ದು ನೀಡಲಿದ್ದಾರೆ.ಚುನಾವಣಾ ಸಿದ್ಧತೆಯ ಭಾಗವಾಗಿ ಏಪ್ರೀಲ್ 11 ರಿಂದ ರಾಜ್ಯ ಬಿಜೆಪಿ ನಾಯಕರ ರಾಜ್ಯ ಪ್ರವಾಸಕ್ಕೆ ಅವರು ರೂಪು-ರೇಷೆ ಹಾಕಿಕೊಡಲಿದ್ದಾರೆ.
ಬಿಜೆಪಿ ಉನ್ನತ ಮೂಲಗಳ ಪ್ರಕಾರ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಮೂರು ತಂಡಗಳಾಗಿ ರಾಜ್ಯ ಪ್ರವಾಸ ನಡೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಪೈಕಿ ಒಂದು ತಂಡವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುನ್ನಡೆಸಲಿದ್ದು, ಈ ಸಂಬಂಧ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯಡಿಯೂರಪ್ಪ ಜತೆಗೆ ಮಂಗಳವಾರ ಚರ್ಚೆ ನಡೆಸಿದ್ದಾರೆ.
ಅಮಿತ್ ಶಾ ಅವರು ಬುಧವಾರ ರಾತ್ರಿ 10 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, ಗುರುವಾರ ಬೆಳಗ್ಗೆ ಅರಮನೆ ಮೈದಾನದಲ್ಲಿ ನಡೆಯುವ ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಗುರುವಾರ ರಾತ್ರಿ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು ಅಲ್ಲಿ ಸಂಘಟನೆ ಹಾಗೂ ಸಂಪುಟಕ್ಕೆ ಸಂಬಂಧಪಟ್ಟಂತೆ ಮಹತ್ವದ ವಿಚಾರ ಚರ್ಚೆಗೆ ಬರಲಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಹಲವು ತಿಂಗಳ ಬಳಿಕ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಚುನಾವಣಾ ಉಸ್ತುವಾರಿಯನ್ನು ಅವರೇ ನಿರ್ವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.