ಶಾಸಕ ರೇಣುಕಾಚಾರ್ಯ ವಿರುದ್ದ ಪ್ರತಿಭಟನೆ
Team Udayavani, Mar 30, 2022, 1:16 PM IST
ಸುರಪುರ: ಬೇಡ ಜಂಗಮರ ಹೆಸರಿನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಅವರ ಮಕ್ಕಳು ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂದು ಆರೋಪಿಸಿ ಗಾಂಧಿ ವೃತ್ತದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಸಚಿವರಾಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ, ಶಾಸಕರಾಗಿ ರೇಣುಕಾಚಾರ್ಯ ಅವರು ಸರ್ಕಾರಕ್ಕೆ ಮೋಸ ಮಾಡಿ ತನ್ನ ಸಹೋದರ, ಸಹೋದರಿ ತನ್ನ ಇಬ್ಬರು ಮಕ್ಕಳು ಮತ್ತು ತಾವೂ ಬೇಡ ಜಂಗಮ ಪರಿಶಿಷ್ಟ ಪ್ರಮಾಣ ಪತ್ರ ಪಡೆದಿರುವುದು ಖಂಡನೀಯ ಎಂದರು.
ಪ್ರಮಾಣ ಪತ್ರ ಪಡೆದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಖೊಟ್ಟಿ ಜಾತಿ ಪ್ರಮಾಣ ಪತ್ರ ನೀಡಿರುವ ತಹಶೀಲ್ದಾರ್ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರಿಗೆ ಬರೆದ ಮನವಿಯನ್ನು ಶಿರಸ್ತೇದಾರ ಸೋಮನಾಥ ದೊರೆ ಅವರಿಗೆ ಸಲ್ಲಿಸಿದರು. ಮಾನಪ್ಪ ಬಿಜಾಸಪುರ, ಹನುಮಂತ ಬಾಂಬೆ, ಬುದ್ಧಿವಂತ ನಾಗರಾಳ, ಜಟ್ಟೆಪ್ಪ ನಾಗರಾಳ, ರಾಮಣ್ಣ ಶೆಳ್ಳಗಿ, ಮೂರ್ತಿ ಬೊಮ್ಮನಳ್ಳಿ, ಬಸವರಾಜ ದೊಡ್ಡಮನಿ, ಖಾಜಾ ಹುಸೇನ್ ಗುಡಗುಂಟಿ, ಹುಲಗಪ್ಪ ಜಾಂಗೀರ, ದ್ಯಾವಪ್ಪ ಚಲುವಾದಿ, ಮರಿಲಿಂಗಪ್ಪ ದೇವಿಕೇರಿ, ಮಹೇಶ ಯಾದಗಿರಿ, ಹನೀಫ್ ಗುಡಗುಂಟಿ, ಭೀಮಣ್ಣ ಮಾಲಗತ್ತಿ, ಬನ್ನಪ್ಪ ಕೋನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.