ಬಾಳೆಹೊನ್ನೂರಲ್ಲಿ ಭಾರೀ ಮಳೆ
Team Udayavani, Mar 30, 2022, 5:00 PM IST
ಬಾಳೆಹೊನ್ನೂರು: ಪಟ್ಟಣದ ಸುತ್ತ ಮುತ್ತ ಮಂಗಳವಾರ ಮಧ್ಯಾಹ್ನ ಗುಡುಗು- ಮಿಂಚು, ಸಿಡಿಲು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗಿದೆ. 1ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಹಿನ್ನೆಲೆಯಲ್ಲಿ ಚರಂಡಿಗಳು ತುಂಬಿ ಹರಿದವು. ಪಟ್ಟಣದ ಮುಖ್ಯ ರಸ್ತೆ ಪಕ್ಕದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ವೈಜ್ಞಾನಿಕವಾಗಿ ಬಾಕ್ಸ್ ಚರಂಡಿ ನಿರ್ಮಿಸದ ಹಿನ್ನೆಲೆಯಲ್ಲಿ ಹಳ್ಳದೋಪಾದಿಯಲ್ಲಿ ನೀರು ರಸ್ತೆಯಲ್ಲಿ ಹರಿಯಿತು. ಚರ್ಚ್, ಗಲ್ಲಿ ಹಾಗೂ ಪಂಚಾಯ್ತಿ ಮುಂಭಾಗದಿಂದ ಹರಿದುಬಂದ ನೀರು ಜೆಸಿವೃತ್ತದಲ್ಲಿ ಸಂಗ್ರಹವಾಗಿ ನ.ರಾ. ಪುರ ರಸ್ತೆಯಲ್ಲಿ ಹರಿದ ಪರಿಣಾಮ ಸಂಚಾರಕ್ಕೆ ಅಡಚಣೆಯಾಯಿತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಬಾಕ್ಸ್ ಚರಂಡಿ ನಿರ್ಮಿಸಿದರೂ ಸಹ ಬಾಕ್ಸ್ ಚರಂಡಿಯಲ್ಲಿ ನೀರು ಹರಿಯದೆ ರಸ್ತೆಯಲ್ಲಿ ನೀರು ಹರಿಯಿತು . ಕಳೆದ 3 ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ತಿಳಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಗಮೇಶ್ವರಪೇಟೆ, ಕಡಬಗೆರೆ, ಖಾಂಡ್ಯ, ಬನ್ನೂರು, ಹಲಸೂರು, ಸೀಕೆ ಮುದುಗುಣಿ, ಕಣಬೂರು ಸುತ್ತಾಮುತ್ತ ಭಾರೀ ಮಳೆಯಾಗಿದೆ. ಕಳೆದ 8 ದಿನಗಳಿಂದ ಉತ್ತಮವಾಗಿ ಮಳೆಯಾಗಿದ್ದು ಕಾಫಿ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದರು.
ಇದೀಗ ಸುರಿದ ಭಾರೀ ಮಳೆಯಿಂದ ಕಾಫಿ ಬೀಜ ಕಾಯಿಗಟ್ಟಲು ಸಿದ್ಧವಾಗಿದೆ. ಆದರೆ ಮಳೆಯಿಂದಾಗಿ ಹೂಗಳೆಲ್ಲ ಉದುರಿ ಹೋಗಿದ್ದು, ಮುಂದಿನ ವರ್ಷದ ಕಾಫಿ ಬೀಜ ಉತ್ಪಾದನೆಯಲ್ಲಿ ವ್ಯತ್ಯಯವಾಗಲಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಳೆಬಂದ ಹಿನ್ನೆಲೆಯಲ್ಲಿ ತಂಪು ವಾತಾವರಣ ಸೃಷ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.