ಶಾಸಕ ಹಾಲಪ್ಪ ಸಾಗರದ ಜನತೆಯ ಕ್ಷಮೆ ಕೋರಬೇಕು; ತೀ.ನ. ಶ್ರೀನಿವಾಸ್ ಒತ್ತಾಯ
Team Udayavani, Mar 30, 2022, 4:57 PM IST
ಸಾಗರ: ಪ್ರತಿಷ್ಟಿತ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ 56ನೇ ಸರ್ವಸದಸ್ಯರ ಸಭೆಯಲ್ಲಿ ಶಾಸಕರ ಸಮ್ಮುಖದಲ್ಲಿಯೇ ಇಬ್ಬರು ಪ್ರಮುಖರ ಮೇಲೆ ನಡೆದಿರುವ ಹಲ್ಲೆ ಖಂಡನೀಯ.
ಶಾಸಕರು ಹಲ್ಲೆ ಕುರಿತು ಸಾರ್ವಜನಿಕರಿಗೆ ಸ್ಪಷ್ಟನೆ ನೀಡುವ ಜೊತೆಗೆ ಸಾಗರದ ಜನರ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ಸಭೆಗೆ ವಿಶೇಷ ಆಹ್ವಾನಿತರಾಗಿ ಹೋದವರು. ಸಭೆಯಲ್ಲಿದ್ದು ಗೌರವಯುತವಾಗಿ ಸಭೆ ನಡೆಯುವಂತೆ ನೋಡಿಕೊಳ್ಳಬೇಕಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಂದರ್ಭದಲ್ಲಿ ತಾವೇ ನಿಂತು ಸಮಾಧಾನಪಡಿಸಿ ತಹಬಂದಿಗೆ ತರುವ ಕೆಲಸ ಮಾಡಬೇಕಾಗಿತ್ತು. ಅದನ್ನು ಬಿಟ್ಟು ಹಲ್ಲೆ ನಡೆಯುತ್ತಿದ್ದರೂ ನೋಡಿಕೊಂಡು ಸುಮ್ಮನೆ ಇದ್ದದ್ದು ಅಕ್ಷಮ್ಯ ಅಪರಾಧ ಎಂದರು.
ಶಾಸಕರು ಹೇಗೆ ಹಳೆ ವಿದ್ಯಾರ್ಥಿಯೋ, ನಾನು ಸಹ ಎಲ್‌ಬಿ ಕಾಲೇಜಿನ ಹಳೆಯ ವಿದ್ಯಾರ್ಥಿ. ಶಾಸಕರಾದವರಿಗೆ ಯಾವ ರೀತಿ ಸಭೆಯನ್ನು ನಡೆಸಿಕೊಂಡು ಹೋಗಬೇಕು ಎನ್ನುವ ಕನಿಷ್ಠ ಅರಿವು ಇರಬೇಕಾಗಿತ್ತು. ಆದರೆ ಹರತಾಳು ಹಾಲಪ್ಪ ಹಲ್ಲೆಗೆ ಪ್ರಚೋದನೆ ನೀಡುವಂತೆ ವರ್ತನೆ ಮಾಡಿದ್ದು ನಾಚಿಕೆಗೇಡಿನ ಸಂಗತಿ. ಈ ಘಟನೆಯಿಂದ ಇಡೀ ಸಾಗರದ ಜನರು ರಾಜ್ಯದೆದುರು ತಲೆತಗ್ಗಿಸುವಂತೆ ಆಗಿದೆ. ಇದರ ಜೊತೆಗೆ ಕೆಲವರು ಹಲ್ಲೆ ನಡೆಯುತ್ತಿದ್ದಾಗಲೂ ನೋಡಿಕೊಂಡು ಮೂಕ ಪ್ರೇಕ್ಷಕರಂತೆ ನಿಂತಿದ್ದು ಅವರ ಹೊಣೆಗೇಡಿತನಕ್ಕೆ ಸಾಕ್ಷಿಯಾಗಿದೆ. ಇದೊಂದು ಪೂರ್ವನಿಯೋಜಿತ ಹೊಡೆದಾಟ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ : ಆರ್.ಎನ್.ನಾಯಕ್ ಕೊಲೆ ಕೇಸ್ : ಬನ್ನಂಜೆ ರಾಜಾ ಸೇರಿ 9 ಮಂದಿ ತಪ್ಪಿತಸ್ಥರು
ಘಟನೆಗೆ ಸಂಬಂಧಪಟ್ಟಂತೆ ಹಲ್ಲೆಗೆ ಒಳಗಾದವರು ಪೊಲೀಸರಿಗೆ ದೂರು ನೀಡಿ ಸಾಕಷ್ಟು ದಿನಗಳಾಯಿತು. ಈತನಕ ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲು ಮಾಡದೆ ಇರುವುದು ಪೊಲೀಸ್ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಈಚೆಗೆ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಸರ್ವಸದಸ್ಯರ ಸಭೆಗೂ ಶಾಸಕರ ಕುಮ್ಮಕ್ಕಿನಿಂದ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನುಗ್ಗಿ ಸದಸ್ಯರಲ್ಲದ ೫೦ ಜನರನ್ನು ಕರೆದುಕೊಂಡು ಹೋಗಿ ಗಲಾಟೆ ಮಾಡಿಸಿದ್ದಾರೆ. ಶಾಸಕರು ಎಲ್ಲ ಕಡೆಯೂ ಇರಬೇಕು ಎಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತದೆ. ಸಾಗರದ ಪ್ರಜ್ಞಾವಂತ ನಾಗರೀಕರು ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರ ಇಂತಹ ದಬ್ಬಾಳಿಕೆ, ದೌರ್ಜನ್ಯದ ನಡವಳಿಕೆಗಳು ಮುಂದುವರೆದರೆ ಉಗ್ರವಾದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಮಹ್ಮದ್ ಖಾಸಿಂ, ಸಿದ್ದಪ್ಪ ಕೆ., ಪ್ರೇಮ್ ಸಿಂಗ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.